ಎಲ್ಲ ವರ್ಗದ ಜನರ ಬಗ್ಗೆ ಕಾಳಜಿ ಹೊಂದಿದ್ದ ಡಾ.ಮನಮೋಹನ್‌ಸಿಂಗ್: ಎನ್.ಜೆ.ರಾಜೇಶ್

KannadaprabhaNewsNetwork |  
Published : Dec 29, 2024, 01:20 AM IST
28ಕೆಎಂಎನ್ ಡಿ17 | Kannada Prabha

ಸಾರಾಂಶ

ಹೆಚ್ಚು ಮಾತನಾಡದೆ ಸೌಮ್ಯ ಸ್ವಭಾವ ಮತ್ತು ಕ್ರಿಯಾಶೀಲತೆ ಮೂಲಕ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ರಾಷ್ಟ್ರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಅವರ ಆದರ್ಶ ಮತ್ತು ಅಭಿವೃದ್ಧಿಪರ ಚಿಂತನೆಗಳನ್ನು ಇಂದಿನ ರಾಜಕಾರಣಿಗಳು ಪಾಲನೆ ಮಾಡಬೇಕಿದೆ. ಅವರ ನಿಧನದಿಂದಾಗಿ ದೇಶಕ್ಕೆ ಅಪಾರ ನಷ್ಟವಾಗಿದೆ. ಮನಮೋಹನ್‌ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.

ಕನ್ನಡಪ್ರಭ ವಾರ್ತೆ ನಾಗಮಂಗಲ

ರಾಷ್ಟ್ರದ ಎಲ್ಲ ವರ್ಗದ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಡಾ.ಮನಮೋಹನ್‌ಸಿಂಗ್ ಅವರು 10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರು. ಅಂತಹ ವ್ಯಕ್ತಿಯನ್ನು ಕಳೆದುಕೊಂಡಿರುವುದು ದೇಶ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್ ತಿಳಿಸಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್‌ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಸರಳ ವ್ಯಕ್ತಿತ್ವ ಹೊಂದಿದ್ದ ಡಾ.ಮನಮೋಹನ್‌ಸಿಂಗ್ ಅವರು ಹಣಕಾಸು ಸಚಿವರಾಗಿ ಮುಕ್ತ ಆರ್ಥಿಕ ನೀತಿ ಮೂಲಕ ದೇಶದ ಅಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಿದ್ದರು. ಅವರಲ್ಲಿದ್ದ ಅಪಾರ ಜ್ಞಾನದಿಂದಾಗಿ ಐಟಿ ಬಿಟಿ ಕ್ರಾಂತಿಗೆ ನಾಂದಿ ಹಾಡುವ ಮೂಲಕ ಇಡೀ ವಿಶ್ವವೇ ಭಾರತದತ್ತ ತಿರುಗಿನೋಡುವಂತೆ ಮಾಡಿದ್ದರು ಎಂದು ಬಣ್ಣಿಸಿದರು.

ರಾಜ್ಯ ಸಾವಯವ ಕೃಷಿ ಉನ್ನತ ಸಮಿತಿ ಮಾಜಿ ಉಪಾಧ್ಯಕ್ಷ ಎಚ್.ಟಿ.ಕೃಷ್ಣೇಗೌಡ ಮಾತನಾಡಿ, ರಾಷ್ಟ್ರಕಂಡ ಶ್ರೇಷ್ಠ ಆರ್ಥಿಕ ತಜ್ಞ ಸರಳ ಸಜ್ಜನಿಕೆಯ ವ್ಯಕ್ತಿತ್ವವುಳ್ಳ ಡಾ.ಮನಮೋಹನ್‌ಸಿಂಗ್ ಅವರು ಅಭಿವೃದ್ಧಿ ವಿಚಾರದಲ್ಲಿ ದೇಶಕ್ಕೆ ನೀಡಿರುವ ಕೊಡುಗೆ ಅಪಾರ ಎಂದರು.

ಹೆಚ್ಚು ಮಾತನಾಡದೆ ಸೌಮ್ಯ ಸ್ವಭಾವ ಮತ್ತು ಕ್ರಿಯಾಶೀಲತೆ ಮೂಲಕ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ರಾಷ್ಟ್ರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಅವರ ಆದರ್ಶ ಮತ್ತು ಅಭಿವೃದ್ಧಿಪರ ಚಿಂತನೆಗಳನ್ನು ಇಂದಿನ ರಾಜಕಾರಣಿಗಳು ಪಾಲನೆ ಮಾಡಬೇಕಿದೆ. ಅವರ ನಿಧನದಿಂದಾಗಿ ದೇಶಕ್ಕೆ ಅಪಾರ ನಷ್ಟವಾಗಿದೆ. ಮನಮೋಹನ್‌ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದರು.

ಇದಕ್ಕೂ ಮುನ್ನ ಡಾ.ಮನಮೋಹನ್‌ಸಿಂಗ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಮೌನಾಚರಣೆ ಮೂಲಕ ಸಂತಾಪ ಸೂಚಿಸಿದರು.

ಪುರಸಭೆ ಅಧ್ಯಕ್ಷ ಅಲಿ ಅನ್ಸರ್‌ಪಾಷ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ವಿ.ದಿನೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಗಿರೀಶ್, ಉಪಾಧ್ಯಕ್ಷ ಡಿ.ಬಿ.ರಾಜಯ್ಯ, ಮಾಜಿ ಅಧ್ಯಕ್ಷ ಅಲ್ಪಹಳ್ಳಿ ಡಿ.ಕೃಷ್ಣೇಗೌಡ, ಪುರಸಭೆ ಸದಸ್ಯರಾದ ರಿಜ್ವಾನ್‌ಪಾಷ, ಸಂಪತ್‌ಕುಮಾರ್, ಶಿವಪ್ರಸಾದ್, ಮುಖಂಡರಾದ ಕೊಣನೂರು ಹನುಮಂತು, ಆರ್.ಕೃಷ್ಣೇಗೌಡ, ಮರಿಸ್ವಾಮಿ, ಡಿ.ಕೆ.ರಾಜೇಗೌಡ, ಅಶೋಕ್, ಹನುಮಂತಯ್ಯ, ರಾಮು ಸೇರಿದಂತೆ ಹಲವರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ