ಸ್ವಂತಸೂರಿನ ಕನಸು ಕಂಡವರ ಪರವಾಗಿ ಸದನದಲ್ಲಿ ಧ್ವನಿ ಎತ್ತಿದ ಡಾ ಮಂತರ್ ಗೌಡ

KannadaprabhaNewsNetwork |  
Published : Mar 27, 2026, 02:30 AM IST
 | Kannada Prabha

ಸಾರಾಂಶ

ಸರ್ಕಾರಿ ಪೈಸಾರಿ ಜಾಗದಲ್ಲಿ ಮನೆಕಟ್ಟಿಕೊಂಡು ಹಕ್ಕು ಪತ್ರ ಪಡೆಯಲು ಅರ್ಜಿ ಸಲ್ಲಿಸಿ ವಿವಿಧ ಕಾರಣಕ್ಕೆ ತಿರಸ್ಕೃತ ಗೊಂಡು ನಿರಾಶೆ ಹೊಂದಿದ ನಗರ ಪ್ರದೇಶದ ಸುಮಾರು 1500 ಕ್ಕೂ ಹೆಚ್ಚು ಕುಟುಂಬಗಳಿಗೆ ಹಾಗೂ ಗ್ರಾಮೀಣ ಪ್ರದೇಶದ 11 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ನ್ಯಾಯ ದೊರಕಿಸುವ ಪ್ರಯತ್ನಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಪ್ರಯತ್ನ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸರ್ಕಾರಿ ಪೈಸಾರಿ ಜಾಗದಲ್ಲಿ ಮನೆಕಟ್ಟಿಕೊಂಡು ಹಕ್ಕು ಪತ್ರ ಪಡೆಯಲು ಅರ್ಜಿ ಸಲ್ಲಿಸಿ ವಿವಿಧ ಕಾರಣಕ್ಕೆ ತಿರಸ್ಕೃತ ಗೊಂಡು ನಿರಾಶೆ ಹೊಂದಿದ ನಗರ ಪ್ರದೇಶದ ಸುಮಾರು 1500 ಕ್ಕೂ ಹೆಚ್ಚು ಕುಟುಂಬಗಳಿಗೆ ಹಾಗೂ ಗ್ರಾಮೀಣ ಪ್ರದೇಶದ 11 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ನ್ಯಾಯ ದೊರಕಿಸುವ ಪ್ರಯತ್ನಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಪ್ರಯತ್ನ ಮಾಡಿದ್ದಾರೆ. ಮಡಿಕೇರಿ ವಿಧಾನ ಸಭಾ ಕ್ಷೇತ್ರದಲ್ಲಿ 2015 ರಿಂದ 2022 ರ ವರೆಗೆ 94 ಸಿ.ಸಿ. ಅಡಿಯಲ್ಲಿ 1500 ಕ್ಕೂ ಹೆಚ್ಚು ಜನರು ಮತ್ತು 94 ಸಿ ಅಡಿ 11 ಸಾವಿರಕ್ಕೂ ಹೆಚ್ಚು ಜನರು ಸಲ್ಲಿಸಿದ ಅರ್ಜಿಗಳು ತಿರಸ್ಕರಿಸಿತವಾಗಿದ್ದವು. ಕ್ಷೇತ್ರ ವ್ಯಾಪ್ತಿಯಲ್ಲಿ ಜನರ ಬಳಿ ಶಾಸಕ ಡಾ ಮಂತರ್ ಗೌಡ ತೆರಳಿದ ಸಂದರ್ಭದಲ್ಲಿ ಬಹಳಷ್ಟು ಜನರು ನ್ಯಾಯ ಒದಗಿಸುವಂತೆ ಶಾಸಕರಲ್ಲಿ ಮನವಿ ಸಲ್ಲಿಸುತ್ತಿದ್ದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಡಾ ಮಂತರ್ ಗೌಡ ಸದನದಲ್ಲಿ ಈ ವಿಚಾರದ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ತಂದಿದ್ದಾರೆ. ಹಿಂದೆ ಸಲ್ಲಿಸಿದ ಅರ್ಜಿಯಲ್ಲಿ ಅರಣ್ಯದ ಜಾಗವನ್ನು ಹೊರತುಪಡಿಸಿ ಪೈಸಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಸಕ್ರಮಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಿ: ಅಶೋಕ ಸಂಗಪ್ಪ
ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯ ನೀಡಿ: ವೀಣಾ ಅಠವಾಲೆ