ಡಾ. ಮೋಹನ ಆಳ್ವರಿಗೆ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ಪ್ರದಾನ

KannadaprabhaNewsNetwork |  
Published : Aug 26, 2025, 02:00 AM IST
ಡಾ.ಎಂ.ಮೋಹನ ಆಳ್ವಗೆ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ಪ್ರದಾನ ಮಾಡಲಾಯಿತು. | Kannada Prabha

ಸಾರಾಂಶ

ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಸ್ವೀಕರಿಸಿದರು.

ಮಂಗಳೂರು: ಎಲ್ಲ ಜಾತಿ, ಮತ, ಧರ್ಮದವರನ್ನು ಗೌರವಿಸುವ ಸಾಮರಸ್ಯದ ಮನೋಭಾವನೆ ಬೆಳೆಸಿಕೊಂಡಿರುವುದೇ ಇಂದು ಬದುಕಿಗೆ ಶಕ್ತಿ ತುಂಬಿದೆ. ಉತ್ತಮ ಸಂಸ್ಕಾರದ ಜತೆಗೆ ಸಾಮರ್ಥ್ಯ ಅರಿತು ದುಡಿದ ಪರಿಣಾಮ ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ ಚೇರ್ಮನ್ ಡಾ.ಎಂ. ಮೋಹನ ಆಳ್ವ ಹೇಳಿದ್ದಾರೆ.ನಗರದ ಎ.ಜೆ. ಗ್ರ್ಯಾಂಡ್ ಸಭಾಂಗಣದಲ್ಲಿ ನಡೆದ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಸ್ವೀಕರಿಸಿ ಅವರು ಮಾತನಾಡಿದರು.

ಟ್ರಸ್ಟ್‌ನ ಮಾಜಿ ಅಧ್ಯಕ್ಷ ಡಾ.ಎಂ. ಶಾಂತಾರಾಮ ಶೆಟ್ಟಿ ಮಾತನಾಡಿ, ಡಾ.ಎಂ. ಮೋಹನ ಆಳ್ವ ಅವರ ಸಾಧನೆ ಬಂಟ ಸಮಾಜಕ್ಕೆ ಪ್ರೇರಣಾ ಶಕ್ತಿಯಾಗಿದೆ ಎಂದರು.

ಹಿರಿಯ ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಅವರಿಗೆ ದಿ.ಡಾ.ಡಿ.ಕೆ. ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಇಂದಿರಾ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ 24ನೇ ರ್‍ಯಾಂಕ್ ಪಡೆದ ನಿಶ್ಚಲ್ ರೈ ಅವರಿಗೆ ಸಿಎ ವೈ.ಆರ್. ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಹಾಗೂ ರಕ್ಷಾ. ಆರ್.ಶೆಟ್ಟಿ ಅವರಿಗೆ ಸಿಎ ಗೋಪಾಲ್ ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ವಿತರಿಸಲಾಯಿತು.

ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸುಧೀರ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಕೆ.ಎಸ್. ಹೆಗ್ಡೆ, ಯೋಜನಾ ನಿರ್ದೇಶಕ ಡಾ.ಬಿ. ಸಂಜೀವ ರೈ, ಖಜಾಂಚಿ ಸುದೇಶ್ ಕುಮಾರ್ ರೈ, ಮೀನಾಕ್ಷಿ ಆಳ್ವ ಇದ್ದರು. ಪಳ್ಳಿ ಕಿಶನ್ ಹೆಗ್ಡೆ, ಕೆ.ಎಂ.ಶೆಟ್ಟಿ ಮತ್ತು ಜ್ಯೋತಿ ಪ್ರಸಾದ್ ಹೆಗ್ಡೆ ಸನ್ಮಾನಿತರನ್ನು ಪರಿಚಯಿಸಿದರು. ಜೈರಾಜ್ ಬಿ.ರೈ ವಂದಿಸಿದರು. ಕಳ್ಳಿಗೆ ತಾರನಾಥ ಶೆಟ್ಟಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಂಧಿ ಬಗ್ಗೆ ನಿರಂತರ ಅಪಪ್ರಚಾರ ಸಲ್ಲ
33 ಅಂಕ ನೀಡಿಕೆ ಬಗ್ಗೆ ಬರಗೂರು ಅಸಮಾಧಾನ