ಮಂಗಳೂರಲ್ಲಿ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ ಡಾ.ಪರಮೇಶ್ವರ್‌

KannadaprabhaNewsNetwork |  
Published : Aug 26, 2025, 02:00 AM ISTUpdated : Aug 26, 2025, 12:41 PM IST
Dr G Parameshwara

ಸಾರಾಂಶ

ಗೃಹ ಸಚಿವ ಡಾ. ಪರಮೇಶ್ವರ್ ಶನಿವಾರ ರಾತ್ರಿ ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಕೆಲವೊಂದು ನಿರ್ದೇಶನಗಳನ್ನು ನೀಡಿದರು.

ಮಂಗಳೂರು: ಗೃಹ ಸಚಿವ ಡಾ. ಪರಮೇಶ್ವರ್‌ ಅವರು ಶನಿವಾರ ರಾತ್ರಿ ಮಂಗಳೂರು ನಗರಕ್ಕೆ ಭೇಟಿ ನೀಡಿ ಕಮಿಷನರ್‌ ಕಚೇರಿಯಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಹಿರಿಯ ಪೊಲೀಸ್‌ ಅಧಿಕಾರಿಗಳ ಜೊತೆ ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಸಭೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದಿರುವ ಪ್ರಮುಖ ಘಟನೆಗಳಾದ ಧರ್ಮಸ್ಥಳ ಪ್ರಕರಣ, ಹಬ್ಬಗಳಿಗೆ ಹಾಕಲಾದ ಸಮಯ ಮಿತಿ ನಿರ್ಬಂಧದ ಬಗ್ಗೆ ವಿಧಾನಸಭೆಯಲ್ಲಿ ನಡೆದ ಚರ್ಚೆ ಹಾಗೂ ಅದರ ಪರಿಹಾರದ ಕ್ರಮಗಳು, ದಕ್ಷಿಣ ಕನ್ನಡ, ಕಮಿಷನರೇಟ್‌, ಉಡುಪಿ ಜಿಲ್ಲೆಗಳ ಕಾನೂನು ಸುವ್ಯವಸ್ಥೆ, ವಿಶೇಷ ಕಾರ್ಯಪಡೆಯ ಕಾರ್ಯಾಚರಣೆಗಳು, ಡ್ರಗ್ಸ್‌ ಜಾಲದ ವಿರುದ್ಧ ಪೊಲೀಸರು ಕೈಗೊಂಡಿರುವ ಕಾರ್ಯಾಚರಣೆಗಳು, ಕೆಂಪು ಕಲ್ಲು ಮತ್ತು ಮರಳುಗಾರಿಕೆ ವಿಚಾರಗಳ ಕುರಿತು ಪೊಲೀಸ್‌ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು.

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಕೆಲವೊಂದು ನಿರ್ದೇಶನಗಳನ್ನು ನೀಡಿದರು. ಜಿಲ್ಲೆಯಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಕೈಗೊಳ್ಳುವ ನಿರ್ಧಾರಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಪಶ್ಚಿಮ ವಲಯ ಐಜಿಪಿ ಅಮಿತ್‌ ಸಿಂಗ್‌, ಮಂಗಳೂರು ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ, ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ., ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌, ನಗರ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್‌ ಎಚ್‌.ಎನ್‌., ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ರವಿಶಂಕರ್‌ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ