ಕ್ರೀಡೆಯಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಡಾ.ಪ್ರಭಾ ಕರೆ

KannadaprabhaNewsNetwork | Published : Jan 7, 2024 1:30 AM

ಸಾರಾಂಶ

ಖೇಲೋ ಇಂಡಿಯಾದಡಿ ದಾವಣಗೆರೆಯಲ್ಲಿ ರಾಜ್ಯಮಟ್ಟದ ಮಹಿಳಾ ಫುಟ್‌ಬಾಲ್ ಪಂದ್ಯಾವಳಿ ಆರಂಭವಾಗಿದ್ದು, ವಿದ್ಯಾರ್ಥಿನಿಯರು, ಯುವತಿಯರು ಕ್ರೀಡೆಯಲ್ಲಿ ಸಾಧನೆ ಮೆರೆಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಎಸ್ಸೆಸ್‌ ಕೇರ್ ಟ್ರಸ್ಟ್‌ನ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ ಕರೆ ನೀಡಿದರು.

ಖೇಲೋ ಇಂಡಿಯಾದಡಿ ರಾಜ್ಯಮಟ್ಟದ ಮಹಿಳಾ ಫುಟ್‌ಬಾಲ್ ಟೂರ್ನಿಗೆ ಚಾಲನೆಕನ್ನಡಪ್ರಭ ವಾರ್ತೆ ದಾವಣಗೆರೆ

ಖೇಲೋ ಇಂಡಿಯಾದಡಿ ದಾವಣಗೆರೆಯಲ್ಲಿ ರಾಜ್ಯಮಟ್ಟದ ಮಹಿಳಾ ಫುಟ್‌ಬಾಲ್ ಪಂದ್ಯಾವಳಿ ಆರಂಭವಾಗಿದ್ದು, ವಿದ್ಯಾರ್ಥಿನಿಯರು, ಯುವತಿಯರು ಕ್ರೀಡೆಯಲ್ಲಿ ಸಾಧನೆ ಮೆರೆಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಎಸ್ಸೆಸ್‌ ಕೇರ್ ಟ್ರಸ್ಟ್‌ನ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ ಕರೆ ನೀಡಿದರು. ನಗರದ ಲೂರ್ಡ್ಸ್‌ ಬಾಲಕರ ಶಾಲಾ ಮೈದಾನದಲ್ಲಿ ಶನಿವಾರದಿಂದ ಫೆ.10ರವರೆಗೆ ಪ್ರತಿ ಶನಿವಾರ, ಭಾನುವಾರ ಹೊನಲು-ಬೆಳಕಿನ ರಾಜ್ಯಮಟ್ಟದ ಮಹಿಳಾ ಫುಟ್‌ಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿನ ನಡೆಯುವ ಫುಟ್‌ಬಾಲ್ ಪಂದ್ಯಾವಳಿ ನಿಮ್ಮಭವಿಷ್ಯಕ್ಕೆ ದಾರಿಯಾಗಲಿ ಎಂದರು. ಮಹಿಳೆಯರು ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ. ಇಂತಹ ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರಿಂದ ಆತ್ಮವಿಶ್ವಾಸ ಹೆಚ್ಚಳವಾಗುತ್ತದೆ, ಸಾಧನೆ ಮಾಡಬೇಕೆಂಬ ತುಡಿತ ಹೆಚ್ಚುತ್ತದೆ. ಸೋಲು-ಗೆಲುವನ್ನು ಸಮಾನವಾಗಿ ಕಾಣುವಂತಹ ಸಮಚಿತ್ತವನ್ನು ಕ್ರೀಡೆಯು ಪ್ರತಿಯೊಬ್ಬ ಕ್ರೀಡಾಪಟುಗಳಿಗೆ ಕಲಿಸಿಕೊಡುತ್ತದೆ ಎಂದು ಅವರು ತಿಳಿಸಿದರು. ಸಾಮಾನ್ಯವಾಗಿ ಮಹಿಳೆಯರು ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಕಡಿಮೆ. ಯಾವುದೇ ಕಾರಣಕ್ಕೂ ಕ್ರೀಡಾಭ್ಯಾಸ, ಕ್ರೀಡಾ ಚಟುವಟಿಕೆಯಿಂದ ದೂರ ಇರಬೇಡಿ. ಇಂತಹ ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಾಧನೆ ಮೆರೆಯಬೇಕು. ಕ್ರೀಡಾಭ್ಯಾಸದಿಂದ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳವುದಕ್ಕೂ ಸಾಧ್ಯವಿದೆಎಂದು ಅವರು ಹೇಳಿದರು. ಉಪ ವಿಭಾಗಾಧಿಕಾರಿ ದುರ್ಗಾಶ್ರೀ ಮಾತನಾಡಿ, ಕ್ರೀಡೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಖೇಲೋ ಇಂಡಿಯಾದಡಿ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಮಹಿಳೆಯರು ಯಾವುದೇ ಹಿಂಜರಿಕೆ ಇಲ್ಲದೇ, ಆತ್ಮವಿಶ್ವಾಸದಿಂದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಸ್ಪರ್ಧೆಯಲ್ಲಿ ಗೆಲುವು, ಸೋಲು ಮುಖ್ಯವಲ್ಲ. ಪಾಲ್ಗೊಳ್ಳುವುದು ಮುಖ್ಯವಾಗುತ್ತದೆ ಎಂದರು. ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ, ಶಾಲಾ-ಕಾಲೇಜು ವಿದ್ಯಾರ್ಥಿನಿಯಾಗಿದ್ದಾಗ ತಾವೂ ಸಹ ಉತ್ತಮ ಕ್ರೀಡಾಪಟುವಾಗಿದ್ದು, ಈ ಕ್ರೀಡಾಕೂಟ, ಪಾಲ್ಗೊಂಡಿರುವ ಕ್ರೀಡಾಪಟುಗಳನ್ನು ನೋಡಿದ ತಕ್ಷಣ ನನ್ನ ವಿದ್ಯಾರ್ಥಿ ಜೀವನದ ಕ್ರೀಡಾ ಚಟುವಟಿಕೆ, ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕ್ಷಣಗಳು ನೆನಪಿಗೆ ಬರುತ್ತಿವೆ ಎಂದು ತಿಳಿಸಿದರು. ಜಿಲ್ಲಾ ಫುಟ್‌ಬಾಲ್ ಅಸೋಸಿಯೇಷನ್ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಮಾತನಾಡಿ, ಹಿಂದೆ ಎಸ್ಸೆಸ್ ಮಲ್ಲಿಕಾರ್ಜುನ ಕ್ರೀಡಾ ಸಚಿವರಿದ್ದಾಗ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿದ್ದು ಇಂದಿಗೂ ಜನ ಮಾನಸದಲ್ಲಿದೆ. ಸ್ವತಃ ಕ್ರೀಡಾಪಟುವಾಗಿರುವ ಎಸ್ಸೆಸ್ಸೆಂ ಸದಾ ಕ್ರೀಡಾಪಟುಗಳಿಗೆ, ಕ್ರೀಡಾಸ್ಪರ್ಧೆ, ಕ್ರೀಡಾಕೂಟಗಳಿಗೆ ಪ್ರೋತ್ಸಾಹಿಸಿಕೊಂಡು ಬಂದಿದ್ದಾರೆ ಎಂದು ಹೇಳಿದರು. ಬಿಇಓ ಪುಷ್ಪಾಲತಾ, ಮಾಜಿ ಮೇಯರ್ ಅನಿತಾಬಾಯಿ ಮಾಲತೇಶ, ವನಿತಾ ಸಮಾಜದ ಲತಿಕಾ ದಿನೇಶ್ ಶೆಟ್ಟಿ, ಜಿಲ್ಲಾ ಪುಟ್ಬಾಲ್ ಅಸೋಸಿಯೇಷನ್‍ನ ಪ್ರಧಾನ ಕಾರ್ಯದರ್ಶಿ ಅಲ್ಲಾವಲ್ಲಿ ಮುಜಾಹಿದ್ ಖಾನ್, ಮಹಮದ್ ರಫೀಕ್, ಎಸ್.ಕೆ.ಚಂದ್ರಶೇಖರ, ಅಶ್ರಫ್ ಅಲಿ, ಡಿ.ಎಸ್.ಅಲ್ಲಾಭಕ್ಷಿ, ಕಲೀಲ್ ಖಾಜಿ, ಡೇವಿಡ್ ಪ್ರಸನ್ನ, ಸೈಯದ್ ಖಾಲಿದ್, ಅಹ್ಮದ್ ಮುಜ್ತಾಬ್, ಜಾನ್ ಫರ್ನಾಂಡೀಸ್, ಜೆ..ಜೆ.ಮೈನುದ್ದೀನ್, ಅಬ್ದುಲ್ ರಬ್ಬಾನಿ ಇತರರು ಇದ್ದರು.

Share this article