1 ರಂದು ಡಾ.ಪ್ರಭಾಕರ ಕೋರೆ ೭೯ನೇ ಹುಟ್ಟು ಹಬ್ಬ

KannadaprabhaNewsNetwork |  
Published : Jul 29, 2026, 03:00 AM IST
ಚಿಕ್ಕೋಡಿ | Kannada Prabha

ಸಾರಾಂಶ

ಆ.೧ ರಂದು ಪದ್ಮಶ್ರೀ ಡಾ.ಪ್ರಭಾಕರ ಕೋರೆ ೭೯ನೇ ಹುಟ್ಟು ಹಬ್ಬದ ಅಂಗವಾಗಿ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಅಂಕಲಿ ಗ್ರಾಮದಲ್ಲಿ ವಿವಿಧ ಸಾಮಾಜಿಕ ಹಾಗೂ ಮನರಂಜನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಾ.ಪ್ರಭಾಕರಣ್ಣಾ ಕೋರೆ ಹುಟ್ಟುಹಬ್ಬ ಆಚರಣಾ ಸಮಿತಿಯ ಅಧ್ಯಕ್ಷ ಮತ್ತು ಕೆಎಲ್ಇ ಸಂಸ್ಥೆಯ ನಿರ್ದೇಶಕ ಬಿ.ಆರ್.ಪಾಟೀಲ್ ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಆ.೧ ರಂದು ಪದ್ಮಶ್ರೀ ಡಾ.ಪ್ರಭಾಕರ ಕೋರೆ ೭೯ನೇ ಹುಟ್ಟು ಹಬ್ಬದ ಅಂಗವಾಗಿ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಅಂಕಲಿ ಗ್ರಾಮದಲ್ಲಿ ವಿವಿಧ ಸಾಮಾಜಿಕ ಹಾಗೂ ಮನರಂಜನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಾ.ಪ್ರಭಾಕರಣ್ಣಾ ಕೋರೆ ಹುಟ್ಟುಹಬ್ಬ ಆಚರಣಾ ಸಮಿತಿಯ ಅಧ್ಯಕ್ಷ ಮತ್ತು ಕೆಎಲ್ಇ ಸಂಸ್ಥೆಯ ನಿರ್ದೇಶಕ ಬಿ.ಆರ್.ಪಾಟೀಲ್ ಹೇಳಿದರು.

ತಾಲೂಕಿನ ಅಂಕಲಿ ಗ್ರಾಮದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಚಿಕ್ಕೋಡಿ, ಶಿವಶಕ್ತಿ ಶುಗರ್ ಲಿಮಿಟೆಡ್ ಸೌದತ್ತಿ, ಹೆರ್ಮ್ಸ್ ಡಿಸ್ಟಲರಿ ಪ್ರೈವೇಟ್ ಲಿಮಿಟೆಡ್ ಯಡ್ರಾವ್, ಡಾ.ಪ್ರಭಾಕರ್ ಕೋರೆ ಕೋ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಅಂಕಲಿ, ಮೇ.ಇನಾಮದಾರ್ ಶುಗರ್ಸ್ ಲಿಮಿಟೆಡ್ ಮೂರಕಂಬಿ ಮತ್ತು ಕೆಎಲ್ಇ ಸಂಸ್ಥೆಯ ಸಂಘ ಸಂಸ್ಥೆಗಳು, ಜನಶಕ್ತಿ ಫೌಂಡೇಶನ್ ಚಿಕ್ಕೋಡಿ ಹಾಗೂ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ್ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಬೆಳಗಾವಿ/ಚಿಕ್ಕೋಡಿ ಸಯುಕ್ತ ಆಶ್ರಯದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ.ಪ್ರಭಾಕರ್ ಕೋರೆ ಅವರ 79ನೇ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಉಚಿತ ರಕ್ತದಾನ ಶಿಬಿರ, ಪದ್ಮಶ್ರೀ ಪ್ರಶಸ್ತಿ ಪಡೆದ ಸನ್ಮಾನ ಸಮಾರಂಭ ವನಮಹೋತ್ಸವ, ರಾಷ್ಟ್ರಮಟ್ಟದ ಪುರುಷರ ಜಂಗೀ ನಿಕಾಲಿ ಕುಸ್ತಿ ಪಂದ್ಯಾವಳಿಗಳು ಹಾಗೂ ಸಂಗೀತ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಶಿವಾಲಯ ಕಾರ್ಯಾಲಯದಲ್ಲಿ ಅಭಿನಂದನಾ ಸಮಾರಂಭ ಹಾಗೂ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮ ನಡೆಯಲಿದ್ದು, ಶಾರದಾದೇವಿ ಕೋರೆ ಪ್ರೌಢಶಾಲೆ ಆವರಣದಲ್ಲಿ ಮಧ್ಯಾಹ್ನ 2 ರಿಂದ 6 ರವರೆಗೆ ರಾಷ್ಟ್ರಮಟ್ಟದ ಪುರುಷರ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ಮಹಾರಾಷ್ಟ್ರ ಹಾಗೂ ಪಂಜಾಬನ ಸುಪ್ರಸಿದ್ದ ೨೫ ಕುಸ್ತಿ ಪಟುಗಳಿಂದ ಕುಸ್ತಿ ಜರುಗಲಿದೆ. ಸಂಜೆ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಗಾಯಕ ರಾಜೇಶ ಕೃಷ್ಣನ್, ನಟಿ ಅನುಶ್ರೀ‌ ನೇತೃತ್ವದಲ್ಲಿ ನಡೆಯಲಿದೆ ಎಂದು ವಿವರಿಸಿದರು.ಆರೋಗ್ಯ, ಶಿಕ್ಷಣ, ಸಹಕಾರ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಅವರ ಜನ್ಮದಿನವನ್ನು ಔಚಿತ್ಯಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮವನ್ನು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ತಿನ ಸದಸ್ಯ ಪ್ರಕಾಶ್ ಹುಕ್ಕೇರಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶಾಸಕ ಲಕ್ಷ್ಮಣ ಸವದಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಗಣೇಶ ಹುಕ್ಕೇರಿ, ದುರ್ಯೋಧನ ಐಹೊಳೆ, ಅಭಯ ಪಾಟೀಲ, ಮಹಾಂತೇಶ್ ಕೌಜಲಗಿ, ಬಾಬಾಸಾಹೇಬ್ ಪಾಟೀಲ, ನಿಖಿಲ್ ಕತ್ತಿ, ವಿಧಾನ ಪರಿಷತ್ತಿನ ಸದಸ್ಯರಾದ ಚನ್ನರಾಜ ಹಟ್ಟಿಹೋಳಿ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಅಮಿತ್ ಕೋರೆ, ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ರಮೇಶ ಕತ್ತಿ, ಅಮರಸಿಂಹ ಪಾಟೀಲ, ಮಾಜಿ ಶಾಸಕರಾದ ವೀರಕುಮಾರ ಪಾಟೀಲ, ಶ್ಯಾಮ್ ಘಾಟಗೆ, ಕಲ್ಲಪ್ಪ ಮಗೆನ್ನವರ, ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡರ, ಕೆಎಲ್‌ಇ ಸಂಸ್ಥೆಯ ನಿರ್ದೇಶಕಿ ಡಾ.ಪ್ರೀತಿ ದೊಡ್ಡವಾಡ, ಕೋರೆ ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ಪಾಲ್ಗೊಳಿದ್ದಾರೆ ಎಂದು ತಿಳಿಸಿದರು.ಕಾರ್ಯಾಧ್ಯಕ್ಷ ಭರತೇಶ ಬನವಣೆ, ಅಜೀತರಾವ ದೇಸಾಯಿ,‌ ತಾತ್ಯಾಸಾಹೇಬ ಕಾಟೆ, ಮಹಾವೀರ ಮಿರ್ಜೆ, ಮಹಾವೀರ ಕಾತ್ರಾಳೆ, ಚೇತನ‌ ಪಾಟೀಲ, ಭರಮಗೌಡ ಪಾಟೀಲ, ಮಲ್ಲಪ್ಪ ಮೈಶಾಳೆ, ಅಣ್ಣಾಸಾಹೇಬ ಇಂಗಳೆ, ಅಣ್ಣಾಸಾಹೇಬ ಪಾಟೀಲ, ಸುರೇಶ ಪಾಟೀಲ, ಮಹಾಂತೇಶ ಪಾಟೀಲ, ಶ್ರೀಕಾಂತ ಉಮರಾಣೆ, ಸಿದಗೌಡ ಮಗದುಮ್ಮ, ವ್ಯವಸ್ಥಾಪಕ ನಿರ್ದೇಶಕ ಬಿ.ಆರ್.ಖಂಡಗಾವೆ, ದೇವೇಂದ್ರ ಕರೋಶಿ, ಕರ್ನಾಟಕ ಕೇಸರಿ ರತನಕುಮಾರ ಮಠಪತಿ, ಸಂಜಯ ಕುಡಚಿ ತಾತ್ಯಾಸಾಹೇಬ ಅಂಬಿ,‌ ಪಿಂಟು ಹಿರೇಕುರುಬರ, ಸಚೀನ ಪೂಜೇರಿ, ಶಿವಶಕ್ತಿ ಶುಗರ್ಸನ ಅಧಿಕಾರಿಗಳಾದ ಬಿ.ಎ.ಪಾಟೀಲ, ಯುವರಾಜ ಪಾಟೀಲ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕಬಳ್ಳಾಪುರದಲ್ಲಿ ಐತಿಹಾಸಿಕ ರಕ್ತದಾನ ಶಿಬಿರ
ಹಿಪ್ಪರಗಿ ಕಾರು ಸ್ಫೋಟ ಪ್ರಕರಣ: ಐಜಿಪಿ ಭೇಟಿ