ತಪ್ಪನ್ನು ವಿರೋಧಿಸುವ ಗುಣ ಬೆಳೆಸಿಕೊಳ್ಳಿ

KannadaprabhaNewsNetwork |  
Published : Oct 24, 2025, 01:00 AM IST
1 | Kannada Prabha

ಸಾರಾಂಶ

ಕಲಾಮಂದಿರದ ಕಿರು ರಂಗಮಂದಿರ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ

ಕನ್ನಡಪ್ರಭ ವಾರ್ತೆ ಮೈಸೂರುಸಮಾಜದಲ್ಲಿ ಹೆಣ್ಣು ಮಕ್ಕಳು ತಪ್ಪನ್ನು ವಿರೋಧಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಕರೆ ನೀಡಿದರು.ನಗರದ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಗುರುವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು.ಪ್ರಜಾಪ್ರಭುತ್ವ, ಐಕ್ಯತೆ, ನಾಡುನುಡಿಗೆ ಧಕ್ಕೆಯಾದಾಗ ವಿರೋಧ ಶಕ್ತಿಗಳ ವಿರುದ್ಧ ಸಾರ್ವಜನಿಕರು ಗಟ್ಟಿಯಾಗಿ ನಿಲ್ಲಬೇಕಿದೆ. ಸೋತಾಗ ಕುಗ್ಗದೆ ಬದುಕುವ, ಬೆಳೆಯುವ ಶಕ್ತಿಯನ್ನು ರೂಢಿಸಿಕೊಳ್ಳಬೇಕು. ಯಾವುದೇ ಅನ್ಯಾಯವಾದರೂ ಎದುರಿಸಿ ನಿಲ್ಲಬೇಕು ಎಂದು ಅವರು ಹೇಳಿದರು.ಕಿತ್ತೂರು ರಾಣಿ ಚೆನ್ನಮ್ಮ ಮಹಿಳೆಯರಿಗೆ ಶಕ್ತಿಯಾಗಿದ್ದ ಧೀರ ಮಹಿಳೆ. ಜೀವನದುದ್ದಕ್ಕೂ ಹೋರಾಟ ನಡೆಸಿದ ದಿಟ್ಟ ಮಹಿಳೆ. ಅವರು ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಮನೆ ಮಾತಾಗಿದ್ದಾರೆ. 18ನೇ ಶತಮಾನದಲ್ಲಿಯೇ ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಜಯ ಪಡೆದರು. ಸಣ್ಣ ಸಾಮ್ರಾಜ್ಯದ ರಾಣಿಯಾಗಿದ್ದರೂ ಬ್ರಿಟಿಷರ ವಿರುದ್ಧ ಅವರ ವೀರ ಹೋರಾಟ ಇತಿಹಾಸದ ಪುಟದಲ್ಲಿ ಬರೆದಿಡುವಂತೆ ಮಾಡಿದೆ. ಸ್ವಾತಂತ್ರ್ಯ ಪಡೆಯಲು ಆನೇಕ ಹೋರಾಟಗಾರರಿಗೆ ಅವರು ಪ್ರೇರಣೆಯಾಗಿದ್ದರೆ ಎಂದರು.ಬ್ರಿಟಿಷ್ ರ ಆಳ್ವಿಕೆ ಕಾಲದಲ್ಲಿ ರಾಜ ಸಮಾಂತರು ಬ್ರಿಟಿಷ್ ರಿಗೆ ಕಪ್ಪ ನೀಡುತ್ತಿದ್ದರು. ಆದರೆ ಅದನ್ನು ಕಿತ್ತೂರು ರಾಣಿ ಚೆನ್ನಮ್ಮ ಇದನ್ನು ವಿರೋಧಿಸಿ, ನಿಮಗೇಕೆ ಕೊಡಬೇಕು ಕಪ್ಪ‌ಎಂದು ಹೋರಾಟ ಮಾಡಿದ ಏಕೈಕ ಮಹಿಳೆ ಎಂದು ಅವರು ತಿಳಿಸಿದರು.ಸಾಹಿತಿ ಡಾ. ಸುಜಾತ ಅಕ್ಕಿ ಮಾತನಾಡಿ, ಬ್ರಿಟಿಷರು ವ್ಯಾಪಾರಕ್ಕಾಗಿ ಭಾರತಕ್ಕೆ ಬಂದರು. ನಂತರ ನಮ್ಮಲ್ಲಿದ್ದ ಸಮೃದ್ಧವಾಗಿರುವಂತಹ ಸಂಪನ್ಮೂಲ, ಮಸಾಲೆ ಪದಾರ್ಥಗಳನ್ನು ಹೊತ್ತು ಹೋದರು. ಇಲ್ಲಿಯ ಶ್ರೀಮಂತಿಕೆಯನ್ನು ಸವಿಯುತ್ತ ಇಲ್ಲೇ ನೆಲಸಿದರು. ಸಂಘಟನೆಯ ಕೊರತೆಯನ್ನು ಉಪಯೋಗಿಸಿಕೊಂಡು ಬ್ರಿಟಿಷರು ಭಾರತಲ್ಲೇ ನೆಲೆಯೂರಿದರು. ವ್ಯಾಪಾರ ಮಾಡುತ್ತಾ ಮಾಡುತ್ತಾ ಎಲ್ಲಾ ಸಂಸ್ಥಾನಗಳನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡರು ಎಂದು ಹೇಳಿದರು.ಪೋಷಕರು ಕಿತ್ತೂರು ರಾಣಿ ಚೆನ್ನಮ್ಮ ಅವರ ತಂದೆಯಂತೆ ಹೆಣ್ಣುಮಕ್ಕಳಿಗೆ ವಿದ್ಯಾಭ್ಯಾಸ ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಯಾಗುವ ರೀತಿ ರೂಪುಗೊಳಿಸಿ ಎಂದು ಅವರು ಕರೆ ನೀಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ, ಕನ್ನಡ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಎಂ. ಚಂದ್ರಶೇಖರ್, ಯಮುನಾ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!