ಮಂಗಳೂರು: ಧರ್ಮ, ಸಂಸ್ಕೃತಿ, ಸಮಾಜಸೇವೆ ಹಾಗೂ ಸಹಕಾರ ಕ್ಷೇತ್ರಗಳಲ್ಲಿ ತಮ್ಮ ವಿಶಿಷ್ಟ ಸೇವೆ ಮತ್ತು ಸಮರ್ಪಣಾ ಮನೋಭಾವದ ಮೂಲಕ ಜನಮನ್ನಣೆ ಗಳಿಸಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಆರೋಗ್ಯ ವಿಚಾರಿಸಲು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಅವರು ಶನಿವಾರ ಅವರ ಸ್ವಗೃಹಕ್ಕೆ ಭೇಟಿ ನೀಡಿ ಆಶೀರ್ವದಿಸಿದರು.ಸದಾ ಜನಪರ ಕಾರ್ಯಗಳ ಮೂಲಕ ಸಮಾಜದ ಉನ್ನತಿಗಾಗಿ ಶ್ರಮಿಸುತ್ತಿರುವ ಡಾ.ರಾಜೇಂದ್ರ ಕುಮಾರ್ ಅವರು ಸಮಾಜದ ದುರ್ಬಲ ವರ್ಗಗಳ ಏಳಿಗೆ, ಜನಸಾಮಾನ್ಯರ ಆರ್ಥಿಕ ಸಬಲೀಕರಣ ಹಾಗೂ ಸಹಕಾರ ಕ್ಷೇತ್ರದ ಪ್ರಗತಿಗಾಗಿ ಸಲ್ಲಿಸುತ್ತಿರುವ ಸೇವೆ ಇನ್ನಷ್ಟು ವಿಸ್ತಾರಗೊಳ್ಳಲಿ ಎಂದು ಸ್ವಾಮೀಜಿ ಶುಭ ಹಾರೈಸಿದರು.
----