ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹ

KannadaprabhaNewsNetwork |  
Published : Aug 31, 2024, 01:34 AM IST
೩೦ಕೆಎಂಎನ್‌ಡಿ-೨ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಕದಂಬ ಸೈನ್ಯ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಖಾಸಗಿ ವಲಯಕ್ಕೆ ಕನ್ನಡ ನಾಡಿನಲ್ಲಿ ಭೂಮಿ. ನೀರು, ತೆರಿಗೆ ವಿನಾಯಿತಿ ಹಾಗೂ ಮೂಲ ಸೌಲಭ್ಯ ಕಲ್ಪಿಸಿದ್ದರೂ ಸಹ ಕನ್ನಡಿಗರಿಗೆ ಉದ್ಯೋಗ ವಂಚನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಸಂವಿಧಾನಬದ್ಧ ಕಾನೂನು ರೂಪಿಸಿ ಉದ್ಯೋಗ ದೊರಕಿಸಿಕೊಡಲು ಮುಂದಾಗಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡಲು ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಕಾಯ್ದೆಯಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕದಂಬ ಸೈನ್ಯ ಕಾರ್ಯಕರ್ತರು ಮಂಡ್ಯದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಮಹಾವೀರ ವೃತ್ತದಲ್ಲಿ ಸೈನ್ಯದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರಲ್ಲದೆ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯನ್ನು ಕಲ್ಪಿಸಲು ಕಾಯ್ದೆ ರೂಪಿಸಿದ ರಾಜ್ಯಸರ್ಕಾರ, ವಿಧಾನಮಂಡಲದಲ್ಲಿ ಮಂಡನೆ ಮಾಡಿ ಜಾರಿಗೆ ತರಲು ವಿಫಲವಾಗಿರುವುದರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು,

ಖಾಸಗಿ ವಲಯಕ್ಕೆ ಕನ್ನಡ ನಾಡಿನಲ್ಲಿ ಭೂಮಿ. ನೀರು, ತೆರಿಗೆ ವಿನಾಯಿತಿ ಹಾಗೂ ಮೂಲ ಸೌಲಭ್ಯ ಕಲ್ಪಿಸಿದ್ದರೂ ಸಹ ಕನ್ನಡಿಗರಿಗೆ ಉದ್ಯೋಗ ವಂಚನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಸಂವಿಧಾನಬದ್ಧ ಕಾನೂನು ರೂಪಿಸಿ ಉದ್ಯೋಗ ದೊರಕಿಸಿಕೊಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಹಿಂದಿ ಭಾಷಿಕರಿಗೆ ಹೆಚ್ಚಿನ ಪ್ರಮಾಣದ ಉದ್ಯೋಗ ದೊರಕುತ್ತಿದ್ದು, ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರ ಹಿಂದಿ ಹೇರಿಕೆ ವಿರುದ್ಧ ದನಿಯತ್ತಿ ತ್ರಿಭಾಷಾ ಸೂತ್ರ ವಿರೋಧಿಸಿ, ದ್ವಿಭಾಷಾ ಸೂತ್ರ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕಬೇಕು, ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ವೈಜ್ಞಾನಿಕ ಸಂಕಷ್ಟ ಸೂತ್ರ ರಚಿಸಲು ಪ್ರಾಧಿಕಾರ, ಮಂಡಳಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸುಪ್ರೀಂಕೋರ್ಟ್ ಮೊರೆ ಹೋಗಬೇಕು, ಅನ್ಯರಾಜ್ಯಗಳ ಕಾರ್ಮಿಕರ ವಲಸೆ ತಡೆದು ಕನ್ನಡಿಗರ ಹಿತ ಕಾಪಾಡಬೇಕು, ಕಳಸಾ- ಬಂಡೂರಿ, ಮಹದಾಯಿ ನದಿ ನೀರಿನ ವಿಚಾರದಲ್ಲಿ ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಅನುಮತಿ ಪಡೆದು ಕಾಮಗಾರಿ ಆರಂಭಕ್ಕೆ ಮುಂದಾಗಬೇಕು, ಕಪ್ಪತಗುಡ್ಡ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಒತ್ತಾಯಿಸಿದರು.

ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಡಾ.ದೇವನಹಳ್ಳಿ ದೇವರಾಜ್, ಎಸ್.ಶಿವಕುಮಾರ್, ಎನ್.ಸಿ.ಕಾಂಬಳೆ, ಉಮ್ಮಡಹಳ್ಳಿ ನಾಗೇಶ್, ಬಿ.ಶಿವಕುಮಾರ್ ನೇತೃತ್ವ ವಹಿಸಿದ್ದರು.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?