ಶಿಕ್ಷಕರಿಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಆದರ್ಶ: ವಿ.ಎಸ್ ಪಾಟೀಲ

KannadaprabhaNewsNetwork |  
Published : Sep 06, 2025, 01:01 AM IST
ಮುಂಡಗೋಡ: ಶುಕ್ರವಾರ ಇಲ್ಲಿಯ ಲೊಯೋಲಾ ವಿಕಾಸ ಕೇಂದ್ರ ಸಭಾಂಗಣದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಗೌರವಾರ್ಪಣ ಸಮಾರಂಭ ನಡೆಯಿತು | Kannada Prabha

ಸಾರಾಂಶ

ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಬೇಕಾದ ಇಂದಿನ ಶಿಕ್ಷಕರಿಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶ ಬಹು ಮುಖ್ಯವಾಗಿದೆ

ಮುಂಡಗೋಡ: ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಬೇಕಾದ ಇಂದಿನ ಶಿಕ್ಷಕರಿಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶ ಬಹು ಮುಖ್ಯವಾಗಿದೆ ಎಂದು ಮಾಜಿ ಶಾಸಕ ವಿ.ಎಸ್ ಪಾಟೀಲ್ ಹೇಳಿದರು.

ಶುಕ್ರವಾರ ಇಲ್ಲಿಯ ಲೊಯೋಲಾ ವಿಕಾಸ ಕೇಂದ್ರ ಸಭಾಂಗಣದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಗೌರವಾರ್ಪಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ನಮ್ಮ ದೇಶದಲ್ಲಿ ಗುರುವಿಗೆ ಉನ್ನತ ಸ್ಥಾನ ನೀಡಲಾಗಿದೆ. ಶಿಕ್ಷಕರು ಪ್ರತಿಯೊಬ್ಬರ ಬದುಕಿನ ಆಧಾರಸ್ತಂಭವಿದ್ದಂತೆ. ಹಿಂದೆ ಗುರುಕುಲ ಪದ್ಧತಿಯಲ್ಲಿ ಗುರುಗಳು ಸಾಕಷ್ಟು ಸಮಸ್ಯೆಗಳ ನಡುವೆಯೂ ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿದ್ದರು. ಆದರೆ ಈಗ ಶಿಕ್ಷಕರಿಗೆ ಸರ್ಕಾರ ಸಾಕಷ್ಟು ಸೌಲಭ್ಯ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಗುರುವಿನ ಸ್ಥಾನಕ್ಕೆ ಗೌರವ ಬರುವಂತೆ ಕಾರ್ಯ ನಿರ್ವಹಿಸಬೇಕು ಎಂದರು.

ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿರುತ್ತದೆ. ಗುರುವಿನ ಸ್ಥಾನದಲ್ಲಿರುವ ಶಿಕ್ಷಕರು ಗುರುವಿನಂತೆ ನಡೆದುಕೊಂಡರೆ ಮಾತ್ರ ಆ ಸ್ಥಾನಕ್ಕೆ ಗೌರವ ಬರುತ್ತದೆ ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ಎಲ್.ಟಿ ಪಾಟೀಲ ಮಾತನಾಡಿದರು.

ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ರಾಜಶೇಖರ ಹಿರೇಮಠ, ತಾಪಂ ಇಒ ಟಿ.ವೈ. ದಾಸನಕೊಪ್ಪ, ತಹಸೀಲ್ದಾರ ಶಂಕರ ಗೌಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಸುಮಾ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ರಮೇಶ ಅಂಬಿಗೇರ, ಪಪಂ ಉಪಾಧ್ಯಕ್ಷೆ ರಹಿಮಾಬಾನು ಕುಂಕೂರ, ನಿವೃತ್ತ ಬಿಇಒ ಜಕ್ಕಣ್ಣ ಆಚಾರಿ, ಜಿ.ಎನ್ ನಾಯ್ಕ, ಕಸಾಪ ಅಧ್ಯಕ್ಷ ವಸಂತ ಕೊಣಸಾಲಿ, ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸುಭಾಸ ಡೋರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರದೀಪ ಕುಲಕರ್ಣಿ, ಎಸ್.ಸಿ ಬಸನಗೌಡ, ಎಸ್.ಡಿ ಮುಡೆಣ್ಣವರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರೂಪಾ ಅಂಗಡಿ ಮುಂತಾದವರು ಉಪಸ್ಥಿತರಿದ್ದರು. ಬಿಇಒ ಜಿ.ಸುಮಾ ಸ್ವಾಗತಿಸಿದರು. ಬಸವರಾಜ ಬೆಂಡ್ಲಗಟ್ಟಿ ಹಾಗೂ ವೈಶಾಲಿ ನಾಯ್ಕ ನಿರೂಪಿಸಿದರು.

PREV

Recommended Stories

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ: 9ರಂದು ಬೃಹತ್ ಜನಾಗ್ರಹ ಸಭೆ
ಮೋದಿ ಸರ್ಕಾರದಿಂದ ಜಿಎಸ್‌ಟಿ ಇಳಿಕೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ್‌ ಕಾಮತ್