ಡಾ.ಶಿವಪ್ರಸಾದ್ ಅವರ 7ನೇ ವರ್ಷದ ಪುಣ್ಯಸ್ಮರಣೆ

KannadaprabhaNewsNetwork |  
Published : Jul 27, 2025, 12:00 AM IST
ಶಿವಪ್ರಸಾದ್ ಅವರ 7ನೇ ವರ್ಷದ ಪುಣ್ಯಸ್ಮರಣೆ ಆಚರಣೆ | Kannada Prabha

ಸಾರಾಂಶ

ಪುಣ್ಯ ಸ್ಮರಣೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರೂ ಎದ್ದು ನಿಂತು ಒಂದು ನಿಮಿಷಗಳ ಕಾಲ ಮೌನಾಚರಣೆಯನ್ನು ಮಾಡುವ ಮೂಲಕ ಡಾ. ಜಿ ಶಿವಪ್ರಸಾದ್ ರವರಿಗೆ ಗೌರವ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ತುಮಕೂರು

ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ಶಿವಪ್ರಸಾದ್ ಅವರ 7ನೇ ವರ್ಷದ ಪುಣ್ಯಸ್ಮರಣೆಯನ್ನು ಸಿದ್ಧಾರ್ಥ ನಗರದಲ್ಲಿ ಆಚರಿಸಲಾಯಿತು. ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಎಲ್ಲಾ ಪ್ರಾಧ್ಯಾಪಕರು ಡಾ. ಜಿ ಶಿವಪ್ರಸಾದ್ ಅವರ ಸಮಾಧಿಗೆ ಪೂಜಿಸಿ, ಪುಷ್ಪನಮನವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಭೌದ್ಧ ಭಿಕ್ಷು ಬಂತೇಜಿರವರು ಮಾತನಾಡಿ, ಡಾ. ಜಿ. ಶಿವಪ್ರಸಾದ್ ರವರು ನಮ್ಮನ್ನಗಲಿ ಇಂದಿಗೆ 7ವರ್ಷಗಳು ಸಂದಿವೆ. ಇಂದಿಗೂ ಕೂಡ ಅವರ ತತ್ವ- ಸಿದ್ಧಾಂತಗಳು ನಮಗೆ ಮಾದರಿಯಾಗಿವೆ. ಇವರು ಹಾಕಿಕೊಟ್ಟ ಮಾರ್ಗದಲ್ಲಿ ನಾವಿಂದು ನಡೆಯುತ್ತಿದ್ದೇವೆ. ಸಂಸ್ಥೆ ಇಷ್ಟು ಎತ್ತರಕ್ಕೆ ಬೆಳೆಯಲು ಇವರ ಶ್ರಮ ಅಪಾರವಾಗಿದೆ. ಇವರು ಕಟ್ಟಿದ ಸಂಸ್ಥೆಯಲ್ಲಿ ಇಂದು ಸಾವಿರಾರು ಜನ ಕೆಲಸಮಾಡುತ್ತಾ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ಇಂದಿನ ಪುಣ್ಯಸ್ಮರಣೆಯ ಪ್ರಯುಕ್ತ ನಮ್ಮ ಬುದ್ಧ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಈ ವೇಳೆ ಪುಣ್ಯ ಸ್ಮರಣೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರೂ ಎದ್ದು ನಿಂತು ಒಂದು ನಿಮಿಷಗಳ ಕಾಲ ಮೌನಾಚರಣೆಯನ್ನು ಮಾಡುವ ಮೂಲಕ ಡಾ. ಜಿ ಶಿವಪ್ರಸಾದ್ ರವರಿಗೆ ಗೌರವ ಸಲ್ಲಿಸಲಾಯಿತು.

ಈ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ನಂಜುಂಡಪ್ಪ, ಸಾಹೇ ವಿ.ವಿಯ ಕುಲಸಚಿವರಾದ ಡಾ. ಅಶೋಕ್ ಮೆಹ್ತ, ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಿ.ಸಾಣಿಕೊಪ್ಪ, ಉಪಪ್ರಾಂಶುಪಾಲರಾದ ಡಾ. ಪ್ರಭಾಕರ್, ವೈದ್ಯಕೀಯ ಅಧೀಕ್ಷಕರಾದ ಡಾ.ವೆಂಕಟೇಶ್ , ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್ ರವಿಪ್ರಕಾಶ್, ಎಸ್‌ಎಸ್‌ಎಸ್‌ಇ ಪ್ರಾಂಶುಪಾಲರಾದ ಡಾ.ಸಂಜೀವ್ ಕುಮಾರ್, ಎಸ್‌ಎಸ್‌ಐಬಿಎಂ ಪ್ರಾಂಶುಪಾಲರಾದ ಡಾ. ಮಮತಾ ಹಾಗೂ ಎಲ್ಲಾ ಶಾಲಾ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು ವಿದ್ಯಾರ್ಥಿಗಳು ಹಾಜರಿದ್ದರು.

PREV

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’