ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಡಾ.ಶ್ಯಾಂ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ದೇಶದಲ್ಲಿ ಪ್ರಸ್ತುತ 19 ಕೋಟಿ ಕಾರ್ಯಕರ್ತರ ಪಡೆಯನ್ನು ಹೊಂದುವ ಮೂಲಕ ಬಿಜೆಪಿ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ರೂಪಗೊಂಡಿದೆ ಎಂದರು.
ರಾಷ್ಟ್ರ ಮತ್ತು ರಾಜ್ಯಗಳಲ್ಲಿ ಜನ ಬೆಂಬಲದೊಂದಿಗೆ ಬಿಜೆಪಿ ಅಧಿಕಾರ ಗಳಿಸುವ ಮೂಲಕ ಅಭಿವೃದ್ಧಿ ಮತ್ತು ಜನಪರ ಕಾರ್ಯಗಳನ್ನು ಮಾಡುತ್ತಾ ಶ್ಯಾಂ ಪ್ರಸಾದ್ ಮುಖರ್ಜಿ ಅವರ ಕನಸನ್ನು ನನಸು ಮಾಡುವ ದಿಕ್ಕಿನಲ್ಲಿ ಮುನ್ನಡೆಯುತ್ತಿದೆ ಎಂದು ಬಣ್ಣಿಸಿದರು.ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು ಮಾತನಾಡಿ, ಜಮ್ಮು,ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ನೀಡಿದ ವಿರುದ್ಧ ಅವಿರತ ಹೋರಾಟ ನಡೆಸಿದ ಕೀರ್ತಿ ಡಾ.ಶ್ಯಾಂ ಪ್ರಸಾದ್ ಮುಖರ್ಜಿ ಸಲ್ಲುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಮಹಿಳಾ ಘಟಕದ ಅಧ್ಯಕ್ಷೇ ಶ್ವೇತಾ, ಮುಖಂಡರಾದ ಮಮತಾ, ಮಧುಕುಮಾರ್, ಕೆಂಪಬೋರಯ್ಯ, ಮಾ.ನ.ಪ್ರಸನ್ನ ಕುಮಾರ್, ವೀರಭದ್ರ ಸ್ವಾಮಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿದ್ದರು.