ಕನ್ನಡಪ್ರಭ ವಾರ್ತೆ ಬೆಂಗಳೂರು:
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಪಾಲರಾದ ಥಾವರ್ಚಂದ್ ಗೆಹಲೋತ್, ಸಿಎಂ ಡಿ.ಕೆ. ಶಿವಕುಮಾರ್, ಡಿಸಿಎಂ ಡಾ. ಜಿ. ಪರಮೇಶ್ವರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ತಿನ ಪ್ರತಿ ಪಕ್ಷದ ನಾಯಕರಾದ ಛಲವಾದಿ ಟಿ.ನಾರಾಯಣಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿ ಉಭಯ ಸದನಗಳ ಸದಸ್ಯರು, ರಾಜ್ಯಸಭೆ ಮತ್ತು ಲೋಕಸಭೆ ಸಂಸದರು,ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಮಾಣ ವಚನ ಸ್ವೀಕಾರದ ನಂತರ ನಿರ್ಗಮಿತ ರಾಜ್ಯಪಾಲರಾದ ಗೆಹಲೋತ್, ಸಿಎಂ ಡಿ.ಕೆ.ಶಿವಕುಮಾರ್, ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಬು ಭಕ್ರು ಅವರು ರಾಜ್ಯಪಾಲ ಸುಧಾ ಯಾದವ್ ಅವರಿಗೆ ಪುಷ್ಪಗುಚ್ಛ ನೀಡಿ ಶುಭ ಕೋರಿದರು.ವಂದೇ ಮಾತರಂ ಪೂರ್ಣ ಗೀತೆ:
2ನೇ ಮಹಿಳಾ ಗವರ್ನರ್: