ಅನಾಥ ಮಕ್ಕಳ ಜತೆ ಡಾ। ಸುಧಾಕರ್‌ ದೀಪಾವಳಿ

KannadaprabhaNewsNetwork |  
Published : Oct 22, 2025, 01:03 AM IST
ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ಹಬ್ಬ ಆಚರಿಸಿದ ಸಂಸದ ಡಾ.ಕೆ.ಸುಧಾಕರ್ | Kannada Prabha

ಸಾರಾಂಶ

ಕೋವಿಡ್ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ಸಂಸದ ಡಾ.ಕೆ.ಸುಧಾಕರ್‌ ದೀಪಾವಳಿ ಆಚರಿಸಿದರು. ಪ್ರತಿ ವರ್ಷವೂ ಸಂಸದ ಡಾ.ಕೆ.ಸುಧಾಕರ್ ಅವರು ಅನಾಥ ಮಕ್ಕಳೊಂದಿಗೆ ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬ ಆಚರಿಸುತ್ತಾರೆ.

ಚಿಕ್ಕಬಳ್ಳಾಪುರ : ಕೋವಿಡ್ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ಸಂಸದ ಡಾ.ಕೆ.ಸುಧಾಕರ್‌ ದೀಪಾವಳಿ ಆಚರಿಸಿದರು.

ಪ್ರತಿ ವರ್ಷವೂ ಸಂಸದ ಡಾ.ಕೆ.ಸುಧಾಕರ್ ಅವರು ಅನಾಥ ಮಕ್ಕಳೊಂದಿಗೆ ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬ ಆಚರಿಸುತ್ತಾರೆ. ಕೋವಿಡ್ ಸಮಯದಲ್ಲಿ ತಂದೆ, ತಾಯಿ ಹಾಗೂ ಕುಟುಂಬವನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸಂಸದರು ಹಲವು ರೀತಿಯಲ್ಲಿ ನೆರವು ನೀಡಿದ್ದಾರೆ. ಅವರಿಗೆ ಇನ್ನಷ್ಟು ಪ್ರೋತ್ಸಾಹ, ಬೆಂಬಲ ನೀಡುವುದರ ಸೂಚಕವಾಗಿ ಪ್ರತಿ ವರ್ಷ ದೀಪಾವಳಿ ಹಬ್ಬವನ್ನು ಮಕ್ಕಳೊಂದಿಗೆ ಆಚರಣೆ ಮಾಡುತ್ತಿದ್ದಾರೆ. ಅನಾಥ ಮಕ್ಕಳ ಜತೆ ಭೋಜನ:

ಈ ಬಾರಿಯ ಹಬ್ಬದಂದು ಚಿಕ್ಕಬಳ್ಳಾಪುರದ ತಮ್ಮ ನಿವಾಸದಲ್ಲಿ ಮಕ್ಕಳೊಂದಿಗೆ ಭೋಜನ ಮಾಡಿದ ಸಂಸದ ಡಾ.ಕೆ.ಸುಧಾಕರ್, ಅವರ ಯೋಗಕ್ಷೇಮ, ಶೈಕ್ಷಣಿಕ ಪ್ರಗತಿಯ ಬಗ್ಗೆ ವಿಚಾರಿಸಿದರು.

ಈ ವೇಳೆ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್, ದೀಪಾವಳಿ ಹಬ್ಬ ಎಂದರೆ ಇಡೀ ಕುಟುಂಬಕ್ಕೆ ಸಡಗರ ಹಾಗೂ ಸಂಭ್ರಮ. ಕೋವಿಡ್ ಸಮಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದರು. ಆಗ ಸಚಿವನಾಗಿದ್ದ ನಾನು, ಆ ಮಕ್ಕಳನ್ನು ದತ್ತು ಪಡೆದು, ಅವರ ಹೆಸರಿನಲ್ಲಿ ಠೇವಣಿ ಇಟ್ಟು, ಸಂಪೂರ್ಣ ಶೈಕ್ಷಣಿಕ ನೆರವು ನೀಡುತ್ತಿದ್ದೇನೆ ಎಂದರು.

ಈ ಮಕ್ಕಳಲ್ಲಿ ಎಲ್ಲ ಧರ್ಮ, ಜಾತಿಯವರಿದ್ದಾರೆ. ಪ್ರತಿ ವರ್ಷ ಇವರೊಂದಿಗೆ ದೀಪಾವಳಿ ಹಬ್ಬದ ಪೂಜೆ ಮಾಡಿ, ಭೋಜನ ಮಾಡುತ್ತೇನೆ. ಇದನ್ನು ಭಗವಂತನ ಸೇವೆಯಂತೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ರಸ್ತೆಗೆ ಕಾಲಿಟ್ಟಿರೋ ಹುಷಾರ್‌, ಕಚ್ಲಿಕ್ಕೆ ಕಾಯ್ತಿವೆ ಬೀದಿ ನಾಯಿ
ನಗರದಲ್ಲಿ ಡ್ರಗ್ಸ್ ಮಾರಾಟಕ್ಕೆಯತ್ನಿಸಿದ ಮೂವರ ಬಂಧನ