ಉಕ್ಕು ಸಚಿವಾಲಯದ ಹಿಂದಿ ಸಲಹಾ ಸಮಿತಿಗೆ ಡಾ.ಸುನಿತಾ ಚವ್ಹಾಣ ನೇಮಕ

KannadaprabhaNewsNetwork |  
Published : Apr 18, 2026, 02:45 AM IST
  ಉಕ್ಕು ಸಚಿವಾಲಯದ ಹಿಂದಿ ಸಲಹಾ ಸಮಿತಿಗೆ ಡಾ.ಸುನಿತಾ ಚವ್ಹಾಣ ನೇಮಕ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಭಾರತ ಸರ್ಕಾರದ ಉಕ್ಕು ಸಚಿವಾಲಯವು ವಿಜಯಪುರದ ಜೆಡಿಎಸ್ ನಾಯಕಿ ಡಾ.ಸುನಿತಾ ದೇವಾನಂದ ಚವ್ಹಾಣ ರವರನ್ನು ಉಕ್ಕು ಸಚಿವಾಲಯದ ಹಿಂದಿ ಸಲಹಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಭಾರತ ಸರ್ಕಾರದ ಉಕ್ಕು ಸಚಿವಾಲಯವು ವಿಜಯಪುರದ ಜೆಡಿಎಸ್ ನಾಯಕಿ ಡಾ.ಸುನಿತಾ ದೇವಾನಂದ ಚವ್ಹಾಣ ರವರನ್ನು ಉಕ್ಕು ಸಚಿವಾಲಯದ ಹಿಂದಿ ಸಲಹಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ.

ಇವರ ಅಧಿಕಾರವಧಿಯು ಮುಂದಿನ ಮೂರು ವರ್ಷಗಳ ವರೆಗೆ ಅಥವಾ ಸಚಿವಾಲಯದ ಮುಂದಿನ ಆದೇಶದ ವರೆಗೆ ಇರಲಿದೆ. ಸುನಿತಾ ಚವ್ಹಾಣ ರವರನ್ನು ಹಿಂದಿ ಸಲಹಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ಸಚಿವಾಲಯದ ಜಂಟಿ ನಿರ್ದೇಶಕ ಸುದರ್ಶನ ಮೆಂಡಿರಟ್ಟ ಅವರು ಆದೇಶಿಸಿದ್ದಾರೆ. ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಕಾರ್ಯಕರ್ತೆಯನ್ನು ಗುರುತಿಸಿ ಇಂತಹ ಉನ್ನತ ಸಮಿತಿಗೆ ನೇಮಿಸಿರುವುದು ಅತ್ಯಂತ ಸಂತಸದ ವಿಚಾರವಾಗಿದ್ದು, ಇದಕ್ಕೆ ಕಾರಣಿಕರ್ತರಾದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಹಿರಿಯರಿಗೆ ಡಾ.ಸುನಿತಾ ಚವ್ಹಾಣ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ ಬಸವನ ಬಾಗೇವಾಡಿಯಿಂದ ಬಸವಜ್ಯೋತಿ ಪಾದಯಾತ್ರೆ
ರಸಗೊಬ್ಬರ ಕೃತಕ ಅಭಾವ ಸ್ಟಷ್ಟಿಸಿದರೆ ನಿರ್ದಾಕ್ಷಿಣ್ಯ ಕ್ರಮ