ಡಾ.ವೀರೇಂದ್ರ ಹೆಗ್ಗಡೆ ಸಾಮಾಜಿಕ ಕಾರ್ಯ ಶ್ಲಾಘನೀಯ: ಮಲ್ಲಣ್ಣ ಯಾದವಾಡ

KannadaprabhaNewsNetwork |  
Published : Dec 06, 2024, 08:58 AM IST
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮವನ್ನು ಮಲ್ಲಣ್ಣ ಯಾದವಾಡ ಉದ್ಘಾಟಿಸಿದರು. | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶದ ಬಡಮಹಿಳೆಯರನ್ನು ಸಂಘಟಿಸಿ ಅವರಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿ ಕುಟುಂಬದ ಸರ್ವಾಂಗೀಣ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮ ಅನುಷ್ಠಾನ ಮಾಡುತ್ತಿರುವ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಟ್ಟುಹಾಕಿರುವ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕಾರ್ಯ ಶ್ಲಾಘನೀಯ ಎಂದು ಶ್ರೀ ಧನಲಕ್ಷ್ಮೀ ಶುಗರ್ಸ್‌ ಅಧ್ಯಕ್ಷ ಮಲ್ಲಣ್ಣ ಯಾದವಾಡ ಹೇಳಿದರು.

ಕನ್ನಡಪ್ರಭ ವಾರ್ತೆ ರಾಮದುರ್ಗ

ಗ್ರಾಮೀಣ ಪ್ರದೇಶದ ಬಡಮಹಿಳೆಯರನ್ನು ಸಂಘಟಿಸಿ ಅವರಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿ ಕುಟುಂಬದ ಸರ್ವಾಂಗೀಣ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮ ಅನುಷ್ಠಾನ ಮಾಡುತ್ತಿರುವ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಟ್ಟುಹಾಕಿರುವ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕಾರ್ಯ ಶ್ಲಾಘನೀಯ ಎಂದು ಶ್ರೀ ಧನಲಕ್ಷ್ಮೀ ಶುಗರ್ಸ್‌ ಅಧ್ಯಕ್ಷ ಮಲ್ಲಣ್ಣ ಯಾದವಾಡ ಹೇಳಿದರು.

ಪಟ್ಟಣದ ಬಾಣಕಾರ ಪೇಟೆಯ ಬನಶಂಕರಿದೇವಿ ಸಮುದಾಯ ಭವನದಲ್ಲಿ ಬುಧವಾರ ನಡೆದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬನಶಂಕರಿದೇವಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ, ನೇಕಾರ ಸಮುದಾಯಗಳ ಒಕ್ಕೂಟ ಮತ್ತು ಗೋಕಾಕ ರೋಟರಿ ರಕ್ತ ಭಂಡಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ೭೭ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನವಜೀವನೋತ್ಸವ ಹಾಗೂ ಉಚಿತ ರಕ್ತದಾನ ಶಿಬಿರದ ಉದ್ಘಾಟಿಸಿ ಮಾತನಾಡಿ, ಸರ್ಕಾರಗಳು ಮಾಡಬೇಕಾದ ಜನಪರ ಯೋಜನೆಗಳನ್ನು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಅನುಷ್ಠಾನ ಮಾಡುತ್ತ ರಾಜ್ಯದ ಮೂಲೆ ಮೂಲೆಗೂ ತಲುಪಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.

ಜನಜಾಗೃತಿ ಕಾರ್ಯಕ್ರಮಗಳ ಪ್ರಾದೇಶಿಕ ಯೋಜನಾಧಿಕಾರಿ ಭಾಸ್ಕರ್ ಎನ್. ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕ ಅಧ್ಯಕ್ಷ ಸೋಮಶೇಖರ ಮಗದುಮ್, ನಿಕಟಪೂರ್ವ ಅಧ್ಯಕ್ಷ ಅಶೋಕ ಕುಲಗೋಡ, ಸದಸ್ಯರಾದ ರಮೇಶ ಜಲಗೇರಿ, ಜಿ.ಬಿ. ರಂಗನಗೌಡ್ರ, ಉದ್ಯಮಿ ಪ್ರಕಾಶ ಸೂಳಿಭಾವಿ, ನೇಕಾರ ಸಮುದಾಯಗಳ ಒಕ್ಕೂಟ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ ಕುರುಡಗಿ ಇದ್ದರು.

ಜಿಲ್ಲಾ ನಿರ್ದೇಶಕ ಎಚ್.ಆರ್. ಲವಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಜನಾಧಿಕಾರಿ ಸಚಿನ್ ಸ್ವಾಗತಿಸಿದರು. ಮೇಲ್ವಿಚಾರಕ ಸಂತೋಷ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕ ಗಣಪತಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ