-ಅಂತಿಮ ಮತದಾರರ ಪಟ್ಟಿಯನ್ನು 2025ರ ಜನವರಿ 6 ರಂದು ಪ್ರಕಟಿಸಲಾಗುವುದು
ಕನ್ನಡಪ್ಭ ವಾರ್ತೆ ಯಾದಗಿರಿ
ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ, ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 36-ಶೋರಾಪೂರ, 37-ಶಹಾಪೂರ, 38-ಯಾದಗಿರಿ ಹಾಗೂ 39-ಗುರುಮಠಕಲ್ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಅ. 29 ರಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ, ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರ ಕಾರ್ಯಾಲಯ ಯಾದಗಿರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ತಹಸೀಲ್ದಾರರ ಕಾರ್ಯಾಲಯ ಯಾದಗಿರಿ, ಶಹಾಪುರ, ಶೋರಾಪೂರ, ವಡಗೇರಾ, ಗುರುಮಿಟಕಲ್ ಮತ್ತು ಹುಣಸಗಿ ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಾಲಯಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ತಿಳಿಸಿದ್ದಾರೆ.ಕರಡು ಮತದಾರರ ಪಟ್ಟಿಯನ್ನು (http://ceokarnataka.kar.nic.in) ಹಾಗೂ ಜಿಲ್ಲೆಯ (yadgir.nic.in) ಅಂತರ್ಜಾಲದಲ್ಲಿಯು ಮತ್ತು ಜಿಲ್ಲಾಧಿಕಾರಿಗಳ ಕಾರ್ಯಾಲಯದ Facebookನ (dcydg123@gmail.com)ನಲ್ಲಿಯೂ ಸಹ ಪರಿಶೀಲಿಸಬಹುದಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು.
ಈ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಡಿಸೆಂಬರ್ 24 ರಂದು ಕಾಲೋಚಿತ ಗೊಳಿಸಲಾಗುವುದು. ನಂತರ ಅಂತಿಮ ಮತದಾರರ ಪಟ್ಟಿಯನ್ನು 2025ರ ಜನವರಿ 6 ರಂದು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
-----30ವೈಡಿಆರ್18 : ಡಾ. ಬಿ. ಸುಶೀಲಾ, ಜಿಲ್ಲಾಧಿಕಾರಿ, ಯಾದಗಿರಿ.