ಪಂಚನಹಳ್ಳಿಯ ಶಿವಸಂಚಾರ ನಾಟಕೋತ್ಸವದಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ
ನಮ್ಮನ್ನು ನಾವು ಸುಸಂಸ್ಕೃತನನ್ನಾಗಿ ಮಾಡಿಕೊಳ್ಳಲು ನಾಟಕಗಳು ಸಹಕಾರಿಯಾಗುತ್ತವೆ ಎಂದು ಸಾಣೇಹಳ್ಳಿ ಶ್ರೀಮಠದ ಡಾ. ಶ್ರೀಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಂಚನಹಳ್ಳಿಯಲ್ಲಿ ನಡೆಯುತ್ತಿರುವ ಶಿವಸಂಚಾರ ನಾಟಕೋತ್ಸವದ ಎರಡನೇ ದಿನ ನಾಟಕ ಪ್ರದರ್ಶನಕ್ಕೂ ಮುನ್ನ ನಡೆದ ವೇದಿಕೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ನಾಟಕಗಳು ಈ ಸಮಾಜದ ಕನ್ನಡಿಯಿದ್ದಂತೆ. ಸಮಾಜದ ನೂನ್ಯತೆಗಳನ್ನು ತೋರಿಸುತ್ತವೆ ಮತ್ತು ಸಮಾಜದ ಸುಧಾರಣೆಗೆ ಸಹಕಾರಿಯಾಗುತ್ತವೆ ಎಂದರು.ಪ್ರತಿ ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ರಂಗಭೂಮಿ ಸಹಕಾರಿ. ಅದರಲ್ಲೂ ಮಕ್ಕಳಲ್ಲಿ ಕಲೆ ಮತ್ತು ಸಾಹಿತ್ಯದ ಬಗ್ಗೆ ಒಲವು ಮೂಡಿಸಿದರೆ ಮಕ್ಕಳ ಮನಸ್ಸು ಅರಳುತ್ತದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ದೊರೆ ತಂತಾಗುತ್ತದೆ ಎಂದರು.
ತಾಪಂ ಮಾಜಿ ಉಪಾಧ್ಯಕ್ಷ ಪಿ.ಸಿ.ಪ್ರಸನ್ನ ಮಾತನಾಡಿ ಧಾರವಾಹಿಗಳ ಹಾವಳಿ ನಡುವೆಯೂ ನಾಟಕ ನೋಡಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿರುವುದು ಸಂತಸದ ವಿಚಾರ. ರಂಗ ಶಾಲೆ ಕಟ್ಟುವುದು ಮತ್ತು ಅಲ್ಲಿ ಕಲಿತ ವಿದ್ಯಾರ್ಥಿಗಳಿಂದ ದೇಶದ್ಯಾಂತ ನಾಟಕಗಳು ಪ್ರದರ್ಶನಗೊಳ್ಳುವಂತೆ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ಆದರೆ ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿಗಳು ಕಳೆದ 27 ವರ್ಷಗಳಿಂದ ರಂಗಭೂಮಿಗೆ ತಮ್ಮದೆಯಾದ ಕೊಡುಗೆ ನೀಡುತ್ತಾ ಬಂದಿರುವುದು ಶ್ಲಾಘನೀಯ. ಪ್ರತಿ ವರ್ಷ ಗ್ರಾಮಸ್ಥರ ಸಹಕಾರದಿಂದ ಪಂಚನಹಳ್ಳಿಯಲ್ಲಿ ಶಿವ ಸಂಚಾರ ನಾಟಕೋತ್ಸವ ಏರ್ಪಡಿಸಲಾಗುವುದು ಎಂದು ಹೇಳಿದರು.
ಪಂಚನಹಳ್ಳಿಯಲ್ಲಿ ನಡೆಯುತ್ತಿರುವ ಶಿವ ಸಂಚಾರ ನಾಟಕೋತ್ಸವದ ಎರಡನೇ ದಿನವಾದ ಗುರುವಾರ ನಾಟಕ ಪ್ರದರ್ಶನಕ್ಕೂ ಮುನ್ನ ನಡೆದ ವೇದಿಕೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಸಾಣೇಹಳ್ಳಿ ಮಠದ ಡಾ ಶ್ರೀಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.