ಕನ್ನಡಪ್ರಭ ವಾರ್ತೆ ಬೀದರ್
ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಒಬಿಸಿ ಮೊರ್ಚಾ ಅಧ್ಯಕ್ಷರು ಹಾಗೂ ನೂತನ ವಿಧಾನ ಪರಿಷತ್ ಸದಸ್ಯರಾದ ಕೌಟಿಲ್ಯ ಅವರು ಚಾಲನೆ ನೀಡಿ ಮಾತನಾಡಿ, ವಿಕಸಿತ ಭಾರತದ ಸಂಕಲ್ಪವನ್ನು ಸಾಕಾರಗೊಳಿಸಲು ಮಕ್ಕಳಲ್ಲಿ ದೇಶಭಕ್ತಿ, ರಾಷ್ಟ್ರಾಭಿಮಾನ, ಸಂಸ್ಕಾರ ಹಾಗೂ ಮೌಲ್ಯಾಧಾರಿತ ಶಿಕ್ಷಣ ಬೆಳೆಸುವುದು ಅತ್ಯಗತ್ಯವಾಗಿದೆ. ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಚಿತ್ರಕಲೆ, ಪ್ರಬಂಧ ಹಾಗೂ ರಂಗೋಲಿ ಸ್ರ್ಧೆರಗಳಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಕೆಪಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಾಬು ಅಲಿ ಅವರು ಇಂತಹ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿರುವುದು ಸಂತೋಷದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಮಾತನಾಡಿ, ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸು ಹಾಗೂ ರಾಷ್ಟ್ರದ ಅಭಿವೃದ್ಧಿಯ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶವು ವಿಕಸಿತ ಭಾರತದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ. ಮಕ್ಕಳಲ್ಲಿ ರಾಷ್ಟ್ರಾಭಿಮಾನ ಬೆಳೆಸಿ, ಭಾರತವನ್ನು ವಿಶ್ವಗುರು ವನ್ನಾಗಿಸುವ ಕನಸಿಗೆ ಪ್ರೇರಣೆ ನೀಡುವ ಇಂತಹ ಕಾರ್ಯಕ್ರಮಗಳು ಶ್ಲಾಘನೀಯವಾಗಿವೆ ಎಂದು ಹೇಳಿದರು.ಕೆಪಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಾಬು ಅಲಿ ಪ್ರಾಸ್ತಾವಿಕ ಮಾತನಾಡಿ, ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಶಾಲೆಯಲ್ಲಿ ಸೃಜನಶೀಲ ಚಟುವಟಿಕೆ ಆಯೋ ಜಿಸಿರುವುದು ಸಂತಸದ ವಿಚಾರವಾಗಿದೆ. ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕರಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ದದರ್ಶಿ ಅವ್ವಣ್ಣ ಮೇಗೆರೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಶಶಿ ಹೊಸಳ್ಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಚಿತ್ರ 2ಬಿಡಿಆರ್66: