ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಂಗಳೂರು ಹಾಗೂ ವಿಟ್ಲ ಪಟ್ಟಣ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ವಿಟ್ಲ ನಾಡಕಚೇರಿ ಬಳಿಯಲ್ಲಿ ನೂತನವಾಗಿ ಆರಂಭಗೊಂಡ ಇಂದಿರಾ ಕ್ಯಾಂಟಿನ್‌ನ್ನು ಗುರುವಾರ ಉದ್ಘಾಟಿಸಲಾಯಿತು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಂಗಳೂರು ಹಾಗೂ ವಿಟ್ಲ ಪಟ್ಟಣ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ವಿಟ್ಲ ನಾಡಕಚೇರಿ ಬಳಿಯಲ್ಲಿ ನೂತನವಾಗಿ ಆರಂಭಗೊಂಡ ಇಂದಿರಾ ಕ್ಯಾಂಟಿನ್‌ನ್ನು ಗುರುವಾರ ಉದ್ಘಾಟಿಸಲಾಯಿತು.ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಇಂದಿರಾ ಕ್ಯಾಂಟಿನ್ ಆರಂಭವಾಗಿರುವುದು ಈ ಭಾಗದ ಜನರಿಗೆ ಸಿಹಿಸುದ್ದಿಯಾಗಿದೆ. ಹಲವು ವರ್ಷಗಳಿಂದ ಜನರು ಕಂಡಿದ್ದ ಕನಸು ಇಂದು ನನಸಾಗಿದೆ ಎಂದರು.ರಾಜ್ಯದಲ್ಲಿ ಹಲವು ಇಂದಿರಾ ಕ್ಯಾಂಟಿನ್‌ಗಳ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಉದ್ಘಾಟನೆ ಬಾಕಿ ಉಳಿದಿದ್ದವು. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದು, ಸಿದ್ಧಗೊಂಡಿರುವ ಇಂದಿರಾ ಕ್ಯಾಂಟಿನ್‌ಗಳನ್ನು ಶೀಘ್ರವಾಗಿ ಉದ್ಘಾಟಿಸುವಂತೆ ಮನವಿ ಮಾಡಲಾಗಿತ್ತು. ಅದರಂತೆ ರಾಜ್ಯದಲ್ಲಿ ಉದ್ಘಾಟನೆಗೆ ಸಿದ್ಧವಾಗಿದ್ದ ಇಂದಿರಾ ಕ್ಯಾಂಟಿನ್‌ಗಳನ್ನು ಮುಖ್ಯಮಂತ್ರಿ ಅವರು ಬೆಂಗಳೂರಿನಿಂದ ವರ್ಚುವಲ್ ಮೂಲಕ ಉದ್ಘಾಟಿಸಿದ್ದಾರೆ ಎಂದು ಶಾಸಕ ತಿಳಿಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ. ಬಿ. ಶ್ರೀನಾಥ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾ. ಜಿ. ಸಂತೋಷ್ ಕುಮಾರ್, ಬಂಟ್ವಾಳ ತಹಶೀಲ್ದಾರ್ ಮಂಜುನಾಥ ಜಿ., ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ ಮತ್ತಿತರರರಿದ್ದರು. ಸುಧಾಕರ್ ಸ್ವಾಗತಿಸಿ, ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.