ಶಿವಾನಂದ ಗೊಂಬಿ
ಬೇಸಿಗೆಯ ಬೇಗೆಯಿಂದ ಕುಡಿಯುವ ನೀರಿನ ತತ್ವಾರ ಶುರುವಾಗಿದ್ದು ಸದ್ಯ ಧಾರವಾಡ ಜಿಲ್ಲೆಯ 15 ಹಳ್ಳಿಗಳಲ್ಲಿ ಸಮಸ್ಯೆ ತಲೆದೋರಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಹಳ್ಳಿಗಳ ಸಂಖ್ಯೆ ಮೂರ್ನಾಲ್ಕು ಪಟ್ಟು ಹೆಚ್ಚಾಗುವ ಆತಂಕ ಅಧಿಕಾರಿಗಳಲ್ಲಿ ಮನೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಖಾಸಗಿ ಬೋರ್‌ವೆಲ್ ಗುರುತಿಸಿದ್ದು ಅಗತ್ಯ ಬಿದ್ದರೆ ಬಳಸಿಕೊಳ್ಳಲು ಮುಂದಾಗಿದ್ದಾರೆ.
ಕಳೆದ 10 ವರ್ಷಗಳಲ್ಲೇ ಧಾರವಾಡ ಜಿಲ್ಲೆಯಲ್ಲಿ ಈ ವರ್ಷ ಬಿಸಿಲು ಪ್ರಮಾಣ ಏರಿಕೆಯಾಗಿದೆ. 2016ರಲ್ಲಿ 40-41 ಡಿಗ್ರಿ ಸೆಲ್ಸಿಯಸ್ ಇದ್ದರೆ ಉಳಿದಂತೆ 37-38ರ ಆಸುಪಾಸಿನಲ್ಲೇ ಇತ್ತು. ಆದರೆ, ಈ ವರ್ಷ ಈಗಲೇ 38ರಿಂದ 39 ಡಿಗ್ರಿ ಸೆಲ್ಸಿಯಸ್ ದಾಟಿದೆ. ಇದರಿಂದ ಕೆರೆ, ಹಳ್ಳ-ಕೊಳ್ಳ ಬತ್ತಿ ಜನ- ಜಾನುವಾರು ನೀರಿಗಾಗಿ ಪರಿತಪಿಸುವಂತೆ ಆಗಿದೆ. ಪ್ರಾಣಿ-ಪಕ್ಷಿ ನೀರಿಗಾಗಿ ಹಪಹಪಿಸಿದರೆ, ರಸ್ತೆ ಬದಿ ನೆಟ್ಟ ಗಿಡ ಒಣಗುತ್ತಿವೆ. ಅಂತರ್ಜಲಮಟ್ಟ ಕುಸಿಯುತ್ತಿದ್ದು ಬೋರ್‌ವೆಲ್ ಬತ್ತುತ್ತಿವೆ. ಇದರಿಂದ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸುತ್ತಿದೆ.ಕೆರೆಗಳೆಷ್ಟು?:
ಜಿಲ್ಲೆಯಲ್ಲಿ 370ಕ್ಕೂ ಹೆಚ್ಚು ಗ್ರಾಮಗಳಿದ್ದು 90ಕ್ಕೂ ಅಧಿಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುವ ಲಕ್ಷಣಗಳಿವೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ. ಸದ್ಯ 15 ಗ್ರಾಮಗಳಲ್ಲಿ 15 ದಿನದಿಂದ ಕುಡಿಯುವ ನೀರಿನ ಸಮಸ್ಯೆ ಶುರುವಾಗಿದ್ದು ಆಡಳಿತ ಯಂತ್ರ ನೀರೊದಗಿಸಲು ಹರಸಾಹಸ ಪಡುತ್ತಿದೆ.
ಯಾವ್ಯಾವ ಗ್ರಾಮ:
ಒಟ್ಟಿನಲ್ಲಿ ಏರುತ್ತಿರುವ ತಾಪಮಾನದಿಂದಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು ಅಧಿಕಾರಿಗಳ ನಿದ್ದೆಗೆಡಿಸಿದೆ. ತಕ್ಷಣ ಮಳೆಯಾಗಿ ಕೆರೆಗಳು ಭರ್ತಿಯಾದರೆ ನೀರಿನ ತಾಪತ್ರಯ ತಪ್ಪುತ್ತದೆ ಎನ್ನುತ್ತಿದ್ದಾರೆ ಅಧಿಕಾರಿಗಳು.ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ 90 ಗ್ರಾಮಗಳನ್ನು ಗುರುತಿಸಿದ್ದು ಸದ್ಯಕ್ಕೆ 15 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಿದೆ. ಇಲ್ಲಿ 17 ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ.