ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಆಯುಷ್ ಇಲಾಖೆ ವತಿಯಿಂದ ಆರೋಗ್ಯಕರ ಚಿಂಚಾ ಪಾನಕ(ಹುಣಸೆ ಹಣ್ಣಿನ ಪಾನಕ)ವನ್ನು ಸಾರ್ವಜನಿಕರು ಹಾಗೂ ಕರ್ತವ್ಯನಿರತ ಕಚೇರಿಯ ಸಿಬ್ಬಂದಿಗೆ ವಿತರಿಸಿ ಮಾತನಾಡಿದರು. ಎಲ್ಲೆಡೆ ಬಿಸಿಲಿನ ತಾಪ ಹೆಚ್ಚುತ್ತಿರುವುದರಿಂದ ಆರೋಗ್ಯ ರಕ್ಷಣೆಗೆ ದೇಹವನ್ನು ತಂಪಾಗಿಟ್ಟುಕೊಳ್ಳುವುದು ಅಗತ್ಯವಾಗಿದೆ. ಆದ್ದರಿಂದ ಹೆಚ್ಚು ಹೆಚ್ಚು ನೀರು ಕುಡಿಯುವುದರ ಜೊತೆಗೆ ಆಯುಷ್ ಇಲಾಖೆಯಿಂದ ಪರಿಚಯಿಸಲಾಗುವ ಪಾನಕ ಮತ್ತಿತರರ ಪಾನೀಯ ಸೇವಿಸುವಂತೆ ತಿಳಿಸಿದರು.
ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶ್ರೀಕಾಂತ ಸುಣಧೋಳಿ ಮಾತನಾಡಿ, ಹುಣಸೆ ಹಣ್ಣಿನ ಪಾನಕ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುವುದರ ಜತೆಗೆ ಬಾಯಾರಿಕೆ ನಿವಾರಿಸಲಿದೆ ಎಂದರು.ಚುನಾವಣೆ ತರಬೇತಿ ನೋಡಲ್ ಅಧಿಕಾರಿ ಶಂಕರಾನಂದ ಬನಶಂಕರಿ, ಆಯುಷ್ ಇಲಾಖೆಯ ಡಾ.ಚಂದ್ರಶೇಖರ ಸಿದ್ದಾಪುರ, ಡಾ.ಸುಚೇತಾ ದೇಸಾಯಿ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.
ಹುಣಸೆ ಹಣ್ಣು (100 ಗ್ರಾಂ), ಬೆಲ್ಲದ ಪುಡಿ (400 ಗ್ರಾಂ), ಜೀರಿಗೆ ಪುಡಿ (10 ಗ್ರಾಂ), ಕಾಳು ಮೆಣಸಿನಪುಡಿ (5 ಗ್ರಾಂ) ಹಾಗೂ ಸೈಂದವ ಲವಣ (5 ಗ್ರಾಂ) ಬಳಸಿಕೊಂಡು ಪಾನಕ ತಯಾರಿಸಬಹುದು.