ಇತ್ತೀಚಿನ ಕಲುಷಿತ ವಾತಾವರಣದಲ್ಲಿ ರೋಗಗಳಿಂದ ಮುಕ್ತವಾಗಬೇಕಾದರೆ ಶುದ್ಧ ನೀರು ಸೇವನೆ ಅತ್ಯವಶ್ಯ
ಗದಗ: ಇತ್ತೀಚಿನ ಕಲುಷಿತ ವಾತಾವರಣದಲ್ಲಿ ರೋಗಗಳಿಂದ ಮುಕ್ತವಾಗಬೇಕಾದರೆ ಶುದ್ಧ ನೀರು ಸೇವನೆ ಅತ್ಯವಶ್ಯ. ಅಂತಹ ಶುದ್ಧ ಕುಡಿಯುವ ನೀರನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿಕೊಟ್ಟ ಪುಣ್ಯ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸಲ್ಲುತ್ತದೆ ಎಂದು ನಿವೃತ್ತ ಡಿಡಿಪಿಐ ಎಂ.ಎ. ರಡ್ಡೇರ ಹೇಳಿದರು.
ಅವರು ಸಭಾಪತಿ ಬಸವರಾಜ ಹೊರಟ್ಟಿ ದಂಪತಿಗಳು ದತ್ತು ಪಡೆದ ಸಿದ್ದಲಿಂಗ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಿದ ಶುದ್ಧ ನೀರು ಘಟಕ ಹಾಗೂ ನಗರಸಭೆಯ ನೆರವಿನ ಹೈಮಾಸ್ಟ್ ದೀಪ ಸಾಂಕೇತಿಕವಾಗಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಹಲವಾರು ದಾನಿಗಳ ನೆರವಿನಿಂದ ಸರ್ಕಾರಿ ಪ್ರೌಢಶಾಲೆ ಒಂದು ಹೊಸ ಕಳೆ ಕಟ್ಟಿಕೊಟ್ಟು ಜಿಲ್ಲೆಯಲ್ಲಿಯೇ ಒಂದು ಮಾದರಿ ಶಾಲೆಯಾಗಿ ಮೂಡಿ ಬಂದಿದೆ ಎಂದರು.
ಡಾ.ಬಸವರಾಜ ಧಾರವಾಡ ಮಾತನಾಡಿ, ಸಭಾಪತಿ ಬಸವರಾಜ ಹೊರಟ್ಟಿ ದಂಪತಿಗಳು ದತ್ತು ಪಡೆದ ಮೇಲೆ ಈ ಶಾಲೆಯಲ್ಲಿ ಹಲವಾರು ಮೂಲಭೂತ ಸೌಕರ್ಯ ಕಲ್ಪಿಸಿ ಕೊಡಲಾಗಿದೆ. ಶೀಘ್ರದಲ್ಲಿಯೇ ಬೃಹತ್ ಕಾರ್ಯಕ್ರಮ ಆಯೋಜಿಸಿ ಪೂರ್ಣಗೊಂಡ ಎಲ್ಲ ಕಾಮಗಾರಿ ಲೋಕಾರ್ಪಣೆ ಗೊಳಿಸಲಾಗುವುದು ಎಂದರು.
ಈ ವೇಳೆ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ, ನಗರಸಭೆ ಸದಸ್ಯೆ ವಿದ್ಯಾವತಿ ಗಡಗಿ, ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಎಂ. ಅಗಡಿ ಪ್ರಭಾರಿ ಮುಖ್ಯೋಪಾಧ್ಯಾಯ ಜಯಲಕ್ಷ್ಮೀ ಅಣ್ಣಿಗೇರಿ ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.