ಜನ-ಜಾನುವಾರುಗಳಿಗೆ ಮಾತ್ರ ಕುಡಿವ ನೀರು

KannadaprabhaNewsNetwork |  
Published : Jul 09, 2026, 04:00 AM IST
ಸೈದಾಪುರ ಸಮೀಪದ ಕಣೇಕಲ್-ಗುಡ್ಲಗುಂಟಾ ಒಳ ರಸ್ತೆ ದುರಸ್ತಿ ಹಾಗೂ ಜಾಲಿಕಂಟಿಗಳ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಮತ್ತು ರೈತರು ಕೈಯಲ್ಲಿ ಬೆತ್ತ ಹಿಡಿದು, ಡೊಳ್ಳು-ತಮಟೆ ಬಾರಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಬಾಗಲಕೋಟೆ: ಮುಂಗಾರು ಮಳೆ ಅಭಾವದಿಂದ ರಾಜ್ಯದ ಬಹುತೇಕ ಜಲಾಶಯಗಳಿಗೆ ಇನ್ನೂ ಸಮರ್ಪಕ ಒಳಹರಿವು ಆರಂಭವಾಗದ ಹಿನ್ನೆಲೆಯಲ್ಲಿ, ಆಲಮಟ್ಟಿ ಜಲಾಶಯದಲ್ಲಿರುವ ಲಭ್ಯವಿರುವ ನೀರನ್ನು ಜನ-ಜಾನುವಾರುಗಳ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ ಎಂದು ಆಲಮಟ್ಟಿ ಆಣೆಕಟ್ಟೆ ವೃತ್ತದ ಕೃಷ್ಣಾ ಭಾಗ್ಯ ಜಲ ನಿಗಮದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ರೈತರು ಸರ್ಕಾರದ ನಿರ್ದೇಶನದನುಸಾರ ಜನ-ಜಾನುವಾರುಗಳ ಕುಡಿವ ನೀರಿನ ಹಿತದೃಷ್ಟಿಯಿಂದ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿವ ನೀರಿನ ತೀವ್ರ ಅಭಾವ ಉಂಟಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹಾಗೂ ರಾಜ್ಯ ಜಲನೀತಿಯ ಪ್ರಕಾರ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಿರುವುದರಿಂದ ಜಲಾಶಯದಲ್ಲಿರುವ ನೀರನ್ನು ಈ ಉದ್ದೇಶಕ್ಕಾಗಿಯೇ ಕಾಯ್ದಿರಿಸಲು ಸೂಚಿಸಲಾಗಿದೆ ಎಂದು ಆಲಮಟ್ಟಿ ಆಣೆಕಟ್ಟು ವೃತ್ತದ ಅಧೀಕ್ಷಕ ಅಭಿಯಂತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎನ್‌ಎಚ್‌ಎಐ ಅಧಿಕಾರಿಗಳೊಂದಿಗೆ ಸಮಾಲೋಚನೆ
ಮಕ್ಕಳ ಸರ್ವಾಂಗೀಣ ಪ್ರಗತಿಗೆ ಕೈಜೋಡಿಸಿ: ಬಿ.ಡಿ. ಬಾಣಕಾರ