ಪಟ್ಟಣದ 1ನೇ ವಾರ್ಡಿನ ವ್ಯಾಪ್ತಿಗೆ ಒಳಪಡುವ ಕೆ.ಕೆ. ರಸ್ತೆಯಲ್ಲಿ ಕುಡಿಯುವ ನೀರು ಪೂರೈಸುವ ಪೈಪ್ ಒಡೆದು ಕಲುಷಿತ ನೀರು ಪೂರೈಕೆಯಾಗುತ್ತಿದೆ. ಪರಿಣಾಮ ಇಲ್ಲಿನ ವಾಸಿಗಳು ಕುಡಿಯುವ ನೀರಿಗೆ ಅಲೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸೋಮವಾರ ಖಾಲಿ ಕೊಡಗಳನ್ನು ಹಿಡಿದು ನಿವಾಸಿಗಳು ಪ್ರತಿಭಟಿಸಿದರು.
---
ಕನ್ನಡಪ್ರಭ ವಾರ್ತೆ ಯಳಂದೂರುಪಟ್ಟಣದ 1ನೇ ವಾರ್ಡಿನ ವ್ಯಾಪ್ತಿಗೆ ಒಳಪಡುವ ಕೆ.ಕೆ. ರಸ್ತೆಯಲ್ಲಿ ಕುಡಿಯುವ ನೀರು ಪೂರೈಸುವ ಪೈಪ್ ಒಡೆದು ಕಲುಷಿತ ನೀರು ಪೂರೈಕೆಯಾಗುತ್ತಿದೆ. ಪರಿಣಾಮ ಇಲ್ಲಿನ ವಾಸಿಗಳು ಕುಡಿಯುವ ನೀರಿಗೆ ಅಲೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸೋಮವಾರ ಖಾಲಿ ಕೊಡಗಳನ್ನು ಹಿಡಿದು ನಿವಾಸಿಗಳು ಪ್ರತಿಭಟಿಸಿದರು.
ಇಲ್ಲಿ ಕಳೆದ 3 ದಿನಗಳ ಹಿಂದೆ ಕುಡಿಯುವ ನೀರಿನ ಪೈಪ್ ಒಡೆದಿದೆ. ಇದರಿಂದ ಕಲುಷಿತ ಚರಂಡಿ ನೀರು ಸೇರಿದಂತೆ, ಕ್ರಿಮಿ-ಕೀಟಗಳು ನೀರಿನೊಂದಿಗೆ ಬೆರೆತಿವೆ. ಈ ಬಗ್ಗೆ ಪಂಚಾಯ್ತಿ ಅಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತಂದಿದ್ದರೂ ಕೂಡ ಇದಕ್ಕೆ ಸ್ಪಂಧಿಸುತ್ತಿಲ್ಲ ಎಂಬುದು ಇಲ್ಲಿನ ವಾಸಿಗಳ ದೂರು.
ಶುದ್ಧ ಕುಡಿಯುವ ನೀರಿಗಾಗಿ ಸ್ಥಳೀಯರು ದೂರದ ಸ್ಥಳಕ್ಕೆ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ಮಹದೇವಮ್ಮ, ಬಸವರಾಜು, ರಜಿನಿ, ದೇವಮ್ಮ, ನಾಗಣ್ಣ ಸೇರಿದಂತೆ ಅನೇಕರ ಆಗ್ರಹವಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.