ಕುಡಿಯುವ ನೀರಿನ ಸಮಸ್ಯೆಆದರೆ ಅಧಿಕಾರಿಗಳೆ ಹೊಣೆ

KannadaprabhaNewsNetwork |  
Published : Dec 14, 2023, 01:30 AM IST
ಮುಂಡಗೋಡ: ಶಾಸಕ ಶಿವರಾಮ ಹೆಬ್ಬಾರ ಪಟ್ಟಣದ ಮಿನಿವಿಧಾನಸೌದ ಸಭಾಂಗಣದಲ್ಲಿ ಅಧಿಕಾರಿಗಳ ಟಾಸ್ಕ್ ಪೋರ್ಸ ಸಭೆ ನಡೆಸಿ ಬಳಿಕ ಮಾತನಾಡಿದರು. | Kannada Prabha

ಸಾರಾಂಶ

ಮುಂಡಗೋಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಸನವಳ್ಳಿ ಜಲಾಶಯದಲ್ಲಿ ಹಾಲಿ ೧೦ ಅಡಿಯಷ್ಟು ಮಾತ್ರ ನೀರು ಸಂಗ್ರಹವಿದ್ದು, ಇದರಿಂದ ೨-೩ ತಿಂಗಳಿಗಷ್ಟೇ ನೀರು ಪೂರೈಸಬಹುದು.

ಮುಂಡಗೋಡ:

ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಒಂದು ವೇಳೆ ಸಮಸ್ಯೆಯಾದರೆ ಅದಕ್ಕೆ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳೆ ಹೊಣೆ ಎಂದು ಶಾಸಕ ಶಿವರಾಮ ಹೆಬ್ಬಾರ ಎಚ್ಚರಿಸಿದರು.

ಇಲ್ಲಿಯ ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳ ಟಾಸ್ಕ್‌ಪೋರ್ಸ್‌ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಈ ಬಾರಿ ಮಳೆಯ ಕೊರತೆಯಿಂದಾಗಿ ಜಲಾಶಯ, ಕೆರೆಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ನೀರಿನ ಸಮಸ್ಯೆ ಎದುರಾಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಹಾಗಾಗಿ ಸಮಸ್ಯೆ ಎದುರಾಗುವ ಮುನ್ನವೇ ಅಗತ್ಯ ಬೋರ್‌ವೆಲ್ ಸಿದ್ಧಗೊಳಿಸಿಕೊಳ್ಳುವ ಮೂಲಕ ನೀರಿನ ಮೂಲ ಹುಡುಕುವ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಗ್ರಾಪಂ ಪಿಡಿಒಗಳು ಈ ಬಗ್ಗೆ ಹೆಚ್ಚಿನ ಗಮನಹರಿಸಿ ನಿಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆ ಅರಿತುಕೊಂಡು ಅದನ್ನು ನೀಗಿಸುವ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದರು.ಮುಂಡಗೋಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಸನವಳ್ಳಿ ಜಲಾಶಯದಲ್ಲಿ ಹಾಲಿ ೧೦ ಅಡಿಯಷ್ಟು ಮಾತ್ರ ನೀರು ಸಂಗ್ರಹವಿದ್ದು, ಇದರಿಂದ ೨-೩ ತಿಂಗಳಿಗಷ್ಟೇ ನೀರು ಪೂರೈಸಬಹುದು. ಇದರಿಂದ ಈ ಬಾರಿ ಬೇಸಿಗೆ ಕಳೆಯುವುದು ಕಷ್ಟ. ಹಾಗಾಗಿ ಪಟ್ಟಣದಲ್ಲಿ ಉತ್ತಮ ಸ್ಥಿತಿಯಲ್ಲಿರುವ ೧೨ ಬೋರ್‌ವೆಲ್‌ಗಳಿಂದ ಸಂಪ್‌ಗಳನ್ನು ತುಂಬಿಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಪಪಂ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.ಕುಡಿಯುವ ನೀರು ಯೋಜನೆಗೆ ಯಾವುದೇ ರೀತಿ ಹಣಕಾಸಿನ ಕೊರತೆ ಇಲ್ಲ. ಬೇಸಿಗೆ ಕಳೆಯುವವರೆಗೆ ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿದ್ದುಕೊಂಡು ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಈ ವೇಳೆ ಮಾಜಿ ಜಿಪಂ ಉಪಾಧ್ಯಕ್ಷ ಎಲ್.ಟಿ. ಪಾಟೀಲ, ತಾಪಂ ಇಒ ಜಗದೀಶ ಕಮ್ಮಾರ, ತಹಸೀಲ್ದಾರ್‌ ಶಂಕರ ಗೌಡಿ, ಪಪಂ ಮುಖ್ಯಾಧಿಕಾರಿ ಚಂದ್ರಶೇಖರ, ಗುಡ್ಡಪ್ಪ ಕಾತೂರ ಮುಂತಾದವರು ಉಪಸ್ಥಿತರಿದ್ದರು.

PREV

Recommended Stories

.ಜಮಖಂಡಿಯಲ್ಲಿ ವಿನಾಕನಿಗೆ ಅದ್ಧೂರಿ ವಿದಾಯ
ರೈತರ ಹಿತ ಕಾಪಾಡುವುದು ಮುಖ್ಯ: ಹನಮಂತ ನಿರಾಣಿ