ಕುಡಿವ ನೀರು ಪೂರೈಕೆ ನಿಷ್ಕಾಳಜಿ ಬೇಡ

KannadaprabhaNewsNetwork |  
Published : May 15, 2024, 01:43 AM IST
ಲಕ್ಷ್ಮೇಶ್ವರ ಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಕುಡಿಯುವ ನೀರು ನಿರ್ವಹಣೆ ಸಭೆಯಲ್ಲಿ ತಾಪಂ ಆಡಳಿತಾಧಿಕಾರಿ ಬಿ. ಜಗದೇವ ಮಾತನಾಡಿದರು. | Kannada Prabha

ಸಾರಾಂಶ

ಜೂನ್ ಅಂತ್ಯದವರೆಗೂ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆ ಉಂಟಾಗದಂತೆ ಪೂರ್ವ ನಿಯೋಜಿತ ರೂಪುರೇಷೆಗಳನ್ನು ತಯಾರಿಸುವಂತೆ ಸೂಚಿಸಿದರು

ಲಕ್ಷ್ಮೇಶ್ವರ: ಮಳೆ ಕೊರತೆ ಉಂಟಾದರೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವುದು ಗ್ರಾಪಂ ಮಟ್ಟದ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಪಂ ಯೋಜನಾ ನಿರ್ದೇಶಕರು ಮತ್ತು ತಾಪಂ ಆಡಳಿತಾಧಿಕಾರಿ ಬಿ.ಜಗದೇವ ಹೇಳಿದರು.

ಪಟ್ಟಣದ ತಾಪಂ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಬರ ನಿರ್ವಹಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಜೂನ್ ಅಂತ್ಯದವರೆಗೂ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆ ಉಂಟಾಗದಂತೆ ಪೂರ್ವ ನಿಯೋಜಿತ ರೂಪುರೇಷೆಗಳನ್ನು ತಯಾರಿಸುವಂತೆ ಸೂಚಿಸಿದರು. ಬಾಡಿಗೆ ಬೋರ್‌ವೆಲ್ ಮೂಲಕ ನೀರು ಒದಗಿಸಲು ಬೋರ್‌ವೆಲ್ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳುವಾಗ ಸರ್ಕಾರದ ನಿರ್ದೇಶನದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಶುದ್ಧ ಕುಡಿಯುವ ನೀರಿನ ಘಟಕ ಚಾಲನೆಯಲ್ಲಿರುವಂತೆ ನೋಡಿಕೊಳ್ಳಲು ಗ್ರಾಮೀಣ ನೀರು ಪೂರೈಕೆ ಅಧಿಕಾರಿಗಳಿಗೆ ಸೂಚಿಸಿದರು. ಬರ ನಿರ್ವಹಣೆ ಬಗ್ಗೆ ನಿಷ್ಕಾಳಜಿ ವಹಿಸದೆ ಎಲ್ಲ ಹಂತದ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ನಿಗದಿತ ಸಮಯದಲ್ಲಿ ನಿರ್ವಹಿಸಬೇಕು. ಅಗತ್ಯವಿರುವ ಕಡೆಗೆ ಟ್ಯಾಂಕರ್ ಮೂಲಕ ನೀರು ಒದಗಿಸಲು ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಮಾತನಾಡಿ, ಜನಸಂಖ್ಯೆ ಅನುಸಾರ ಕುಡಿಯುವ ನೀರು ಪೂರೈಕೆಗೆ ಅಗತ್ಯವಾದ ಬೋರ್‌ವೆಲ್ ಇರುವಂತೆ ನೋಡಿಕೊಳ್ಳಬೇಕು. ನೀರಿನ ಜಲಗಾರ, ಪೈಪ್ ಲೈನ್‌ಗಳ ಸುತ್ತ ಸ್ವಚ್ಚತೆ ಇರುವಂತೆ ನೋಡಿಕೊಳ್ಳಲು ಸೂಚಿಸಿದರು. ಮುಂದಿನ ಕೆಲ ದಿನಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಎಲ್ಲ ಪಿಡಿಓ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಹಸೀಲ್ದಾರ್ ವಾಸುದೇವ ಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ತಾಲೂಕು ವ್ಯಾಪ್ತಿಯ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತಾಧಿಕಾರಿಗಳು, ತೋಟಗಾರಿಕೆ, ಪಶುಪಾಲನೆ, ಅರಣ್ಯ ಮತ್ತು ಕುಡಿಯುವ ನೀರು ಪೂರೈಕೆ ತಾಲೂಕು ಮಟ್ಟದ ಅಧಿಕಾರಿಗಳು, ತಾಪಂ ಸಿಬ್ಬಂದಿಗಳು ಇದ್ದರು.

PREV

Recommended Stories

ಸ್ವಾತಂತ್ರ್ಯಕ್ಕಾಗಿ 6.72 ಲಕ್ಷ ಜನ ಮರಣ
ಸಿಡಿದೆದ್ದ ಧರ್ಮಸ್ಥಳ ಭಕ್ತ ಅಭಿಮಾನಿಗಳು