ಬೇಡಿಕೆ ಈಡೇರಿಸದಿದ್ದರೆ ಕುಡಿಯುವ ನೀರು ಬಂದ್ ಎಚ್ಚರಿಕೆ

KannadaprabhaNewsNetwork |  
Published : May 30, 2025, 01:11 AM IST
29ಎಚ್ಎಸ್ಎನ್19 :  | Kannada Prabha

ಸಾರಾಂಶ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರಸಭೆ ಆವರಣದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪೌರನೌಕರರ ಮುಷ್ಕರವು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ನಮ್ಮ ಬೇಡಿಕೆ ಈಡೇರಿಸದಿದ್ದರೆ ಕುಡಿಯುವ ನೀರನ್ನು ಕೂಡ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ. ಪೌರ ಕಾರ್ಮಿಕರ ಸಮಾನ ಕೆಲಸಕ್ಕೆ ಸಮಾನ ವೇತನ, ನೌಕರರನ್ನು ಕಾಯಂ ಮಾಡುವುದು ಹಾಗೂ ಎಲ್ಲಾ ನೌಕರರಿಗೆ ಎಸ್.ಎಫ್.ಸಿ. ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರಸಭೆ ಆವರಣದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪೌರನೌಕರರ ಮುಷ್ಕರವು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ನಮ್ಮ ಬೇಡಿಕೆ ಈಡೇರಿಸದಿದ್ದರೆ ಕುಡಿಯುವ ನೀರನ್ನು ಕೂಡ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದೇ ವೇಳೆ ಪೌರ ನೌಕರರ ಸಂಘದ ಉಷಾ ಚಂದ್ರಶೇಖರ್ ಮಾಧ್ಯಮದೊಂದಿಗೆ ಮಾತನಾಡಿ, ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು ಚಾಲಕರು, ಲೋಡರ್ಸ್ ಕ್ಲೀನರ್ಸ್, ಗಾರ್ಡನರ್, ಸ್ಯಾನಿಟರಿ ಸೂಪರ್‌ವೈಸರ್‌, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದರು. ಪೌರ ಕಾರ್ಮಿಕರ ಸಮಾನ ಕೆಲಸಕ್ಕೆ ಸಮಾನ ವೇತನ, ನೌಕರರನ್ನು ಕಾಯಂ ಮಾಡುವುದು ಹಾಗೂ ಎಲ್ಲಾ ನೌಕರರಿಗೆ ಎಸ್.ಎಫ್.ಸಿ. ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಆಗ್ರಹಿಸಿದರು. ರಂಜಾನ್‌ ಹಬ್ಬದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ರಾಜ್ಯ ಪದಾಧಿಕಾರಿಗಳೊಂದಿಗೆ, ಮುಖ್ಯಮಂತ್ರಿಗಳ ಎದುರಿಗೆ ಸಭೆ ನಡೆಸಲು ದಿನಾಂಕ ನೀಡುವುದಾಗಿಯೂ ಸಹ ಭರವಸೆ ನೀಡಿದ್ದರು. ಆದರೆ ನಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಪ್ರಸ್ತುತ ಇಲ್ಲಿಯವರೆಗೂ ಚರ್ಚಿಸಲು ಆಹ್ವಾನಿಸಿರುವುದಿಲ್ಲ. ನಗರದಲ್ಲಿ ರಾಜ್ಯ ಪರಿಷತ್‌ನ ಸರ್ವ ಸದಸ್ಯರ ಸಭೆಯನ್ನು ಕರೆದು ರಾಜ್ಯ ಪರಿಷತ್ ಸಭೆಯಲ್ಲಿ ತೀರ್ಮಾನಿಸಿದಂತೆ ಸರ್ಕಾರಕ್ಕೆ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ೪೫ ದಿನಗಳ ಅನಿರ್ದಿಷ್ಟಾವಧಿ ಮುಷ್ಕರದ ನೋಟಿಸ್‌ನ್ನು ನೀಡಲಾಗಿರುತ್ತದೆ. ಪೌರ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಯೋಗೇಶ್, ಶಾಖಾ ಅಧ್ಯಕ್ಷ ಎನ್.ಆರ್. ವೆಂಕಟೇಶ್, ಉಪಾಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ರಂಜನ್, ಖಜಾಂಚಿ ಎಚ್.ಜಿ. ರಾಮು ಇತರರು ಉಪಸ್ಥಿತರಿದ್ದರು.

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್