ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿರುವ ಭಕ್ತರಿಗೆ ತಾಲೂಕು ವೃತ್ತಿನಿರತ ಛಾಯಾಗ್ರಾಹಕರ ಸಂಘದ ವತಿಯಿಂದ ಇಲ್ಲಿನ ಮಂಜುನಾಥ್ ಸ್ಟುಡಿಯೋ ಮುಂಭಾಗ ಮಜ್ಜಿಗೆ, ಪಾನಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಛಾಯಾಗ್ರಾಹಕರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಮಹೇಶ್ ಮಾತನಾಡಿ, ಛಾಯಾಗ್ರಾಹಕರ ಸಂಘವು ಅನೇಕ ಸಮಾಜಿಕ ಕೆಲಸಗಳನ್ನು ಕೈಗೊಳ್ಳುತ್ತಾ ಕಳೆದ ಹದಿನೈದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಬಿಸಿಲು, ಚಳಿ ಎನ್ನದೆ ಧರ್ಮಸ್ಥಳಕ್ಕೆ ಕಾಲ್ನಡಿಗೆಯಲ್ಲಿ ಮಂಜುನಾಥಸ್ವಾಮಿ ದರ್ಶನಕ್ಕೆ ಸಾಗುತ್ತಿರುವ ಭಕ್ತರ ದಣಿವು ನಿವಾರಿಸುವ ಪ್ರಯತ್ನವಾಗಿ ಮಜ್ಜಿಗೆ, ಪಾನಕ ವಿತರಿಸಲಾಗುತ್ತಿದೆ ಎಂದರು.
ಬೇಲೂರು: ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿರುವ ಭಕ್ತರಿಗೆ ತಾಲೂಕು ವೃತ್ತಿನಿರತ ಛಾಯಾಗ್ರಾಹಕರ ಸಂಘದ ವತಿಯಿಂದ ಇಲ್ಲಿನ ಮಂಜುನಾಥ್ ಸ್ಟುಡಿಯೋ ಮುಂಭಾಗ ಮಜ್ಜಿಗೆ, ಪಾನಕ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಛಾಯಾಗ್ರಾಹಕರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಮಹೇಶ್ ಮಾತನಾಡಿ, ಛಾಯಾಗ್ರಾಹಕರ ಸಂಘವು ಅನೇಕ ಸಮಾಜಿಕ ಕೆಲಸಗಳನ್ನು ಕೈಗೊಳ್ಳುತ್ತಾ ಕಳೆದ ಹದಿನೈದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಬಿಸಿಲು, ಚಳಿ ಎನ್ನದೆ ಧರ್ಮಸ್ಥಳಕ್ಕೆ ಕಾಲ್ನಡಿಗೆಯಲ್ಲಿ ಮಂಜುನಾಥಸ್ವಾಮಿ ದರ್ಶನಕ್ಕೆ ಸಾಗುತ್ತಿರುವ ಭಕ್ತರ ದಣಿವು ನಿವಾರಿಸುವ ಪ್ರಯತ್ನವಾಗಿ ಮಜ್ಜಿಗೆ, ಪಾನಕ ವಿತರಿಸಲಾಗುತ್ತಿದೆ ಎಂದರು.ತಾಲೂಕು ಘಟಕದ ಅಧ್ಯಕ್ಷ ಹಗರೆ ಚಂದ್ರಶೇಖರ್ ಮಾತನಾಡಿ, ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ತೆರಳುವ ಭಕ್ತರ ಸಂಖ್ಯೆ ಪ್ರತಿವರ್ಷ ಏರುತ್ತಿದ್ದು, ಪಾದಯಾತ್ರಿಗಳು ಜಾಗರೂಕತೆಯಿಂದ ಸಂಚರಿಸಬೇಕು. ಮುಖ್ಯ ಹೆದ್ದಾರಿ ರಸ್ತೆ ಹಾಗೂ ಘಾಟ್‌ನಲ್ಲಿ ನೀರಿನ ಬಾಟೆಲ್‌ಗಳನ್ನು ಎಲ್ಲೆಂದರಲ್ಲಿ ಎಸೆಯದೆ ಪರಿಸರವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ತಾಲೂಕು ಸಂಘದ ಮಾಜಿ ಅಧ್ಯಕ್ಷರಾದ ಎ.ಬಿ.ಪ್ರಕಾಶ್, ರಾಘವೇಂದ್ರ ಹೊಳ್ಳ, ಪ್ರಧಾನ ಕಾರ್ಯದರ್ಶಿ ಎಚ್.ಜೆ. ಸಂದೀಪ್, ಸಹಕಾರ್ಯದರ್ಶಿ ಅಶ್ವತ್, ಖಜಾಂಚಿ ನವೀನ್, ಸಂಘಟನಾ ಕಾರ್ಯದರ್ಶಿ ಪ್ರಭುರಾವ್, ನಿರ್ದೇಶಕರಾದ ಲಕ್ಷ್ಮೀ ಕಾಂತ್, ನೀಡಗೊಡು ರವಿ, ಮಧು, ಸುನೀಲ್, ಯದುನಂದನ, ಗುರು ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.