ಕನ್ನಡಪ್ರಭ ವಾರ್ತೆ ಶಹಾಪುರ
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೌಲಭ್ಯವು ಈ ಹಿಂದೆಯೇ ಪ್ರಾರಂಭವಾಗಬೇಕಾಗಿತ್ತು. ತಜ್ಞ ವೈದ್ಯರು ಇಲ್ಲದ ಪ್ರಯುಕ್ತ ವಿಳಂಬವಾಗಿದೆ. ಇತ್ತೀಚಿಗೆ ಆಸ್ಪತ್ರೆಗೆ ರೇಡಿಯೋಲಾಜಿ ತಜ್ಞ ವೈದ್ಯರು ನೇಮಕವಾಗಿದ್ದಾರೆ. ಈ ಆಸ್ಪತ್ರೆ ಸಾರ್ವಜನಿಕರಿಗೆ ಸೌಲಭ್ಯ ಕೊಡುವಲ್ಲಿ ಮುಂಚೂಣಿಯಲ್ಲಿರುವುದು ಖುಷಿ ತಂದಿದೆ ಎಂದರು.
ಆಡಳಿತ ವೈದ್ಯಾಧಿಕಾರಿ ಡಾ. ಯಲ್ಲಪ್ಪ ಪಾಟೀಲ್ ಮಾತನಾಡಿ, ಈ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಹೊರಗಡೆ ಖಾಸಗಿಯಾಗಿ ಮಾಡಿಸಿದರೆ 500 ರಿಂದ 700 ರು.ಗಳವರೆಗೆ ಖರ್ಚು ಬರುತ್ತದೆ. ಸಾರ್ವಜನಿಕರು ಸಹಕಾರ ಕೊಟ್ಟರೆ ಆಸ್ಪತ್ರೆಯನ್ನು ಜಿಲ್ಲೆಯಲ್ಲೇ ಮಾದರಿಯ ಹಾಸ್ಪಿಟಲ್ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ. ಈ ಆಸ್ಪತ್ರೆಗೆ ಬರುವ ಬಹುತೇಕ ರೋಗಿಗಳು ಆರ್ಥಿಕ ಸಂಕಷ್ಟದಿಂದ ಬಳಲುವವರೆ ಹೆಚ್ಚು. ಈ ಆಸ್ಪತ್ರೆಯಲ್ಲಿ ಅಂತಹವರಿಗೆ ಉತ್ತಮ ಸೇವೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.ಆಸ್ಪತ್ರೆಯಲ್ಲಿ ಈಗಾಗಲೇ ಹಲವಾರು ಬಗೆಯ ಶಸ್ತ್ರ ಚಿಕಿತ್ಸೆ ಉಚಿತವಾಗಿ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಯಾರಾದರೂ ಹಣಕ್ಕೆ ಬೇಡಿಕೆ ಇಟ್ಟರೆ ನನ್ನ ಗಮನಕ್ಕೆ ತರಬೇಕು ಎಂದು ಜನರಲ್ಲಿ ಮನವಿ ಮಾಡಿದರು.
- ಡಾ. ಯಲ್ಲಪ್ಪ ಪಾಟೀಲ್, ಆಡಳಿತ ವೈದ್ಯಾಧಿಕಾರಿ ಹಾಗೂ ಶಸ್ತ್ರ ಚಿಕಿತ್ಸೆ ತಜ್ಞರು, ಸಾರ್ವಜನಿಕ ಆಸ್ಪತ್ರೆ ಶಹಾಪುರ