ಧರ್ಮಸ್ಥಳ ಪಾದಯಾತ್ರಿಗಳಿಗೆ ಮುಂಡಾಜೆ, ಚಾರ್ಮಾಡಿಯಲ್ಲಿ ಆರೋಗ್ಯ ಶಿಬಿರಕ್ಕೆ ಚಾಲನೆ

KannadaprabhaNewsNetwork | Published : Mar 6, 2024 2:20 AM

ಸಾರಾಂಶ

ಚಾರ್ಮಾಡಿ, ಮುಂಡಾಜೆ, ಧರ್ಮಸ್ಥಳ, ಬೂಡುಜಾಲು, ಎಸ್.ಡಿ.ಎಂ ಡಿಎಡ್ ಕಾಲೇಜು ಇಲ್ಲಿ ಪಾದಯಾತ್ರಿಗಳಿಗೆ ಉಚಿತ ಆರೋಗ್ಯ ಶಿಬಿರ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಪಾದಯಾತ್ರಿಗಳಿಗೆ ತುರ್ತು ಆರೋಗ್ಯ ಸೇವೆ ನೀಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಳ್ತಂಗಡಿ: ಮಹಾಶಿವರಾತ್ರಿ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಸಾವಿರಾರು ಪಾದಯಾತ್ರಿಗಳ ಆರೋಗ್ಯ ರಕ್ಷಣೆಯ ಉದ್ದೇಶದಿಂದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಸೂಚನೆಯಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಉಚಿತ ವೈದ್ಯಕೀಯ ಸೇವೆಯನ್ನು ಬುಧವಾರದಿಂದ ಪ್ರಾರಂಭಿಸಲಾಯಿತು. ಪಾದಯಾತ್ರಿಗಳ ಆರೋಗ್ಯ ಸೇವೆಗಾಗಿ ತೆರೆಯಲಾಗಿರುವ ಮುಂಡಾಜೆ ಹಾಗೂ ಚಾರ್ಮಾಡಿ ಆರೋಗ್ಯ ಶಿಬಿರಗಳಿಗೆ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ರವಿ ಹಾಗೂ ಗಣೇಶ್‌ ಚಾಲನೆ ನೀಡಿದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ. ದೇವೇಂದ್ರ ಕುಮಾರ್. ಪಿ, ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಶಿಬಿರದ ಮೇಲ್ವಿಚಾರಕ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು. ಜಗನ್ನಾಥ. ಎಂ ಕಾರ್ಯಕ್ರಮ ನಡೆಸಿಕೊಟ್ಟರು. ಚಾರ್ಮಾಡಿ, ಮುಂಡಾಜೆ, ಧರ್ಮಸ್ಥಳ, ಬೂಡುಜಾಲು, ಎಸ್.ಡಿ.ಎಂ ಡಿಎಡ್ ಕಾಲೇಜು ಇಲ್ಲಿ ಪಾದಯಾತ್ರಿಗಳಿಗೆ ಉಚಿತ ಆರೋಗ್ಯ ಶಿಬಿರ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಪಾದಯಾತ್ರಿಗಳಿಗೆ ತುರ್ತು ಆರೋಗ್ಯ ಸೇವೆ ನೀಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಅಗತ್ಯವಿರುವ ಔಷಧಿ, ಮುಲಾಮು, ಸ್ಟ್ರೇ, ಬ್ಯಾಂಡೇಜ್, ಗ್ಲುಕೋಸ್ ಇತ್ಯಾದಿಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ ಎಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.ಧರ್ಮಸ್ಥಳ: ಉಚಿತ ವಿವಾಹ ನೋಂದಣಿ ಕಚೇರಿ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ೨೦೨೪ರ ಮೇ 1ರಂದು ಸಂಜೆ ಗಂಟೆ ೬.೪೫ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೫೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಪೂರಕವಾಗಿ ವಿವಾಹ ನೋಂದಣಿ ಕಚೇರಿಯನ್ನು ದೇವಸ್ಥಾನದ ಬಳಿ ಇರುವ ಪ್ರವಚನ ಮಂಟಪದಲ್ಲಿ ವೀರೇಂದ್ರ ಹೆಗ್ಗಡೆ ಅವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಭಾನುವಾರ ಉದ್ಘಾಟಿಸಿ ಶುಭ ಹಾರೈಸಿದರು.ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ದೇವಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್‌, ನಿವೃತ್ತ ಮುಖ್ಯ ಶಿಕ್ಷಕ ಧರ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ೦೮೨೫೬-೨೬೬೬೪೪, ವಾಟ್ಸಪ್ ನಂ. ೯೬೬೩೪೬೪೬೪೮, ೮೧೪೭೨೬೩೪೨೨ಸಂಪರ್ಕಿಸಬಹುದು.

Share this article