ಟಂಟಂ ಪಲ್ಟಿಯಾಗಿ ಚಾಲಕ ಸಾವು

KannadaprabhaNewsNetwork |  
Published : Jul 31, 2026, 03:00 AM IST
ಅಪಘಾತ | Kannada Prabha

ಸಾರಾಂಶ

ದೇವರಹಿಪ್ಪರಗಿ ತಾಲೂಕಿನ ದೇವೂರ ಗ್ರಾಮದ ಸಮೀಪ ಟಂಟಂ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ತಾಲೂಕಿನ ದೇವೂರ ಗ್ರಾಮದ ಸಮೀಪ ಟಂಟಂ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.

ಕ್ಷೇತ್ರದ ತುಂಬಗಿ ಗ್ರಾಮದ ಶಿವಾನಂದ ಸೋಮರಾಯ ಸಾಲೋಟಗಿ (29) ಮೃತ ಚಾಲಕ. ಗ್ರಾಮದಿಂದ ವಿಜಯಪುರಕ್ಕೆ ಟಂಟಂ ವಾಹನ ಬಾಡಗಿಗೆ ಹೋಗಿ ಬರುವಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಪಿಎಸ್ಐ ಸಚಿನ್ ಆಲಮೇಲಕರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಡಿಯಾಪೂರ ಸಾಂತ್ವನ:ಜಿಪಂ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ ಯಡಿಯಾಪೂರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ನಂತರ ಆಸ್ಪತ್ರೆಯ ವೈದ್ಯರಿಗೆ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿ,ಕೈಲಾದ ಸಹಾಯ ಮಾಡಿ ಸರ್ಕಾರದಿಂದ ಪರಿಹಾರ ನೀಡುವಂತೆ ಒತ್ತಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಿಕೋದ್ಯಮದಲ್ಲಿ ಉದ್ಯೋಗ ಕಸಿದುಕೊಳ್ಳುತ್ತಿರುವ ಎಐ
ಮಹಾವೀರ ಸಹಕಾರಿ ಬ್ಯಾಂಕ್‌ಗೆ ₹4.01 ಕೋಟಿ ಲಾಭ