ಹಾವೇರಿ: ಜಿಲ್ಲೆಯ ಹಾನಗಲ್ಲ ಡಿಪೋಗೆ ಸೇರಿದ ಸಾರಿಗೆ ಸಂಸ್ಥೆಯ ಕಂಡಕ್ಟರ್ ಕಂ ಡ್ರೈವರ್ ಮಾರ್ಗದ ಮಧ್ಯದಲ್ಲಿ ವಾಹನ ನಿಲ್ಲಿಸಿ, ಬಸ್‌ನಲ್ಲಿಯೇ ನಮಾಜ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹಾನಗಲ್ಲನಿಂದ ವಿಶಾಲಗಡ್‌ಗೆ ತೆರಳುತ್ತಿದ್ದ ಬಸ್‌ನಲ್ಲಿ ಡ್ರೈವರ್ ಕಂ ಕಂಡಕ್ಟರ್ ಎ.ಆರ್. ಮುಲ್ಲಾ ಎಂಬುವವರು ನಮಾಜ್ ಮಾಡಿದ್ದಾರೆ.ಮಂಗಳವಾರ ಸಂಜೆ ಹುಬ್ಬಳ್ಳಿ ಮತ್ತು ಹಾವೇರಿ ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾರೆ. ಪ್ರಯಾಣಿಕರು ಬಸ್‌ನಲ್ಲಿ ಇದ್ದರೂ ನಮಾಜ್ ಮಾಡಿದ್ದು, ಪ್ರಯಾಣಿಕರು ನಮಾಜ್ ಮಾಡುವ ದೃಶ್ಯ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ.ಕರ್ತವ್ಯದ ಅವಧಿಯಲ್ಲಿಯೇ ಡ್ರೈವರ್ ಕಂ ಕಂಡಕ್ಟರ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಾರ ಆಕ್ರೋಶ ವ್ಯಕ್ತವಾಗುತ್ತಿದೆ.
ವರದಿ ನೀಡಲು ಸೂಚನೆ: ಬಸ್ ನಿಲ್ಲಿಸಿ, ಬಸ್ ನಲ್ಲಿಯೇ ನಮಾಜ್ ಮಾಡಿರುವ ವಿಡಿಯೋ ಗಮನಕ್ಕೆ ಬಂದಿದೆ. ಕರ್ತವ್ಯದ ಅವಧಿಯ ವೇಳೆ ಬಸ್ ನಲ್ಲಿ ನಮಾಜ್ ಮಾಡಲು ಅವಕಾಶ ಇಲ್ಲ. ಘಟನೆ ನಡೆದ ಸ್ಥಳ ಹಾಗೂ ಯಾಕೆ ಹೀಗೆ ಮಾಡಿದರು ಎಂಬುದನ್ನು ಪರಿಶೀಲಿಸಿ ವರದಿ ನೀಡುವಂತೆ ಸಂಸ್ಥೆಯ ಭದ್ರತಾ ವಿಭಾಗಕ್ಕೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಾವೇರಿ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ ಜಿ. ವಿಜಯಕುಮಾರ ತಿಳಿಸಿದರು.ಕೊರೋನಾ ವೇಳೆ ಲೂಟಿ ತನಿಖೆಯ ವರದಿ ಶೀಘ್ರ ಬಹಿರಂಗ: ಸಲೀಂ ಅಹ್ಮದ್ಹಾವೇರಿ: ಕೊರೋನಾ ಸಂದರ್ಭದಲ್ಲಿ ಆಗಿರುವ ₹2 ಸಾವಿರ ಕೋಟಿ ಲೂಟಿ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲಿ ವರದಿ ಬರಲಿದೆ. ಆಗ ಯಾರು ಜೈಲಿಗೆ ಹೋಗುತ್ತಾರೆ ಎಂಬುದು ಗೊತ್ತಾಗಲಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.
ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಟೀಕಿಸುವ ನೈತಿಕ ಹಕ್ಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಇಲ್ಲ ಎಂದರು.ಪಾಕಿಸ್ತಾನದೊಂದಿಗೆ ಯುದ್ಧ ಅಗತ್ಯವಿಲ್ಲ ಎಂಬ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ದೇಶದ ರಕ್ಷಣೆ ವಿಷಯದಲ್ಲಿ ಬದ್ಧರಾಗಿ ಇರುತ್ತೇವೆ ಎಂದಿದ್ದಾರೆ. ಈ ವಿಷಯ ಹಾಗೂ ಸನ್ನಿವೇಶದಲ್ಲಿ ಯಾರು ಕೂಡ ರಾಜಕಾರಣ ಮಾಡಬಾರದು. ಆತಂಕವಾದಿಗಳನ್ನು ಮಟ್ಟ ಹಾಕುವಲ್ಲಿ ಕೇಂದ್ರ ಕೈಗೊಳ್ಳುವ ನಿರ್ಣಯಕ್ಕೆ ಬದ್ಧರಾಗಿ ಇರುತ್ತೇವೆ ಎಂದರು.ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅವರು ಹಾಗೆಲ್ಲ ಸಹನೆ ಕಳೆದುಕೊಳ್ಳುವುದಿಲ್ಲ. ಆದರೆ, ಬೆಗಾವಿಯಲ್ಲಿ ನಮ್ಮ ಪಕ್ಷದ ಕಾರ್ಯಕ್ರಮ ಕೆಡಿಸುವ ಉದ್ದೇಶದಿಂದ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದರು. ಪಾಕ್ ಪರ ಯಾರೇ ಘೋಷಣೆ ಕೂಗಿದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.