ಕರ್ನಾಟಕ ಚಾಲಕರ ಒಕ್ಕೂಟದ ವತಿಯಿಂದ ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮ ಘಟಕದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಹಾಗೂ ಚಾಲಕರ ಸಮಾವೇಶವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಯಾದಗಿರಿ
ಕರ್ನಾಟಕ ಚಾಲಕರ ಒಕ್ಕೂಟದ ವತಿಯಿಂದ ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮ ಘಟಕದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಹಾಗೂ ಚಾಲಕರ ಸಮಾವೇಶವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಸಾನಿಧ್ಯವನ್ನು ಪರಮಪೂಜ್ಯ ನಿಜಲಿಂಗ ತಾತ ವಹಿಸಿದ್ದರು. ಕಾಂಗ್ರೆಸ್ ಹಿರಿಯ ಮುಖಂಡ ಶರಣಪ್ಪ ಮಾನೆಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕರ್ನಾಟಕ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಬಸ್ಸುಗೌಡ ಚಟ್ನಳ್ಳಿ ಮಾತನಾಡಿ, ಪ್ರತಿಯೊಬ್ಬ ಚಾಲಕರು ತಮ್ಮ ವಾಹನದ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ವಾಹನ ಖರೀದಿಸಿದ ನಂತರ ಅದನ್ನು ನೋಂದಣಿ ಮಾಡಿಸಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದರ ಜತೆಗೆ, ವಿಮೆ (ಇನ್ಶೂರೆನ್ಸ್) ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದರು.
ವಾಹನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಸರಿಯಾಗಿದ್ದರೆ ಅನಿರೀಕ್ಷಿತ ಅಪಘಾತಗಳು ಹಾಗೂ ಇತರ ತೊಂದರೆಗಳು ಎದುರಾದ ಸಂದರ್ಭದಲ್ಲಿ ವಿಮೆ ಮತ್ತು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ. ಚಾಲಕರು ತಮ್ಮ ವಾಹನದ ದಾಖಲೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ವಾಹನದ ನೋಂದಣಿ ಪ್ರಮಾಣ ಪತ್ರ, ವಿಮೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಕಾಲಕಾಲಕ್ಕೆ ನವೀಕರಿಸಿಕೊಳ್ಳಬೇಕು. ಇಂತಹ ಮುನ್ನೆಚ್ಚರಿಕೆ ಕ್ರಮಗಳು ಚಾಲಕರಿಗೆ ಭವಿಷ್ಯದಲ್ಲಿ ಎದುರಾಗಬಹುದಾದ ಕಾನೂನು ಮತ್ತು ಆರ್ಥಿಕ ತೊಂದರೆಗಳನ್ನು ತಪ್ಪಿಸಲು ಸಹಕಾರಿಯಾಗುತ್ತವೆ ಎಂದು ಚಾಲಕರಿಗೆ ತಿಳಿಸಿದರು.
ಅನಿಲ್ ಕುಮಾರ ಹೆದಗಿಮದ್ರಾ, ವೀರಭದ್ರಪ್ಪ ಯಡಳ್ಳಿ, ಅಶೋಕ ಗಣಪುರ, ಶರಣಪ್ಪ ಮೋಟ್ನಳ್ಳಿ, ಕರ್ನಾಟಕ ಚಾಲಕರ ಆಟೋ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಆಟೋ ಸಾಂಗ್ಲಿಯಾನಾ, ಈಶಪ್ಪ, ರೇಖಾ ನಿಂಗಪ್ಪ, ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕದ ಜಿಲ್ಲಾಧ್ಯಕ್ಷ ದೇವೇಂದ್ರಪ್ಪ ಉಪ್ಪಾರು, ಚಾಲಕರ ಸಂಘದ ಅಧ್ಯಕ್ಷ ಮಾರ್ತಾಂಡಪ್ಪ, ಯಾದಗಿರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಉಪಾಧ್ಯಕ್ಷರಾದ ಚಿಕ್ಕಣ್ಣ ಮತ್ತು ವಿಶ್ವನಾಥ ಸಾಹುಕಾರ, ಬಸ್ಸು ಗುಳಗಿ, ಶಹಾಪುರ ತಾಲೂಕು ಅಧ್ಯಕ್ಷ ಹೊನ್ನಪ್ಪ ಜಂಗ್ಲಿ, ಉಪಾಧ್ಯಕ್ಷ ಹನುಮಂತ, ಶಿವು, ಮಂಜು, ಮಲ್ಲು, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ರಾಜು ಮಡಿವಾಳ, ಗೌರವಾಧ್ಯಕ್ಷ ಮೌಲಾ ಪಟೇಲ್, ಕಾಸಿಂ ಅಲಿ, ಶೇಖರ್ ಸೇರಿದಂತೆ ಒಕ್ಕೂಟದ ಇತರ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು. ಮಾದೇವಪ್ಪ ಶಿವಾಲ ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.