ಅಪ್ರಾಪ್ತನಿಂದ ವಾಹನ ಚಾಲನೆ: ಮಾಲೀಕರಿಗೆ ₹25 ಸಾವಿರ ದಂಡ

KannadaprabhaNewsNetwork |  
Published : Feb 25, 2025, 12:45 AM IST
ಕ್ಯಾಪ್ಷನ24ಕೆಡಿವಿಜಿ35 ದಾವಣಗೆರೆಯಲ್ಲಿ ಅಪ್ರಾಪ್ತ ಬಾಲಕ ಆಕ್ಟಿವ್ ಹೊಂಡ ಬೈಕ್ ಚಾಲನೆ ಮಾಡಿದ ಹಿನ್ನಲೆಯಲ್ಲಿ ಅವರ ಪಾಲಕರಿಗೆ ನ್ಯಾಯಾಲಯ ದಂಡ ವಿಧಿಸಿದೆ. | Kannada Prabha

ಸಾರಾಂಶ

ದಾವಣಗೆರೆ: ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪ್ರಾಪ್ತನೊಬ್ಬ ಭಾನುವಾರ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದಿದ್ದು, ಸಂಚಾರಿ ಠಾಣೆ ಪೊಲೀಸರು ತಪಾಸಣೆ ನಡೆಸಿದಾಗ ಬೈಕ್ ಸವಾರ ಅಪ್ರಾಪ್ತ ಎಂಬುದು ತಿಳಿದುಬಂದಿದೆ.

ದಾವಣಗೆರೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪ್ರಾಪ್ತನೊಬ್ಬ ಭಾನುವಾರ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದಿದ್ದು, ಸಂಚಾರಿ ಠಾಣೆ ಪೊಲೀಸರು ತಪಾಸಣೆ ನಡೆಸಿದಾಗ ಬೈಕ್ ಸವಾರ ಅಪ್ರಾಪ್ತ ಎಂಬುದು ತಿಳಿದುಬಂದಿದೆ.

ವಾಹನ ಜಪ್ತಿ ಮಾಡಿ ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿದರು. ಬಳಿಕ 3ನೇ ಎಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬೈಕ್ ಮಾಲೀಕ ಮಹಮ್ಮದ್ ಷಫಿ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಲಾಯಿತು. ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಅವಕಾಶ ಕೊಟ್ಟಿದ್ದಕ್ಕೆ ಮಾಲೀಕರಿಗೆ ಕೋರ್ಟ್‌ ₹25 ಸಾವಿರ ದಂಡ ವಿಧಿಸಿದೆ. ಈ ಸಂದರ್ಭದಲ್ಲಿ ಪಿಎಸ್‌ಐ ಡಿ.ಎಚ್.ನಿರ್ಮಲ, ಶೈಲಜ ಇತರೆ ಅಧಿಕಾರಿ ಸಿಬ್ಬಂದಿ ಇದ್ದರು.

- - -

-24ಕೆಡಿವಿಜಿ35:

ದಾವಣಗೆರೆಯಲ್ಲಿ ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಾಲನೆ ಮಾಡಿದ ಆರೋಪದ ಹಿನ್ನೆಲೆ ಸಂಚಾರಿ ಠಾಣೆ ಪೊಲೀಸರು ವಾಹನ ಜಪ್ತಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಕ್ಷಿಣ ಟಿಕೆಟ್ ಕೇಳೋಕೆ ನಮಗ್ಯಾರ ಅಪ್ಪಣೆ ಬೇಕಿಲ್ಲ: ತಾಹೀರ್
ಪ್ರದೀಪ್ ಈಶ್ವರ್ ಶಾಸಕರ ಕೆಲಸ ಮಾಡಿ: ಸುಷ್ಮಾ ಶ್ರೀನಿವಾಸ್