ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ದೇವರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳಿಂದ ಶಿಕ್ಷಕರ ಪ್ರತಿಭೆ ಹೊರಹೊಮ್ಮುವುದಲ್ಲದೇ ಮಕ್ಕಳಲಿರುವ ಪ್ರತಿಭೆಗಳು ಬೆಳಗಲು ಸಹಕಾರಿಯಾಗಿದೆ ಎಂದು ನುಡಿದರು.
ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಹದೇವು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರಲ್ಲಿ ಅಂತರ್ಗತವಾಗಿ ಅಡಗಿರುವ ಪ್ರತಿಭೆಯ ಅನಾವರಣಕ್ಕೆ ಸಹ ಪಠ್ಯ ಚಟುವಟಿಕೆಗಳು ಪೂರಕವಾಗಿವೆ.ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಉಮ್ಮಡಹಳ್ಳಿ ನಾಗರಾಜು, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಗಲ ಶಿವಣ್ಣ, ಕಾರ್ಯದರ್ಶಿ ಶಿವಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎನ್.ನಂದೀಶ್, ಕಾರ್ಯದರ್ಶಿ ಚಂದ್ರಶೇಖರ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಮಹಾಂತ ದೇವರು, ಸುರೇಖಾ, ಮುಖ್ಯ ಶಿಕ್ಷಕರಾದ ಡಾ.ಎಸ್.ಸಿ.ಮಂಗಳ, ಮುಖ್ಯ ಶಿಕ್ಷಕರಾದ ಆರ್.ಎನ್.ದೇವರಾಜು, ಎ.ಬಸವರಾಜು, ಶಿಕ್ಷಣ ಸಂಯೋಜಕ ಬಿ.ಎಲ್.ಮಧುಸೂಧನ, ಸ್ವಾಮಿ, ಭಾಸ್ಕರ್, ನಾಗರಾಜು ಸೇರಿದಂತೆ ಶಿಕ್ಷಕರು ಭಾಗವಹಿಸಿದ್ದರು.
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ನಡೆದ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಹದೇವು ಬಹುಮಾನ ವಿತರಣೆ ಮಾಡಿದರು.
ಕನ್ನಡಪ್ರಭ ವಾರ್ತೆ ಮಂಡ್ಯಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಆಯುಷ್ ಇಲಾಖೆ, ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಧನ್ವಂತರಿ ಜಯಂತಿ ಅಂಗವಾಗಿ ಒಂಬತ್ತನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅ.೨೯ರಂದು ಬೆಳಗ್ಗೆ ೧೧ ಗಂಟೆಗೆ ಮಂಡ್ಯದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.