ಬರ: ಶಿರಸಿ ತಾಲೂಕಲ್ಲಿ ಶೇ. 95 ಸರ್ವೇ ಪೂರ್ಣ: ಮಧುಕರ ನಾಯ್ಕ

KannadaprabhaNewsNetwork |  
Published : Nov 04, 2026, 01:30 AM IST
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚನ್ನಬಸಪ್ಪ ಹಾವಣಗಿ, ವಿವಿಧ ಇಲಾಖಾ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ರೈತರು ಈಗಾಲೇ ಬ್ಯಾಂಕುಗಳ ಮೂಲಕ ಬೆಳೆಸಾಲ ಮಾಡಿದ್ದಾರೆ. ಈ ಸಲ ಬರಗಾಲ ಬಿದ್ದಿರುವುದರಿಂದ ಬೆಳೆ ಸಾಲವನ್ನು ಮರುಪಾವತಿ ಮಾಡುವುದು ರೈತರಿಗೆ ಸಾಧ್ಯವಾಗುವುದಿಲ್ಲ ಎಂಬುದನ್ನು ಅರಿತು ಸರ್ಕಾರ ಬೆಳೆಸಾಲ ಮರುಪಾವತಿ 36 ತಿಂಗಳ ಅವಧಿಗೆ ವಿಸ್ತರಣೆ ಮಾಡಿದೆ. ಜತೆಗೆ ಹೊಸ ಬೆಳೆಸಾಲ ನೀಡಬೇಕೆಂದು ಆದೇಶವಾಗಿದೆ.

ಶಿರಸಿ: ಮಳೆ ಕೊರತೆಯಿಂದ ರೈತರು ಸಾಕಷ್ಟು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸರ್ಕಾರ ಈಗಾಗಲೇ ಶಿರಸಿ ತಾಲೂಕನ್ನು ಬರಪೀಡಿತ ತಾಲೂಕೆಂದು ಘೋಷಣೆ ಮಾಡಿದೆ. ಪ್ರತಿಯೊಬ್ಬ ರೈತರಿಗೆ ಪರಿಹಾರ ರೂಪದಲ್ಲಿ ₹2500 ಪರಿಹಾರ ನೀಡಬೇಕೆಂದು ಅ. 23ರಂದು ಸರ್ಕಾರ ಆದೇಶಿಸಿದೆ. ಅಲ್ಲದೇ ತಾಲೂಕಿನಲ್ಲಿ ಶೇ. 95ರಷ್ಟು ಸರ್ವೇ ಕಾರ್ಯ ಪೂರ್ಣಗೊಂಡಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಧುಕರ ನಾಯ್ಕ ತಿಳಿಸಿದರು.

ಸೋಮವಾರ ನಗರದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರೈತರು ಈಗಾಲೇ ಬ್ಯಾಂಕುಗಳ ಮೂಲಕ ಬೆಳೆಸಾಲ ಮಾಡಿದ್ದಾರೆ. ಈ ಸಲ ಬರಗಾಲ ಬಿದ್ದಿರುವುದರಿಂದ ಬೆಳೆ ಸಾಲವನ್ನು ಮರುಪಾವತಿ ಮಾಡುವುದು ರೈತರಿಗೆ ಸಾಧ್ಯವಾಗುವುದಿಲ್ಲ ಎಂಬುದನ್ನು ಅರಿತು ಸರ್ಕಾರ ಬೆಳೆಸಾಲ ಮರುಪಾವತಿ 36 ತಿಂಗಳ ಅವಧಿಗೆ ವಿಸ್ತರಣೆ ಮಾಡಿದೆ. ಜತೆಗೆ ಹೊಸ ಬೆಳೆಸಾಲ ನೀಡಬೇಕೆಂದು ಆದೇಶವಾಗಿದೆ ಎಂದರು.

ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಬಿ.ಪಿ. ಸತೀಶ್ ಅವರು, ತಾಲೂಕಿನಲ್ಲಿ 2026- 27ನೇ ಸಾಲಿನಲ್ಲಿ ತಾಲೂಕು ಪಂಚಾಯಿತಿ ಅನುದಾನದ ಆಯವ್ಯಯ ಮಂಡನೆ ಕುರಿತು ಪ್ರಸ್ತಾಪಿಸಿದರು. ಆರ್ಥಿಕ ವರ್ಷದಲ್ಲಿ ಬಿಡುಗಡೆಯಾದ ಮೊತ್ತ ಹಾಗೂ ವಿವಿಧ ಇಲಾಖೆಗಳಿಗೆ ಮೂಲ ಸೌಕರ್ಯಗಳಿಗಾಗಿ ಅನುದಾನದ ಹಂಚಿಕೆ ಕುರಿತು ಮಾಹಿತಿ ನೀಡಿದರು.ವಿವಿಧ ಇಲಾಖೆಗಳಿಗೆ 2026- 27ನೇ ಸಾಲಿನಲ್ಲಿ ವಿವಿಧ ಲೆಕ್ಕಶೀರ್ಷಿಕೆಗಳಡಿ ಮಂಜೂರಾದ ಕಾಮಗಾರಿಗಳ ಪ್ರಗತಿ ಹಾಗೂ ಬಿಡುಗಡೆಯಾದ ಅನುದಾನ ಹಾಗೂ ಖರ್ಚು ವೆಚ್ಚಗಳ ಕುರಿತು ಇಲಾಖಾವಾರು ಪರಿಶೀಲನೆ ನಡೆಸಿದರು.

ಜೆಜೆಎಂ ಇಲಾಖೆಯ ಎಇಇ ಆಶಾ ಮಾತನಾಡಿ, ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಆದೇಶದಂತೆ ಆದ್ಯತೆ ಮೇರೆಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆ ಹಾಗೂ ಕಾಮಗಾರಿ ಮುಕ್ತಾಯಗೊಳಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿ ಪ್ರಗತಿ ಸಾಧಿಸಲು ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚನ್ನಬಸಪ್ಪ ಹಾವಣಗಿ, ವಿವಿಧ ಇಲಾಖಾ ಅಧಿಕಾರಿಗಳು, ತಾಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌