ಬರ ಹಿನ್ನೆಲೆ: ಸರ್ಕಾರ ಪರಿಹಾರ ನೀಡುವಂತೆ ಒತ್ತಾಯ

KannadaprabhaNewsNetwork | Published : Apr 6, 2024 12:52 AM

ಸಾರಾಂಶ

ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಕರೆಗೆ ಕನಿಷ್ಟ 25 ಸಾವಿರ ರು.ಪರಿಹಾರ ಕೊಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಒತ್ತಾಯಿಸಿದರು.

ಕನ್ನಡಪ್ರಭವಾರ್ತೆ ಕೊಳ್ಳೇಗಾಲ

ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಕರೆಗೆ ಕನಿಷ್ಟ 25 ಸಾವಿರ ರು.ಪರಿಹಾರ ಕೊಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಒತ್ತಾಯಿಸಿದರು.ದೇವಲ ಮಹರ್ಷಿ ವೃತ್ತದಲ್ಲಿ ಸೇರಿದ ರೈತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬಸ್ ನಿಲ್ದಾಣ ರಸ್ತೆ, ಡಾ.ರಾಜ್ ರಸ್ತೆ, ಡಾ.ಅಂಬೇಡ್ಕರ್ ರಸ್ತೆಗಳಲ್ಲಿ ಪ್ರತಿಭಟನೆ ಮೆರವಣಿಗೆ ಮಾಡಿ, ಎಡಿಬಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮಂಜುಳಾ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ವಿದ್ಯುತ್, ಮೇವು, ನೀರು ಮುಂತಾದ ಮೂಲಭೂತ ಸೌಕರ್ಯಗಳನ್ನು ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ಮಾಡಿ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯಿಂದ ಸಾವನ್ನಪ್ಪುತ್ತಿದ್ದು ಅದನ್ನು ತಪ್ಪಿಸಲು ಮೇವು, ನೀರನ್ನು ಪೂರೈಸಬೇಕು. ನಿಗದಿತ ಸಮಯಕ್ಕೆ ಪ್ರತಿ ದಿನ 7 ಗಂಟೆ ವಿದ್ಯುತ್ ನೀಡಬೇಕು. ಟಿ.ಸಿಗಳನ್ನು ಅಳವಡಿಸಬೇಕು. ಕಾಡು ಪ್ರಾಣಿಗಳ ಹಾವಳಿ ತಡೆಯಬೇಕು. ಇದರಿಂದ ಉಂಟಾದ ನಷ್ಟವನ್ನು ನೀಡಬೇಕು. ಅರಣ್ಯಕ್ಕೆ ಬೆಂಕಿ ಬಿದ್ದರೆ ಡಿಎಫ್‌ಓಗಳನ್ನೆ ಹೊಣೆಗಾರರನ್ನಾಗಿ ಮಾಡಬೇಕು. ಮಹದೇಶ್ವರ ಮತ್ತು ಬಿಳಗಿರಿರಂಗನ ಬೆಟ್ಟದ ಪ್ರದೇಶದಲ್ಲಿರುವ ಪೋಡುಗಳಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದರು.ಜಿಲ್ಲಾ ಖಜಾಂಚಿ ಅಂಬಳೆ ಶಿವಕುಮಾರ್, ಹನೂರು ತಾಲ್ಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ, ಜಿಲ್ಲಾ ಕಾರ್ಯದರ್ಶಿ ಮಂಚಹಳ್ಳಿ ಮಣಿಕಂಠ, ವಸಂತ ಕೊಳ್ಳೇಗಾಲ ಅಧ್ಯಕ್ಷ ವೀರಭದ್ರಸ್ವಾಮಿ, ಮುಳ್ಳೂರು ಬಸವಣ್ಣ, ಸ್ವಾಮಣ್ಣ, ಪಾಳ್ಯ ಸಿದ್ದರಾಜನಾಯಕ, ಕಡಬೂರು ಪುಟ್ಟರಾಜು, ಜಗದೀಶ್, ಎಂ.ಪಿ.ದೊಡ್ಡಿ ಶ್ರೀನಿವಾಸ್, ಚಿಕ್ಕರಾಜು, ಕುಣಗಳ್ಳಿ ಶಂಕರ, ವಡಕೆಹಳ್ಳ ಶಿವಮೂರ್ತಿ, ಅಂಬಳೆ ಪುಟ್ಟಸ್ವಾಮಿ ಮುಂತಾದವರಿದ್ದರು.

Share this article