ಬರದ ಬಗ್ಗೆ ವಿಶೇಷ ಅಧಿವೇಶನದಲ್ಲಿ ಪ್ರಸ್ತಾಪ

KannadaprabhaNewsNetwork |  
Published : Sep 21, 2026, 03:00 AM IST
 ಶಾಸಕರ ಗೃಹ ಕಚೇರಿಯಲ್ಲಿ ನಡೆದ ರೈತರ ಮತ್ತು ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಶೋಕ ಪಟ್ಟಣ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ರಾಮದುರ್ಗ ಮುಂಗಾರು ಮಳೆ ವಿಫಲತೆಯಿಂದ ತಾಲೂಕಿನಲ್ಲಿ ಭೀಕರ ಬರಗಾಲ ತಲೆದೋರಿದ್ದು, ಸರ್ಕಾರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿರುವುದು ನೋವಾಗಿದೆ. ಈ ವಾರದಲ್ಲಿ ಮೂರು ದಿನ ನಡೆಯುವ ವಿಶೇಷ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಬರ ಪೀಡಿತ ತಾಲೂಕು ಎಂದು ಘೋಷಿಸುವಂತೆ ಒತ್ತಾಯ ಮಾಡುತ್ತೇನೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಮದುರ್ಗ

ಮುಂಗಾರು ಮಳೆ ವಿಫಲತೆಯಿಂದ ತಾಲೂಕಿನಲ್ಲಿ ಭೀಕರ ಬರಗಾಲ ತಲೆದೋರಿದ್ದು, ಸರ್ಕಾರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿರುವುದು ನೋವಾಗಿದೆ. ಈ ವಾರದಲ್ಲಿ ಮೂರು ದಿನ ನಡೆಯುವ ವಿಶೇಷ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಬರ ಪೀಡಿತ ತಾಲೂಕು ಎಂದು ಘೋಷಿಸುವಂತೆ ಒತ್ತಾಯ ಮಾಡುತ್ತೇನೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಭರವಸೆ ನೀಡಿದರು.ಪಟ್ಟಣದ ಹೊರವಲಯದ ಸ್ವಗೃಹದಲ್ಲಿ ಭಾನುವಾರ ನಡೆದ ತಾಲೂಕಿನ ರೈತ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬರಗಾಲ ಘೋಷಣೆ ಹಾಗೂ ನೆನಗುದಿಗೆ ಬಿದ್ದಿರುವ ಏತ ನೀರಾವರಿ ಕುರಿತು ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಬರ ಪರಿಸ್ಥಿತಿ ಅವಲೋಕಿಸಿ ವರದಿ ಸಲ್ಲಿಸಿದರು. ತಾಲೂಕು ಬರ ಪೀಡಿತ ಎಂದು ಘೋಷಣೆ ಮಾಡಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಅಗತ್ಯ ಕ್ರಮ ಕೈಗೊಳ್ಳುವದಾಗಿ ತಿಳಿಸಿದ್ದಾರೆ. 10-15 ದಿನಗಳಲ್ಲಿ ಬರಪೀಡಿತ ತಾಲೂಕು ಎಂದು ಘೋಷಣೆಯಾಗದಿದ್ದರೆ, ನಿಮ್ಮೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇನೆ ಎಂದರು.ನೆನಗುದಿಗೆ ಬಿದ್ದಿದ್ದ ವೀರಭದ್ರೇಶ್ವರ ಏತ ನೀರಾವರಿ ಹಾಗೂ ಸಾಲಾಪೂರ ಬಸವೇಶ್ವರ ಏತ ನೀರಾವರಿ ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದ್ದು ಇದೇ ವರ್ಷ ಡಿಸೆಂಬರ್‌ ಅಂತ್ಯದೊಳಗೆ ಸಾಲಾಪೂರ ಏತ ನೀರಾವರಿ ಮುಕ್ತಾಯ ಮಾಡಿ ಪ್ರಾಯೋಗಿಕವಾಗಿ ನೀರು ಹರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.8 ವರ್ಷಗಳ ಹಿಂದೆ ಆರಂಭವಾಗಿರುವ ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಕಾಮಗಾರಿ ಗುತ್ತಿಗೆದಾರರ ನಿರ್ಲಕ್ಷದಿಂದ ವಿಳಂಬವಾಗಿದೆ. ಗುತ್ತಿಗೆದಾರರ ಬದಲಾವಣೆ ಮಾಡಿ ಟೆಂಡರ್ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಈ ಯೋಜನೆಯನ್ನು 2027ರ ಡಿಸೆಂಬರ್‌ ಅತ್ಯದೊಳಗೆ ಮುಕ್ತಾಯ ಮಾಡಿ ಪ್ರಾಯೋಗಿಕವವಾಗಿ ನೀರು ಹರಿಸುವ ಭರವಸೆ ವ್ಯಕ್ತಪಡಿಸಿದರು.ರೈತ ಮುಖಂಡರಾದ ಜಗದೀಶ ದೇವರಡ್ಡಿ, ಮಲ್ಲಿಕಾರ್ಜುನ ರಾಮದುರ್ಗ, ಸುರೇಶ ಪಾಟೀಲ, ಬಿ.ಎಸ್.ನಾಯಕ(ಬೀಡಕಿ) ಸೇರಿದಂತೆ ತಾಲೂಕಿನ ರೈತರು ಮತ್ತು ಮುಖಂಡರು ತಾಲೂಕಿನಲ್ಲಿ ಮುಂಗಾರು ಮಳೆಯ ಕೊರತೆಯಿಂದ ಭೀಕರ ಬರದ ಛಾಯೆ ಆವರಿಸಿದ್ದರೂ ರಾಮದುರ್ಗ ಬರಪೀಡಿತ ಎಂದು ಘೋಷಣೆ ಮಾಡಿಲ್ಲ. ಆದರೆ ಶೇ.75 ರಷ್ಟು ನೀರಾವರಿ ಪ್ರದೇಶ ಹೊಂದಿರುವ ತಾಲೂಕುಗಳು ಬರಪೀಡಿತ ತಾಲೂಕುಗಳಾಗಿ ಘೋಷಣೆಯಾಗಿವೆ. ಇದಕ್ಕೆ ತಾಲೂಕು ಆಡಳಿತವೇ ನೇರ ಹೊಣೆ ಎಂದು ಆಕ್ರೋಶ ಹೊರ ಹಾಕಿದರು.ಸಭೆಯಲ್ಲಿ ತಾಪಂ ಇಒ ಮಹ್ಮದ ಇಜಾನ ಸುಬೂರ, ಹೆಸ್ಕಾಂ ಕಾರ್ಯನಿವಾರ್ಹಕ ಅಭಿಯಂತರ ಆನಂದ ನಾಯಕ, ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಗಿರೀಶ ಮೇಟಿ, ಎಇಇ ಶ್ರೀನಿವಾಸ ಅರಿಷನಗೋಡಿ, ಬಿಇಓ ಸುರೇಂದ್ರ ಕಾಂಬಳೆ, ಹೆಸ್ಕಾಂ ಎಇಇ ಶಿವಪ್ರಸಾದ ಕರಡಿ, ಸಹಾಯಕ ಕೃಷಿ ನಿರ್ದೇಶಕ ಶ್ರೀನಾಥ ಚಿಮ್ಮಲಗಿ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಮತ್ತು ರೈತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುಭವ ಮಂಟಪ ನಿರ್ವಹಣೆ ಜೆಎಲ್‌ಎಂಗೆ ನೀಡಿ
500 ಜನ ಮಹಿಳೆಯರ ವಿಜೃಂಭಣೆಯ ಕುಂಭಮೇಳ