ಮಿಡ್ಲ್‌..ಸಿಎಂ ಜತೆ ಸಮಾಲೋಚನೆ ನಡೆಸಿ ಬರ ಪರಿಹಾರ

KannadaprabhaNewsNetwork |  
Published : Aug 16, 2026, 02:30 AM IST
15ಕೆಪಿಆರ್‌ಸಿಆರ್ 02:  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಶೇ.70 ಕ್ಕು ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಶೀಘ್ರವೇ ವರದಿಯನ್ನು ಸಲ್ಲಿಸಿ, ಸಿಎಂ ಜೊತೆ ಸಮಾಲೋಚನೆ ನಡೆಸಿ ರೈತರಿಗೆ ಬರ ಪರಿಹಾರ ಒದಗಿಸಲು ಕ್ರಮ ವಹಿಸುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರಂಸಿಂಗ್ ತಿಳಿಸಿದರು.

- ಸಚಿವ ಡಾ.ಅಜಯ್ ಧರಂಸಿಂಗ್ ಭರವಸೆ । ಕೇಂದ್ರ ಸರ್ಕಾರದ ಗಮನ ಸೆಳೆಯಲೂ ಯೋಜನೆ

ಕನ್ನಡಪ್ರಭ ವಾರ್ತೆ ರಾಯಚೂರು

ಜಿಲ್ಲೆಯಲ್ಲಿ ಶೇ.70 ಕ್ಕು ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಶೀಘ್ರವೇ ವರದಿಯನ್ನು ಸಲ್ಲಿಸಿ, ಸಿಎಂ ಜೊತೆ ಸಮಾಲೋಚನೆ ನಡೆಸಿ ರೈತರಿಗೆ ಬರ ಪರಿಹಾರ ಒದಗಿಸಲು ಕ್ರಮ ವಹಿಸುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರಂಸಿಂಗ್ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಪರ ಸಭೆಗಳನ್ನು ನಡೆಸುವುದಷ್ಟೇ ಅಲ್ಲದೆ ಕಳೆದ 8 ದಿನಗಳ ಹಿಂದೆ ರಾಯಚೂರು ಜಿಲ್ಲೆಯ ಪ್ರತಿಯೊಂದು ತಾಲೂಕಿಗೂ ಖುದ್ದಾಗಿ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ರೈತರು ಎದುರಿಸುತ್ತಿರುವ ಸಮಸ್ಯೆಗಳು, ಕಷ್ಟಗಳು ಮತ್ತು ಸಂಕಷ್ಟಗಳನ್ನು ಹತ್ತಿರದಿಂದ ಆಲಿಸಿ, ವರದಿಯನ್ನು ಸಿದ್ಧಪಡಿಸಲಾಗುತ್ತಿದೆ. ಕೂಡಲೇ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಅನುದಾನ ಹಂಚಿಕೆ ಮತ್ತು ಅಭಿವೃದ್ಧಿ: ಡಾ. ನಂಜುಂಡಪ್ಪ ವರದಿ ಹಾಗೂ ಪ್ರೊ.ಗೋವಿಂದರಾವ್ ಸಮಿತಿ ವರದಿಯ ಕಾಂಪ್ರಹೆನ್ಸಿವ್ ಕಾಂಪೊಸಿಟ್ ಡೆವಲಪ್ಮೆಂಟ್ ಇಂಡೆಕ್ಸ್ ಆಧಾರದ ಮೇಲೆಯೇ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅನುದಾನ ಹಂಚಿಕೆಯಾಗುತ್ತದೆ. ರಾಯಚೂರು ಜಿಲ್ಲೆಯ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ನೀಡಲಾಗಿದ್ದು, ಯಾವುದೇ ತಾರತಮ್ಯ ಮಾಡದೆ ರಾಯಚೂರು, ಕಲ್ಯಾಣ ಕರ್ನಾಟಕ ಹಾಗೂ ಇಡೀ ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಮಹಾತ್ವಕಾಂಕ್ಷಿ ಜಿಲ್ಲೆಗಳೆಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರದಿಂದ ಕಳೆದ ಕೆಲ ವರ್ಷಗಳಿಂದ ಸರಿಯಾಗಿ ಅನುದಾನ ಬಂದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ನಿಯೋಗ ಕರೆದೊಯ್ದುದ ನಂತರ ನವದೆಹಲಿಗೂ ತೆರಳಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.

ಡಾ.ನಂಜುಂಡಪ್ಪ ವರದಿ ಮೇಲೆ ಅನುದಾನ ಹಂಚಿಕೆ: ಡಾ.ನಂಜುಂಡಪ್ಪ ವರದಿಯ ಆಧಾರದ ಮೇಲೆ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಸಿಡಿಐ ಸೂಚ್ಯಂಕದಂತೆ ಅನುದಾನ ಹಂಚಿಕೆ ಮಾಡಲಾಗುತ್ತಿದೆ. ರಾಯಚೂರು ಹಾಗೂ ಕಲ್ಬುರ್ಗಿ ನಗರ ಮಟ್ಟದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೆಲವು ತಾಲೂಕುಗಳಿಗೆ ಅನುದಾನ ಹಂಚಿಕೆಯಲ್ಲಿ ವ್ಯತ್ಯಾಸವಾಗಿರುವುದು ಮತ್ತು ಅನ್ಯಾಯವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಪ್ರೊ.ಗೋವಿಂದರಾವ್ ಅವರ ವರದಿಯ ಉಲ್ಲೇಖಗಳನ್ನೂ ಪರಿಶೀಲಿಸಿ, ಗ್ರಾಮೀಣ ಹಾಗೂ ತಾಲೂಕು ಮಟ್ಟದ ಅಸಮತೋಲನವನ್ನು ಸರಿಪಡಿಸಲು ಸರ್ಕಾರಿ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

----

ಬಾಕ್ಸ್

ಕೇವಲ ಆರ್‌ ಎಸ್‌ ಎಸ್‌ಗಾಗಿ ಕಾನೂನು ಮಾಡಿಲ್ಲ

ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಮಾಡುವುದಕ್ಕಿಂತ ಪೂರ್ವದಲ್ಲಿ ಪರವಾನಿಗೆ ಪಡೆದುಕೊಳ್ಳುವುದಾಗಿ ಹೊಸ ಕಾನೂನು ಮಾಡಿದ್ದು ಇದು ಕೇವಲ ಆರ್‌ ಎಸ್‌ ಎಸ್‌ ಗಾಗಿ ಅಂತ ಮಾಡಿಲ್ಲ ಎಂದು ಸಚಿವ ಡಾ.ಅಜಯ್‌ ಧರ್ಮಸಿಂಗ್‌ ಸ್ಪಷ್ಟಪಡಿಸಿದರು.

ಯಾವುದೇ ಸಂಘ-ಸಂಸ್ಥೆಗಳು ಸಾರ್ವಜನಿಕವಾಗಿ ಕಾರ್ಯಕ್ರಮ ಮಾಡಬೇಕಾದರೆ ಪರವಾನಿಗೆ ಪಡೆಯಬೇಕು. ಈ ಸಂಘ ಆ ಸಂಘ ಅಂತ ಹೇಳುತ್ತಿಲ್ಲ ಸೇವಾದಳ ಸೇರಿ ಎಲ್ಲ ಖಾಸಗಿ ಎನ್‌ಜಿಒಗಳು, ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಡುವ ಕಾರ್ಯಕ್ರಮಗಳಿಗೆ ಪರವಾನಿಗೆ ಪಡಿಬೇಕು ಅಂತ ಹೇಳಿದ್ದೇವೆ ಎಂದರು. ಬಿಜೆಪಿಗರಿಗೆ ಮಾಡಲು ಬೇರೆ ಕೆಲಸವಿಲ್ಲ ಅದಕ್ಕಾಗಿಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡುವಂತೆಪಿ ಪಾದಯಾತ್ರೆಗೆ ಮುಂದಾಗಿದ್ದಾರೆ. ಕಾಂಗ್ರೆಸ್‌ ಸರ್ಕಾರ ಮಾಡಿರುವ ಕೆಲಸ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ, ಆ ಒಂದು ಕಾರಣಕ್ಕಾಗಿಯೇ ನಾಗೇಂದ್ರ ಅವರ ವಿಷಯವನ್ನು ಹಿಡಿದುಕೊಂಡಿದ್ದಾರೆ ಎಂದು ಟೀಕಿಸಿದರು. ಹಿರಿಯ ರಾಜಕಾರಣಿಯಾದ ಸಚಿವ ಜಮೀರ್ ಅಹಮದ್ ಅವರ ಆರೋಗ್ಯ ಸರಿಯಿಲ್ಲ, ವಿಜಯ ನಗರವೂ ದೂರ ಇರುವ ಕಾರಣಕ್ಕಾಗಿ ದ್ವಜಾರೋಹಣ ನಿರಾಕರಣೆ ಮಾಡಿರಬಹುದು,ಇದೀಗ ಜಿಲ್ಲೆಗೆ ಹೋಗಿ ಧ್ವಜಾರೋಹಣ ಮಾಡಿದ್ದಾರೆ ಎಂದು ಅವರು ಗುಟ್ಕಾ, ತಂಬಾಕು ರದ್ದು ಆದೇಶ ವಾಪಸ್ಸು ಪಡೆದಿರುವುದರ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.

---

15ಕೆಪಿಆರ್‌ಸಿಆರ್ 02: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ ಸಚಿವ ಡಾ.ಅಜಯ್‌ ಧರ್ಮಸಿಂಗ್ ಅವರನ್ನು ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶೀಪಾದಂಗಳವರು ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

-----------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರೈತರಿಂದ ಪ್ರತಿಭಟನೆ
ಮಂಡ್ಯ: ಜನಾಕರ್ಷಿಸಿದ ಒಂದು ಸಾವಿರ ಅಡಿ ತಿರಂಗಾ ಪ್ರದರ್ಶನ