ಮಾದಕ ದ್ರವ್ಯ ವ್ಯಸನ ತಡೆಗಟ್ಟುವಿಕೆ ಜಾಗೃತಿ ಜಾಥಾ

KannadaprabhaNewsNetwork |  
Published : Apr 15, 2025, 12:52 AM IST
ಮೂಲ್ಕಿಯಲ್ಲಿ ಮಾದಕ ದ್ರವ್ಯವ್ಯಸನ ತಡೆಗಟ್ಟುವಿಕೆ , ರಸ್ತೆ ಸುರಕ್ಷತೆ ಮತ್ತು ಜಾಗೃತಿ ಜಾಥಾ | Kannada Prabha

ಸಾರಾಂಶ

ಮೂಲ್ಕಿ ವಿಜಯಾ ಕಾಲೇಜಿನಲ್ಲಿ ಜರುಗಿದ ಮಾದಕ ದ್ರವ್ಯವ್ಯಸನ ತಡೆಗಟ್ಟುವಿಕೆ, ರಸ್ತೆ ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನ ಜಾಗೃತಿ ಜಾಥಾವನ್ನು ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಸಂಸ್ಥಾಪಕ ಡಾ. ಶಿವಕುಮಾರ್ ಕರ್ಜೆ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಮೂಲ್ಕಿ ವಿಜಯಾ ಕಾಲೇಜಿನಲ್ಲಿ ಜರುಗಿದ ಮಾದಕ ದ್ರವ್ಯವ್ಯಸನ ತಡೆಗಟ್ಟುವಿಕೆ, ರಸ್ತೆ ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನ ಜಾಗೃತಿ ಜಾಥಾವನ್ನು ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಸಂಸ್ಥಾಪಕ ಡಾ. ಶಿವಕುಮಾರ್ ಕರ್ಜೆ ಉದ್ಘಾಟಿಸಿದರು.

ಮೂಲ್ಕಿಯ ವಿಜಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್‌ಸಿಸಿ, ರೋವರ್ ಮತ್ತು ರೇಂಜರ್ಸ್ ಹಾಗೂ ರೆಡ್ ಕ್ರಾಸ್ ಘಟಕದ ಸಂಯುಕ್ತ ಆಶ್ರಯದಲ್ಲಿ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಕರ್ನಾಟಕ ದ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿಯ ವಿಜಯ ಕಾಲೇಜಿನ ಪ್ರಾಂಶುಪಾಲ ಪ್ರೊ. ವೆಂಕಟೇಶ ಭಟ್‌ ವಹಿಸಿದ್ದರು.

ಸಮಾರಂಭದಲ್ಲಿ, ಮುಖ್ಯಮಂತ್ರಿಗಳ ಪದಕ ಪುರಸ್ಕೃತ ಪಡುಬಿದ್ರಿ ಪೊಲೀಸ್ ಠಾಣೆ ಠಾಣಾಧಿಕಾರಿ ಪ್ರಸನ್ನ ಎಂ. ಮಾತನಾಡಿ, ಮಾದಕ ದ್ರವ್ಯ ವ್ಯಸನ ವಿದ್ಯಾರ್ಥಿಗಳ ಬದುಕಿಗೆ ಹೇಗೆ ಹಾನಿಕಾರಕ ಮತ್ತು ಅದರಿಂದ ವಿದ್ಯಾರ್ಥಿಗಳು ಹೇಗೆ ಹಾದಿ ತಪ್ಪುತ್ತಿದ್ದಾರೆ. ಮಾದಕ ದ್ರವ್ಯ ವ್ಯಸನವನ್ನು ತಡೆಗಟ್ಟುವ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ನೀಡಿದರು.

ಮೂಲ್ಕಿ ಪೊಲೀಸ್ ಠಾಣಾ ಉಪ ನಿರೀಕ್ಷಕಿ ಅನಿತಾ ಅವರು ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು.

ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯ ಅಧ್ಯಕ್ಷ ರಚನ್ ಸಾಲಿಯನ್, ರಾಗ್ ರಂಗ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ವಿಶ್ವಾಸ್ ವಿ ಅಮೀನ್ , ಪಡುಬಿದ್ರಿ ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?