ಮಾದಕ ವಸ್ತುಗಳ ಸೇವನೆಯಿಂದ ಜೀವನಕ್ಕೆ ಕುತ್ತು

KannadaprabhaNewsNetwork |  
Published : Jun 19, 2025, 11:50 PM ISTUpdated : Jun 19, 2025, 11:51 PM IST
19ುಲು1 | Kannada Prabha

ಸಾರಾಂಶ

ಶೇ. 70ರಷ್ಟು ಯುವ ಜನಾಂಗವು ಹಲವಾರು ದುಶ್ಚಟಗಳಿಗೆ ಮಾರುಹೋಗುತ್ತಿದ್ದು, ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವ್ಯಸನದಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಅವಶ್ಯಕವಾಗಿದೆ.

ಗಂಗಾವತಿ:

ನಗರದ ಕಿಷ್ಕಿಂದ ಪಿಯು ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಗಂಗಾವತಿ ನಗರ ಪೊಲೀಸ್ ಇಲಾಖೆ ವತಿಯಿಂದ ಮಾದಕ ವ್ಯಸನದ ಕುರಿತು ಜಾಗೃತಿ ಕಾರ್ಯಕ್ರಮ ಜರಗಿತು.

ಈ ವೇಳೆ ಜಿಲ್ಲಾ ಹೆಚ್ಚುವರಿ ಪೊಲೀಸ್ ಪೊಲೀಸ್ ಅಧೀಕ್ಷಕ ಹೇಮಂತಕುಮಾರ ಮಾತನಾಡಿ, ಶೇ. 70ರಷ್ಟು ಯುವ ಜನಾಂಗವು ಹಲವಾರು ದುಶ್ಚಟಗಳಿಗೆ ಮಾರುಹೋಗುತ್ತಿದ್ದು, ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವ್ಯಸನದಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಅವಶ್ಯಕವಾಗಿದೆ. ಅವುಗಳ ದಾಸರಾಗುತ್ತಿರುವ ಯುವಕರು ತಮಗೆ ಅರಿವಿಲ್ಲದೇಯೆ ಕಾನೂನು ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಮಾದಕ ವ್ಯಸನವು ವ್ಯಕ್ತಿಯನ್ನು ಮಾನಸಿಕ ಹಾಗೂ ದೈಹಿಕವಾಗಿ ಅಷ್ಟೇ ಅಲ್ಲದೇ ಅವನ ಜೀವನವನ್ನೇ ದುರಂತಕ್ಕೆ ತಳ್ಳುತ್ತದೆ ಎಂದರು.

ಡ್ರಗ್ಸ್, ಗಾಂಜಾ, ತಂಬಾಕು ಪದಾರ್ಥ, ಮದ್ಯಪಾನ ಸೇರಿದಂತೆ ಅನೇಕ ಮಾದಕ ವಸ್ತುಗಳು ಜೀವನವನ್ನೇ ಬಲಿ ತೆಗೆದುಕೊಳ್ಳುತ್ತವೆ ಎಂಬ ಉದಾಹರಣೆಗಳು ಸಾಕಷ್ಟಿವೆ. ವಿದ್ಯಾರ್ಥಿಗಳು ಉತ್ತಮ ಹವ್ಯಾಸ ಮೈಗೂಡಿಸಿಕೊಳ್ಳುವ ಮೂಲಕ ಆದರ್ಶಪ್ರಾಯರಾಗಬೇಕು ಎಂದು ಸಲಹೆ ನೀಡಿದರು.

ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ಮಾತನಾಡಿ, ವ್ಯಸನ ಮುಕ್ತ ಸಮಾಜ ನಿರ್ಮಿಸೋಣ. ಮಾದಕ ವ್ಯಸನಕ್ಕೆ ದಾಸರಾಗುತ್ತಿರುವ ಯುವಜನತೆ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡಿದ್ದಾರೆ. ಅವುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿತುಕೊಂಡು ಬೇರೆಯವರಿಗೂ ಜಾಗೃತಿ ಮೂಡಿಸಿ ವ್ಯಸನ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸಬೇಕೆಂದು ಕರೆ ನಿಡಿದರು.

ಪಿಐ ಪ್ರಕಾಶ ಮಾಳೆ, ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಮಾದಕ ವಸ್ತುಗಳ ಸೇವನೆ ಸೇರಿದಂತೆ ವಿವಿಧ ದುಶ್ಚಟಗಳಿಗೆ ದಾಸರಾಗಿ ಅದನ್ನು ಹಾಳು ಮಾಡಿಕೊಳ್ಳಬಾರದು ಎಂದು ತಿಳಿ ಹೇಳಿದರು.

ಎಲ್. ವೀರಭದ್ರ ರಾವ್, ಮುರಳಿ ಕೃಷ್ಣ, ಡಾ. ಈಶ್ವರ್ ಸವಡಿ ಉಪಸ್ಥಿತರಿದ್ದರು.

PREV

Recommended Stories

ರಾಮಚಂದ್ರಾಪುರ ಮಠದಲ್ಲಿ ಸಾಮೂಹಿಕ ಉತ್ಸರ್ಜನ, ಉಪಾಕರ್ಮ
ಮಳೆ ಮಾಪನ ಯಂತ್ರವೊಂದೇ ಬೆಳೆ ವಿಮೆಗೆ ಆಧಾರ ಎಂಬುದು ಸರಿಯಲ್ಲ: ಶಿವರಾಮ ಹೆಬ್ಬಾರ