ಕನ್ನಡಪ್ರಭ ವಾರ್ತೆ ಮಂಗಳೂರು
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾದಕ ದ್ರವ್ಯ ಸಮನ್ವಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ದುರುಪಯೋಗವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಲು ಈ ಸಮಿತಿ ರಚಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಹಂತದಲ್ಲಿ ನಡೆಯುವ ತಪಾಸಣೆ ಮತ್ತು ಪರಿಶೀಲನೆಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಿ, ವರದಿ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.ಮಾದಕ ದ್ರವ್ಯಗಳ ಅಪಾಯ ಮತ್ತು ದಂಡನೆಗಳ ಕುರಿತು ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ಸಹಕಾರ ಪಡೆದು ಅರಿವು ಮೂಡಿಸಬೇಕು. ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸಿ ತಾಣಗಳಲ್ಲಿ ಮಾದಕ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಮಾತನಾಡಿ, ಜಿಲ್ಲಾ ಮಟ್ಟದ ಸಮಿತಿಯಲ್ಲಿರುವ ಇಲಾಖೆಗಳು ತಮ್ಮ ವ್ಯಾಪ್ತಿಯ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಗತ್ಯ ನೆರವು ನೀಡಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.