
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲೆಯಾದ್ಯಂತಲಿನ 200 ಕ್ಕೂ ಅಧಿಕ ಔಷಧಿ ಅಂಗಡಿಗಳು ಬುಧವಾರ ವ್ಯಾಪಾರ ಸ್ಥಗಿತಗೊಳಿಸಿದ್ದವು. ಬಂದ್ ಗೆ ಸಹಕಾರ ನೀಡಿದ ಗ್ರಾಹಕರಿಗೆ ಸಂಘದ ವತಿಯಿಂದ ಧನ್ಯವಾದ ಸಲ್ಲಿಸುವುದಾಗಿ ಸಂಘದ ಜಿಲ್ಲಾಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ವತಿಯಿಂದ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹೆಚ್ ಹಾದಿಮನಿ ಸಂಘದಿಂದ ನೀಡಲಾದ ಮನವಿ ಪತ್ರವನ್ನು ಸ್ವೀಕರಿಸಿದರು. ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಜೀವನ್ ಕುಶಾಲಪ್ಪ, ಜಂಟಿ ಕಾರ್ಯದರ್ಶಿ ವಸಂತ್ ಕುಮಾರ್, ಉಪಾಧ್ಯಕ್ಷ ಎ.ಕೆ. ವಿನೋದ್ , ಖಜಾಂಜಿ ಪ್ರಸಾದ್ ಗೌಡ ಹಾಜರಿದ್ದರು.ಆನ್‌ಲೈನ್‌ನಲ್ಲಿ ಔಷಧಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿಬೇಕು. ಆನ್ ಲೈನ್ ಔಷಧಿಗಳಿಂದ ಜನರ ಆರೋಗ್ಯಕ್ಕೆ ಸಮಸ್ಯೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಗ್ರಾಹಕರ ಹಿತರಕ್ಷಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಂಘದ ಬೇಡಿಕೆಗೆ ತುತು೯ ಸ್ಪಂದಿಸುವಂತೆಯೂ ಸಂಘದ ಪ್ರಮುಖರು ಮನವಿಯಲ್ಲಿ ಕೋರಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಬುಧವಾರ ಮೆಡಿಕಲ್ ಗಳು ಬಂದ್ ಆಗಿದ್ದ ಹಿನ್ನೆಲೆಯಲ್ಲಿ ಗ್ರಾಹಕರು ಪರದಾಡಿದರು. ಇದರಿಂದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳಿಗೆ ತೆರಳಿ ಗ್ರಾಹಕರು ಔಷಧಿಗಳನ್ನು ಖರೀದಿಸಿದರು.