ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ಅಂತರ್ ರಾಜ್ಯ ಆರೋಪಿಗಳ ಸೆರೆ

KannadaprabhaNewsNetwork |  
Published : Oct 06, 2024, 01:23 AM IST
ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಅಂತರ್ ರಾಜ್ಯ ಆರೋಪಿಗಳ ಸೆರೆ | Kannada Prabha

ಸಾರಾಂಶ

ಆರೋಪಿಗಳು ಕೇರಳ ರಾಜ್ಯದವರಾಗಿದ್ದು, ಪ್ರಸ್ತುತ ಮಂಗಳೂರು ನಗರದ ಹೊರವಲಯದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕನ್ನಡಪ್ರಭ ವಾರ್ತೆ ಮೂಲ್ಕಿ

ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್‌ಎಸ್‌ಡಿ ಮಾದಕ ವಸ್ತುವನ್ನು ಸಾಗಾಟ ಮತ್ತು ಮಾರಾಟ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮಾದಕವಸ್ತು ಮತ್ತು ಕಾರನ್ನು ಸ್ವಾಧೀನಪಡಸಿಕೊಂಡಿದ್ದಾರೆ. ಕೇರಳ ರಾಜ್ಯದ, ಮಂಗಳೂರು ಹೊರವಲಯ ಕಾಲೇಜೊಂದರ ವಿದ್ಯಾರ್ಥಿಗಳು ಬಂಧಿತರು.

ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಮಾದಕವಸ್ತು ಎಲ್‌ಎಸ್‌ಡಿಯನ್ನು ತಮ್ಮಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಕಾರಿನಲ್ಲಿ ಸುತ್ತಾಡುತ್ತಿದ್ದಾರೆಂದು ಖಚಿತ ಮಾಹಿತಿ ಮೇರೆಗೆ ಮೂಲ್ಕಿ ಪೊಲೀಸ್‌ ಠಾಣೆಯ ಉಪನಿರೀಕ್ಷಕಿ ಅನಿತಾ ಎಚ್‌..ಬಿ. ಮತ್ತು ಸಿಬ್ಬಂದಿ ದಾಳಿ ನಡೆಸಿದರು.

ಶನಿವಾರ ಬೆಳಗ್ಗೆ 9.15ರ ಸುಮಾರಿಗೆ ಹಳೆಯಂಗಡಿ ಗ್ರಾಮದ ಕೊಪ್ಪಳ ಸೇತುವೆ ಬಳಿ ಆರೋಪಿಗಳನ್ನು ಬಂಧಿಸಿ, ಅವರಲ್ಲಿದ್ದ ಸುಮಾರು ೭೮ ಸಾವಿರ ರು. ಮೌಲ್ಯದ ೨೬ ಎಲ್‌ಎಸ್‌ಡಿ ಸ್ಟಾರ್ ಸ್ಟ್ರಿಪ್ಸ್ ಮಾದಕ ವಸ್ತು ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಕಾರನ್ನು ವಶಪಡಿಸಿಕೊಂಡರು.

ಆರೋಪಿಗಳು ಕೇರಳ ರಾಜ್ಯದವರಾಗಿದ್ದು, ಪ್ರಸ್ತುತ ಮಂಗಳೂರು ನಗರದ ಹೊರವಲಯದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮೂಲ್ಕಿ ಠಾಣೆ ಉಪ ನಿರೀಕ್ಷಕಿ ಅನಿತಾ ಎಚ್.ಬಿ. ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎ.ಎಸ್.ಐ ಉಮೇಶ್, ಎಚ್.ಸಿ. ಚಂದ್ರಶೇಖರ್, ಯೋಗೀಶ್, ಪೇದೆಗಳಾದ ವಿನಾಯಕ, ಸುನಿಲ್ ಟಿ. ಪಡನಡ, ಶಂಕರ ಜಡೇದರ್, ಬಸವರಾಜ್, ಸಂದೀಪ್ ಮತ್ತು ಮೊಹಮ್ಮದ್ ಶಾದಾಬ್ ಹಾಗೂ ಮಂಗಳೂರು ನಗರ ಉತ್ತರ ಉಪ ವಿಭಾಗದ ಆ್ಯಂಟಿ ಡ್ರಗ್‌ ಸ್ಕ್ವಾಡ್‌ನ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!