ಆಹಾರ ಪೊಟ್ಟಣ, ಲಗೇಜ್‌ನಲ್ಲಿದ್ದ3.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

KannadaprabhaNewsNetwork |  
Published : Feb 24, 2026, 03:00 AM IST
ಅತ್ಯಾಚಾರ | Kannada Prabha

ಸಾರಾಂಶ

ವಿದೇಶದಿಂದ ಆಹಾರ ಪೊಟ್ಟಣ ಹಾಗೂ ಲಗೇಜ್ ಬ್ಯಾಗ್‌ಗಳಲ್ಲಿ ಡ್ರಗ್ಸ್ ಕಳ್ಳ ಸಾಗಾಣಿಕೆಗೆ ಯತ್ನಿಸಿದ್ದ ಮೂವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕವಾಗಿ ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಿದೇಶದಿಂದ ಆಹಾರ ಪೊಟ್ಟಣ ಹಾಗೂ ಲಗೇಜ್ ಬ್ಯಾಗ್‌ಗಳಲ್ಲಿ ಡ್ರಗ್ಸ್ ಕಳ್ಳ ಸಾಗಾಣಿಕೆಗೆ ಯತ್ನಿಸಿದ್ದ ಮೂವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕವಾಗಿ ಬಂಧಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಕಸ್ಟಮ್ಸ್ ಅಧಿಕಾರಿಗಳು ಈ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳಿಂದ ಪ್ರತ್ಯೇಕವಾಗಿ ಒಟ್ಟು ₹3.8 ಕೋಟಿ ಮೌಲ್ಯದ 11 ಕೆಜಿ ಹೈಡ್ರೋ ಗಾಂಜಾವನ್ನು ಜಪ್ತಿ ಮಾಡಲಾಗಿದೆ ಎಂದು ಕಸ್ಟಮ್ಸ್ ಪ್ರಕಟಣೆಯಲ್ಲಿ ಹೇಳಿದೆ.

ಬ್ಯಾಕಾಂಕ್‌ನಿಂದ ಕೆಐಎಗೆ ಸೋಮವಾರ ಬಂದಳಿದ ಪೆಡ್ಲರ್‌ನ್ನು ಬಂಧಿಸಲಾಯಿತು. ಆತನ ಬಳಿ ಆಹಾರ ಪೊಟ್ಟಣಗಳಲ್ಲಿ ತುಂಬಿದ್ದ ₹63 ಲಕ್ಷ ಮೌಲ್ಯದ 1.8 ಕೆಜಿ ಹೈಡ್ರೋ ಗಾಂಜಾ ಜಪ್ತಿಯಾಗಿದೆ. ಅದೇ ರೀತಿ ಭಾನುವಾರ ಮತ್ತೊಬ್ಬನ ಲಗೇಜ್ ಬ್ಯಾಗ್‌ನಲ್ಲಿ ₹31.65 ಲಕ್ಷ ಬೆಲೆಯ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬ್ಯಾಕಾಂಕ್‌ನಿಂದ ಕೆಐಎಗೆ ಭಾನುವಾರ ಬಂದಿಳಿದ ಪ್ರಯಾಣಿಕನನ್ನು ಶಂಕೆ ಮೇರೆಗೆ ವಶಕ್ಕೆ ಪಡೆದು ತಪಾಸಣೆ ನಡೆಸಲಾಯಿತು. ಆಗ ಆತನ ಬ್ಯಾಗ್‌ಗಳಲ್ಲಿ ಅಡಗಿಸಿಟ್ಟಿದ್ದ ₹2.8 ಕೋಟಿ ಬೆಲೆಯ 8 ಕೆಜಿ ಹೈಡ್ರೋ ಗಾಂಜಾ ಜಪ್ತಿಯಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಆಂಗ್ಲ ಶಾಲೇಲಿ ಕಲಿತ 30,000 ಮಕ್ಕಳು ಅತಂತ್ರ!
ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ದರೆ ಹೊಸದಾಗಿ ಅರ್ಜಿ ಹಾಕಿ: ಸರ್ಕಾರ