ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಅವರು ಶುಕ್ರವಾರ ಇಲ್ಲಿನ ನಾರಾಯಣಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿ.ಪಂ., ಬ್ರಹ್ಮಾವರ ತಾಲೂಕು ಆಡಳಿತ ಹಾಗೂ ತಾ.ಪಂ. ಸಹಯೋಗದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರವು ಪ್ರತೀ ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಮಾಡುವಂತೆ ತಿಳಿಸಿದ್ದು, ಅಧಿಕಾರಿಗಳೇ ಜನರ ಬಳಿ ತೆರಳಿ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳುವುದು ಇದರ ಉದ್ದೇಶವಾಗಿದ್ದು, ಸಾರ್ವಜನಿಕರ ಖಾತೆ ಬದಲಾವಣೆ, ಹಕ್ಕುಪತ್ರ ವಿತರಣೆ, ಪ್ರಮಾಣ ಪತ್ರ ಇತ್ಯಾದಿ ಸಮಸ್ಯೆಗಳಿಗೆ ಅಧಿಕಾರಿಗಳ ನೇತೃತ್ವದಲ್ಲಿ ತಕ್ಷಣವೇ ಸ್ಪಂದಿಸಬೇಕು ಎಂದರು.ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಜನರ ಮನೆ ಬಾಗಿಲಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ತಿಳಿಸಿದರು.
ಈ ಸಂದರ್ಭ ಕಳೆದ ಸಾಲಿನಲ್ಲಿ ಬ್ರಹ್ಮಾವರ ವಲಯದ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಧನೆಗೈದ ಸಹನಾ, ಸನಿತಾ, ಅಮೃತ ಅಡಿಗ ಹಾಗೂ ಧರಿತ್ರಿ ಕಾಮತ್‌ಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಬಸ್ ಸೌಲಭ್ಯ, ಪ್ರಾ.ಆ. ಕೇಂದ್ರಕ್ಕೆ ಶುಶ್ರೂಷಕಿಯರ ಕೊರತೆ, ವಿದ್ಯುತ್ ಸಂಪರ್ಕ ವಿಳಂಬ, ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕುರಿತು, ರಸ್ತೆ ದುರಸ್ತಿ, ಸರ್ಕಾರಿ ಸ್ಥಳ ಅತಿಕ್ರಮಣ, ಕಟ್ಟಡಗಳ ಸಕ್ರಮ, ಪ್ಲಾಟಿಂಗ್ ಕಾರ್ಯ ಖಾತೆ ಬದಲಾವಣೆ, 94 ಸಿಯಲ್ಲಿ ಹಕ್ಕುಪತ್ರ, ಪಹಣಿ ತಿದ್ದುಪಡಿ, ನೀರಿನ ಸೌಲಭ್ಯ, ಸೇರಿದಂತೆ ಸುಮಾರು 91 ಅಹವಾಲುಗಳು ಸಲ್ಲಿಕೆಯಾಗಿದ್ದವು.