ಈಡೀಸ್ ಸೊಳ್ಳೆ ಉತ್ಪತ್ತಿತಾಣಗಳನ್ನು ನಾಶಪಡಿಸುವ ಡ್ರೈಡೇ ಆಚರಣೆ

KannadaprabhaNewsNetwork |  
Published : Aug 07, 2024, 01:11 AM IST
ಡ್ರೈಡೇ6 | Kannada Prabha

ಸಾರಾಂಶ

ಕೆಳಾರ್ಕಳಬೆಟ್ಟು, ಗೋಪಾಲಪುರಗಳಲ್ಲಿ ಈಡೀಸ್ ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶ ಮಾಡುವ ಒಣಗಲು ದಿನ (ಡ್ರೈ ಡೇ) ಆಚರಣೆ ನಡೆಯಿತು. ಈ ಸಂದರ್ಭ ಲಾರ್ವಾ ತಾಣಗಳ ಸಮೀಕ್ಷೆ ನಡೆಸಿ, ಲಾರ್ವಾ ತಾಣಗಳ ನಿರ್ಮೂಲನೆ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲಾಡಳಿತ ಹಾಗೂ ರೋಟರಿ ಕ್ಲಬ್ ಕಲ್ಯಾಣಪುರ ಆಶ್ರಯದಲ್ಲಿ ಕೆಳಾರ್ಕಳಬೆಟ್ಟು, ಗೋಪಾಲಪುರಗಳಲ್ಲಿ ಈಡೀಸ್ ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶ ಮಾಡುವ ಒಣಗಲು ದಿನ (ಡ್ರೈ ಡೇ) ಆಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಹಾಗೂ ಜಿಲ್ಲೆಯ ನೋಡಲ್ ಅಧಿಕಾರಿ ಡಾ. ಸುರೇಶ್ ಶಾಸ್ತ್ರಿ ಮಾತನಾಡಿ, ಡೆಂಘೀ ವೈರಸ್‌ನಿಂದ ಉಂಟಾಗುವ ಕಾಯಿಲೆಯಾಗಿದ್ದು, ಇದು ಹಗಲು ಹೊತ್ತು ಕಚ್ಚುವ ಈಡೀಸ್ ಸೊಳ್ಳೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಜ್ವರ ಬಂದಲ್ಲಿ ಶೀಘ್ರ ಪತ್ತೆ ಮಾಡಿ ಸಂಪೂರ್ಣ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

ಕೆಎಂಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಆಶ್ವಿನ್ ಕುಮಾರ್ ಮಾತನಾಡಿ, ಪರಿಸರದ ಸ್ವಚ್ಛತೆಯನ್ನು ಕಾಪಾಡುವುದರೊಂದಿಗೆ ಎಲ್ಲೆಂದರಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಸೊಳ್ಳೆಗಳ ನಿಯಂತ್ರಣ ಮಾಡಿದಲ್ಲಿ ಮಾತ್ರ ಡೆಂಘೀ ಜ್ವರದ ಹತೋಟಿ ಸುಲಭ ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ. ಗಡಾದ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಪೌರಾಯುಕ್ತ ರಾಯಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವಿಜಯ, ಕಲ್ಯಾಣಪುರದ ರೋಟರಿ ಕ್ಲಬ್ ಅಧ್ಯಕ್ಷ ಬ್ಯಾಪ್ಟಿಸ್ಟ್ ಡಯಾಸ್, ಉಡುಪಿ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಾತ್ವಿಕ್, ರೈನಾ ಅಪಾರ್ಟ್ಮೆಂಟ್‌ ಮುಖ್ಯಸ್ಥರು, ವಿದ್ಯಾರತ್ನ ನರ್ಸಿಂಗ್ ಕಾಲೇಜು ಹಾಗೂ ನ್ಯೂಸಿಟಿ ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿನಯ ಕುಮಾರ್ ಕಬ್ಯಾಡಿ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭ ಲಾರ್ವಾ ತಾಣಗಳ ಸಮೀಕ್ಷೆ ನಡೆಸಿ, ಲಾರ್ವಾ ತಾಣಗಳ ನಿರ್ಮೂಲನೆ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು.

PREV

Recommended Stories

ಬಿಡಿಸಿಸಿ ಬ್ಯಾಂಕ್‌ ಚುನಾವಣೆಗೆ ಶ್ರೀಕಾಂತ ಸ್ಪರ್ಧೆ
ಮೂಡಲಗಿ ಬ್ಯಾಂಕ್‌ನ 3 ಶಾಖೆಗಳು ಪ್ರಗತಿ ಪಥದತ್ತ