ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕಳೆದ 12 ವರ್ಷಗಳಿಂದ ವಿರೋಧ ಪಕ್ಷಗಳ ಜನಪ್ರತಿನಿಧಿಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ನಾಯಕರ ಮೇಲೆ ನಿರಂತರವಾಗಿ ಇಡಿ, ಐಟಿ ಹಾಗೂ ಸಿಬಿಐ ದಾಳಿಗಳನ್ನು ನಡೆಸಲಾಗುತ್ತಿದ್ದು, ಅವರ ರಾಜಕೀಯ ನೈತಿಕತೆಯನ್ನು ಕುಗ್ಗಿಸುವ ಯತ್ನ ಮಾಡಲಾತ್ತಿದೆ ಎಂದು ಆರೋಪಿಸಿದರು.
ಕೇಂದ್ರದ ತನಿಖಾ ಸಂಸ್ಥೆಗಳ ದುರುಪಯೋಗದ ಮೂಲಕ ವಿಪಕ್ಷಗಳ ನಾಯಕರನ್ನು ಹೆದರಿಸಿ ಹಾಗೂ ಇತರೆ ರಾಜಕೀಯ ತಂತ್ರಗಳಿಂದ ಹಲವು ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಿ ಅಧಿಕಾರ ಹಿಡಿಯಲಾಗುತ್ತಿದೆ. ಇತ್ತೀಚೆಗೆ ರಾಜ್ಯದಲ್ಲಿ ದಲಿತ ಸಮುದಾಯದ ಸಚಿವರುಗಳ ಮೇಲೆ ನಡೆದ ಇಡಿ ದಾಳಿಯು ರಾಜಕೀಯ ಪ್ರೇರಿತವಾಗಿದೆ ಎಂದು ಸಮಿತಿಯೂ ತೀವ್ರವಾಗಿ ಖಂಡಿಸಿದರು.ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆ ಹಾಗೂ ಸರ್ಕಾರದ ಪಾರದರ್ಶಕತೆಯನ್ನು ತಕ್ಷಣವೇ ಕಾಪಾಡಬೇಕು. ಮತದಾರರ ಪಟ್ಟಿ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯಲ್ಲಿ ಪ್ರಜಾಪ್ರಭುತ್ವ ವಿರೋಧಿ ಧೋರಣೆ ತೋರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ ಕುಮಾರ್ ಅವರು ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆ ನೇತೃತ್ವವನ್ನು ಸಮಿತಿಯ ರಾಜ್ಯ ಸಂಚಾಲಕರಾದ ಶಾಮರಾವ್ ಘಾಟಗೆ, ಬೆಳಗಾವಿ ವಿಭಾಗೀಯ ಸಂಚಾಲಕ ಹಣಮಂತ ಚಿಮ್ಮಲಗಿ, ಬಾಗಲಕೋಟೆ ಜಿಲ್ಲಾ ಸಂಘಟನಾ ಸಂಚಾಲಕರಾದ ಆನಂದ ದೊಡ್ಡಮನಿ, ಸಂಗಣ್ಣ ಮಡ್ಡಿ, ಚಂದ್ರು ಹರಿಜನ, ಕೃಷ್ಣಾ ನಾಯ್ಕರ, ಲಕ್ಷ್ಮಣ ಹರಿಜನ ಹಾಗೂ ಸಮಿತಿಯ ವಿವಿಧ ಪದಾಧಿಕಾರಿಗಳು ಮತ್ತು ತಾಲೂಕು ಸಂಚಾಲಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.