- ರಾಜ್ಯವ್ಯಾಪಿ ಏಕಕಾಲಕ್ಕೆ ಆಯೋಜನೆ: ಮುಖಂಡ ಕುಂದುವಾಡ ಮಂಜುನಾಥ ಮಾಹಿತಿ
ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯಕ್ಕೆ ಅಧಿಕಾರವಿದೆ ಎಂಬ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪಿನ ಹಿನ್ನೆಲೆ ಒಳಮೀಸಲಾತಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಸೆ.12ರಂದು ಏಕಕಾಲಕ್ಕೆ ಬೃಹತ್ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಬೃಹತ್ ತಮಟೆ ಚಳವಳಿಯ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಒಳಮೀಸಲಾತಿ ನೀಡುವ ಅಧಿಕಾರ ಆಯಾ ರಾಜ್ಯ ಸರ್ಕಾರಕ್ಕೆ ಇದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದು ಸ್ವಾಗತಾರ್ಹವಾಗಿದೆ. ಈ ತೀರ್ಪನ್ನು ರಾಜ್ಯ ಸರ್ಕಾರ ತಕ್ಷಣೇ ಅನುಷ್ಠಾನಗೊಳಿಸುವ ಮೂಲಕ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡಬೇಕು ಎಂದರು.ಎಲ್ಲ ಗೊಂದಲ ಪರಿಹಾರ:
ರಾಜ್ಯ ಸರ್ಕಾರ ತೀರ್ಪಿನಂತೆ ನಡೆಯಲಿ:
ಸಮಿತಿಯ ದಾವಣಗೆರೆ ತಾಲೂಕು ಸಂಚಾಲಕ ಹನುಮಂತಪ್ಪ ಅಣಜಿ, ಹರಿಹರ ಸಂಚಾಲಕ ಪಿ.ಜೆ. ಮಹಾಂತೇಶ, ಜಿಲ್ಲಾ ಸಂಘಟನಾ ಸಂಚಾಲಕರಾದ ಮಹಾಂತೇಶ ಹಾಲುವರ್ತಿ, ಆರ್.ಮಂಜುನಾಥ, ಲಕ್ಷ್ಮಣ ಕೊಡಗನೂರು, ಕೆಂಚಪ್ಪ, ಹನುಮಂತಪ್ಪ ಗಂಗನಕಟ್ಟೆ, ತಾಲೂಕು ಸಂಘಟನಾ ಸಂಚಾಲಕರಾದ ನಾಗರಾಜ ಬಿ.ಚಿತ್ತಾನಹಳ್ಳಿ, ನಗರ ಸಂಚಾಲಕ ಎಸ್.ಎಂ.ಶಿವಶಂಕರ, ಸ್ಲಂ ಸಂಚಾಲಕ ನಾಗರಾಜ ಆನೆಕೊಂಡ ಇತರರು ಇದ್ದರು.
ಬಾಕ್ಸ್ * ರಾಯಣ್ಣ ವೃತ್ತದಿಂದ ಡಿಸಿ ಕಚೇರಿಗೆ ಚಳವಳಿ
ದಾವಣಗೆರೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಹಳೆ ಪಿ.ಬಿ. ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಡಿಎಸ್‌ಎಸ್ ನೇತೃತ್ವದಲ್ಲಿ ಸೆ.12ರಂದು ಬೆಳಗ್ಗೆ 11 ಗಂಟೆಯಿಂದ ಬೃಹತ್ ತಮಟೆ ಚಳವಳಿ ಕೈಗೊಳ್ಳಲಾಗಿದೆ. ಅಂದು ಡಿಎಸ್‌ಎಸ್ ನೇತೃತ್ವದಲ್ಲಿ ಮಾದಿಗ ಸಮಾಜ ಬಾಂಧವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ತಮಟೆ ಚಳವಳಿಯಲ್ಲಿ ಪಾಲ್ಗೊಳ್ಳುವ ಮೂಲಕ ಒಳಮೀಸಲಾತಿಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ, ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಿದ್ದಾರೆ ಎಂದು ಮಂಜುನಾಥ ತಿಳಿಸಿದರು.
ದಾವಣಗೆರೆ ಪ್ರವಾಸಿ ಮಂದಿರದಲ್ಲಿ ಒಳ ಮೀಸಲಾತಿಗಾಗಿ ಸೆ.12ರಂದು ಹಮ್ಮಿಕೊಂಡಿರುವ ಬೃಹತ್ ತಮಟೆ ಚಳವಳಿ ಕುರಿತ ಕರಪತ್ರ ಬಿಡುಗಡೆಗೊಳಿಸಲಾಯಿತು.